For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ ದಾಖಲೆ ಅಳಿಸಿ ಹಾಕಿದ ಟೀಮ್ ಇಂಡಿಯಾ

ಕೊಲಂಬೋದಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 61 ರನ್‌ಗಳಿಂದ ಮಣಿಸಿದ ಸೂರ್ಯಕುಮಾರ್ ಪಡೆ ಸೂಪರ್ 8 ಹಂತಕ್ಕೆ ಅರ್ಹತೆ ಪಡೆದಿದೆ. ಈ ಮೂಲಕ ಟೀಮ್ ಇಂಡಿಯಾ ಪ್ರಸಕ್ತ ಟಿ20 ಕ್ರಿಕೆಟ್‌ನ ಲೀಗ್‌ ಹಂತದ ಪಂದ್ಯದಲ್ಲಿ ಸತತ ಮೂರನೇ ಗೆಲುವು ದಾಖಲಿಸಿದೆ. ಭಾರತ ಎ ಗುಂಪಿನಲ್ಲಿ ಅಗ್ರ ಸ್ಥಾನದೊಂದಿಗೆ ಮುಂದಿನ ಹಂತಕ್ಕೆ ಪ್ರವೇಶ ಪಡೆದಿದೆ.

ಭಾರತ, ಪಾಕಿಸ್ತಾನ ತಂಡಗಳು ಕೊಲಂಬೊದಲ್ಲಿ ಭಾನುವಾರ ಟಿ20 ವಿಶ್ವಕಪ್‌ನ ಎ ಗುಂಪಿನಲ್ಲಿ ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 176 ರನ್‌ ಸೇರಿಸಿತು. ಈ ವೇಳೆ ಇಶಾನ್‌ ಕಿಶನ್‌ ಅಮೋಘ ಬ್ಯಾಟಿಂಗ್ ನಡೆಸಿ 40 ಎಸೆತಗಳಲ್ಲಿ 77 ರನ್ ಗಳಿಸಿದರು. ಸ್ಪರ್ಧಾತ್ಮಕ ಮೊತ್ತವನ್ನು ಹಿಂಬಾಲಿಸಿದ ಪಾಕಿಸ್ತಾನ 18 ಓವರ್‌ಗಳಲ್ಲಿ 114 ರನ್‌ ಸೇರಿಸಿ ಆಲೌಟ್ ಆಯಿತು. ಟೀಮ್ ಇಂಡಿಯಾ ಸ್ಟಾರ್ ಬೌಲರ್‌ಗಳು ಬಿಗುವಿನ ದಾಳಿ ನಡೆಸಿ ತಂಡಕ್ಕೆ ಆಧಾರವಾದರು. ಭಾರತದ ಪರ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್‌, ವರುಣ್ ಚಕ್ರವರ್ತಿ ತಲಾ 2 ವಿಕೆಟ್‌ ಕಬಳಿಸಿದರು.

India

ಐಸಿಸಿ ಈವೆಂಟ್‌ಗಳಲ್ಲಿ ಟೀಮ್ ಇಂಡಿಯಾ ಅತಿ ಹೆಚ್ಚು ಗೆಲುವು ದಾಖಲಿಸಿದ ತಂಡವಾಗಿದೆ. 2024ರ ಟಿ20 ವಿಶ್ವಕಪ್‌ ನಂತರ ಟೀಮ್ ಇಂಡಿಯಾ ಸತತ 16 ಪಂದ್ಯಗಳನ್ನು ಗೆದ್ದ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದೆ. ಟೀಮ್ ಇಂಡಿಯಾ 2024ರ ಟಿ20 ವಿಶ್ವಕಪ್‌, ಚಾಂಪಿಯನ್ಸ್ ಟ್ರೋಫಿ ಹಾಗೂ ಪ್ರಸಕ್ತ ಸಾಲಿನ ಪಂದ್ಯಗಳು ಸೇರಿವೆ. ಈ ಮೂಲಕ ಟೀಮ್ ಇಂಡಿಯಾ ಆಸ್ಟ್ರೇಲಿಯಾದ ದಾಖಲೆಯನ್ನು ಅಳಿಸಿ ಹಾಕಿದೆ. ಆಸ್ಟ್ರೇಲಿಯಾ 2006 ಮತ್ತು 2007ರಲ್ಲಿ ಆಸ್ಟ್ರೇಲಿಯಾ ಸತತ 15 ಐಸಿಸಿ ಟೂರ್ನಿಗಳಲ್ಲಿ ಜಯ ಸಾಧಿಸಿದೆ. ಇಷ್ಟೇ ಅಲ್ಲದೆ ಟೀಮ್ ಇಂಡಿಯಾ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಜಯವನ್ನು ಒಂದೇ ತಂಡದ ವಿರುದ್ಧ ದಾಖಲಿಸಿದ ದಾಖಲೆಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡ ಪಾಕಿಸ್ತಾನ ವಿರುದ್ಧ 8 ಪಂದ್ಯಗಳನ್ನು ಗೆದ್ದ ದಾಖಲೆ ಬರೆದಿದೆ.

ಮುಂದಿನ ಪಂದ್ಯದ ತಯಾರಿ

ಟೀಮ್ ಇಂಡಿಯಾ ಫೆ.18 ರಂದು ಮುಂದಿನ ಪಂದ್ಯದಲ್ಲಿ ನೆದರ್‌ಲ್ಯಾಂಡ್‌ ವಿರುದ್ಧ ಕಾದಾಟ ನಡೆಸಲಿದೆ. ಈ ಪಂದ್ಯಕ್ಕೆ ಅಹಮದಾಬಾದ್‌ನ ಅಂಗಳದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಆತ್ಮವಿಶ್ವಾಸದಿಂದ ಸೂಪರ್ 8 ಹಂತಕ್ಕೆ ತಲುಪುವ ಆಸೆ ಭಾರತ ತಂಡದ್ದಾಗಿದೆ.

Story first published: Monday, February 16, 2026, 23:38 [IST]
Other articles published on Feb 16, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+