ಈತನಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ನೀಡುವ ಅಗತ್ಯವಾದರೂ ಏನಿದೆ?; ಸಬಾ ಕರೀಮ್ ಕಿಡಿ

ಇತ್ತೀಚೆಗಷ್ಟೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ನ್ಯೂಜಿಲೆಂಡ್ ವಿರುದ್ಧ ಟಿ ಟ್ವೆಂಟಿ ಮತ್ತು ಟೆಸ್ಟ್ ಸರಣಿಗಳೆರಡರಲ್ಲಿಯೂ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ ಇದೀಗ ಮುಂದಿನ ಸರಣಿಗಳನ್ನು ಆಡಲು ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳುತ್ತಿದೆ.
ಹೀಗೆ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲಿರುವ ಟೀಮ್ ಇಂಡಿಯಾ ಮೊದಲಿಗೆ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದ್ದು, ನಂತರ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗವಹಿಸಲಿದೆ. ಡಿಸೆಂಬರ್ 26ರಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಚೊಚ್ಚಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಹೀಗಾಗಿ ಬಿಸಿಸಿಐ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲಿರುವ ಭಾರತ ಟೆಸ್ಟ್ ತಂಡವನ್ನು ಮೊದಲು ಪ್ರಕಟಿಸಿತು. ಹೌದು, 18 ಆಟಗಾರರನ್ನೊಳಗೊಂಡ ಟೆಸ್ಟ್ ತಂಡವನ್ನು ಪ್ರಕಟಿಸಿರುವ ಬಿಸಿಸಿಐ 2022ರ ಜನವರಿ 19ರಿಂದ ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಬೇಕಿದೆ. ಸದ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೂಲಕ ರೋಹಿತ್ ಶರ್ಮಾ ಭಾರತ ಏಕದಿನ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿದ್ದು, ತಂಡದಲ್ಲಿ ಭಾರೀ ಬದಲಾವಣೆಗಳಾಗಿವೆ. ಹೀಗೆ ದಕ್ಷಿಣ ಆಫ್ರಿಕಾ ಪ್ರವಾಸ ಟೀಮ್ ಇಂಡಿಯಾದಲ್ಲಿನ ಸಾಕಷ್ಟು ಬೆಳವಣಿಗೆಗಳಿಗೆ ಸಾಕ್ಷಿಯಾಗಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಯಾವ ಆಟಗಾರರಿಗೆ ಅವಕಾಶಗಳು ಸಿಗಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.
ಹೀಗೆ ನಡೆಯುತ್ತಿರುವ ಚರ್ಚೆಯಲ್ಲಿ ಕಳೆದ ಕೆಲ ತಿಂಗಳುಗಳಲ್ಲಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಭಾರತ ಏಕದಿನ ತಂಡದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದ ಆಟಗಾರರು ಪುನಃ ಸ್ಥಾನ ಪಡೆದುಕೊಳ್ಳಲಿದ್ದಾರಾ ಎಂಬ ವಿಷಯವೂ ಕೂಡ ಸೇರಿದೆ. ಅದರಲ್ಲಿಯೂ ಭಾರತದ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಶಿಖರ್ ಧವನ್ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೂಲಕ ಶ್ರೀಲಂಕಾ ಸರಣಿ ನಂತರ ಮತ್ತೊಮ್ಮೆ ಭಾರತ ಏಕದಿನ ತಂಡಕ್ಕೆ ಮರಳುವ ಸಾಧ್ಯತೆಗಳು ಹೆಚ್ಚಿವೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಚರ್ಚೆಯ ಕುರಿತಾಗಿ ಇದೀಗ ಭಾರತದ ಮಾಜಿ ಕ್ರಿಕೆಟಿಗ ಸಬಾ ಕರೀಮ್ ಪ್ರತಿಕ್ರಿಯಿಸಿದ್ದು, ಶಿಖರ್ ಧವನ್ ಅವರಿಗೆ ಭಾರತ ತಂಡದಲ್ಲಿ ಅವಕಾಶ ನೀಡುವುದರಲ್ಲಿ ಅರ್ಥವಿಲ್ಲ ಎಂದು ಈ ಕೆಳಕಂಡಂತೆ ಮಾತನಾಡಿದ್ದಾರೆ..

ಶಿಖರ್ ಧವನ್‌ಗೆ ಅವಕಾಶ ನೀಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದ ಸಬಾ ಕರೀಮ್
ಶಿಖರ್ ಧವನ್ ಅವರಿಗೆ ಭಾರತ ತಂಡದಲ್ಲಿ ಅವಕಾಶ ನೀಡುವುದರ ಕುರಿತು ಪ್ರತಿಕ್ರಿಯಿಸಿರುವ ಸಬಾ ಕರೀಮ್ "ಶಿಖರ್ ಧವನ್ ಅವರಿಗೆ ಭಾರತ ಏಕದಿನ ತಂಡದಲ್ಲಿ ಸ್ಥಾನ ನೀಡಿದರೂ ಸಹ ಆತನಿಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿದೆಯಾ? ಈಗಾಗಲೇ ಕೆ ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಜೋಡಿ ಟೆಸ್ಟ್ ಮತ್ತು ಟಿ ಟ್ವೆಂಟಿ ಪಂದ್ಯಗಳಲ್ಲಿ ಆರಂಭಿಕ ಆಟಗಾರರಾಗಿ ಕಣಕ್ಕಿಳಿದಿದ್ದು, ಏಕದಿನ ಪಂದ್ಯಗಳಲ್ಲಿಯೂ ಕೂಡ ಇದೇ ಜೋಡಿ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಹೀಗಾಗಿ ಶಿಖರ್ ಧವನ್ ಅವರನ್ನು ಆಯ್ಕೆ ಮಾಡಿ ಆಡುವ ಬಳಗದಲ್ಲಿ ಅವಕಾಶ ನೀಡದೇ ಇರುವುದರಲ್ಲಿ ಯಾವುದೇ ಅರ್ಥವಿಲ್ಲ" ಎಂದು ಹೇಳಿಕೆ ನೀಡಿದ್ದಾರೆ.

ಈ ಕಾರಣಕ್ಕೆ ಶಿಖರ್ ಧವನ್ ಅವರಿಗೆ ಅವಕಾಶ ಸಿಗಬಹುದು
ಇನ್ನೂ ಮುಂದುವರೆದು ಈ ವಿಷಯದ ಕುರಿತಾಗಿ ಮಾತನಾಡಿರುವ ಸಬಾ ಕರೀಮ್ "ಶಿಖರ್ ಧವನ್ ಎಡಗೈ ಆಟಗಾರ ಎಂಬುದು ಅವರಿಗೆ ಆಡುವ ಬಳಗದಲ್ಲಿ ಅವಕಾಶ ಸಿಗಲು ಇರುವ ಏಕೈಕ ಸಾಧ್ಯತೆ. ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಎಡಗೈ ಮತ್ತು ಬಲಗೈ ಕಾಂಬಿನೇಷನ್ ಇಲ್ಲಿ ಧವನ್ ಅವರಿಗೆ ಅವಕಾಶವನ್ನು ಒದಗಿಸಬಹುದು" ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಿಖರ್ ಧವನ್ ಅವರಿಗೆ ಮತ್ತೊಂದು ಅವಕಾಶ ನೀಡಬೇಕು
ಶಿಖರ್ ಧವನ್ ಅವರನ್ನು ಆಯ್ಕೆ ಮಾಡಿದರೂ ಸಹ ಆಡುವ ಬಳಗದಲ್ಲಿ ಅವಕಾಶ ನೀಡುವುದು ಅನುಮಾನ ಎಂದು ಹೇಳಿಕೆ ನೀಡಿರುವ ಸಬಾ ಕರೀಮ್ ಶಿಖರ್ ಧವನ್ ಅವರಿಗೆ ಮತ್ತೊಂದು ಅವಕಾಶ ನೀಡುವ ಅಗತ್ಯತೆ ಇದೆ ಎಂದೂ ಸಹ ಅಭಿಪ್ರಾಯಪಟ್ಟಿದ್ದಾರೆ. ಶಿಖರ್ ಧವನ್ ಸಾಕಷ್ಟು ಅನುಭವವನ್ನು ಹೊಂದಿರುವಂತಹ ಆಟಗಾರನಾಗಿರುವ ಕಾರಣ ಮತ್ತೊಂದು ಅವಕಾಶವನ್ನು ನೀಡಬೇಕಿದೆ ಎಂದು ಸಬಾ ಕರೀಮ್ ಹೇಳಿಕೆ ನೀಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications