ಕೀವಿಸ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಕೊಹ್ಲಿ ಆತ್ಮವಿಶ್ವಾಸದ ಮಾತು

ಏಕದಿನ ಸರಣಿಯನ್ನು ಟೀಮ್ ಇಂಡಿಯಾ 0-3 ಅಂತರದಿಂದ ನ್ಯೂಜಿಲೆಂಡ್ ತಂಡಕ್ಕೆ ಒಪ್ಪಿಸಿದ ಬಳಿಕ ಮತ್ತೊಂದು ಅಗ್ನಿಪರೀಕ್ಷೆಗೆ ಟೀಮ್ ಇಂಡಿಯಾ ಸಿದ್ಧವಾಗಿದೆ. ನ್ಯೂಜಿಲೆಂಡ್ ವಿರುದ್ಧ ಫೆಬ್ರವರಿ 21ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ.

ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು ವೆಲ್ಲಿಂಗ್ಟನ್‌ನಲ್ಲಿ ಮೊದಲ ಪಂದ್ಯ ನಡೆಯಲಿದೆ. ಕಳೆದ ಆರು ತಿಂಗಳಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಎಲ್ಲಾ ಸರಣಿಗಳಲ್ಲೂ ವಿಜಯವನ್ನು ಸಾಧಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದೆ. ಇದೇ ಪ್ರದರ್ಶನವನ್ನು ಟೀಮ್ ಇಂಡಿಯಾ ಕೀವಿಸ್ ನೆಲದಲ್ಲೂ ಮುಂದುವರಿಸುತ್ತಾ ಕಾದು ನೋಡಬೇಕಾಗಿದೆ.

'ಈ ಬಾರಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಗೆಲ್ಲಲ್ಲ'

ಏಕದಿನ ಸರಣಿ ಸೋತ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಒತ್ತಡದಲ್ಲಿದೆ. ಮತ್ತೊಂದೆಡೆ ನ್ಯೂಜಿಲೆಂಡ್‌ಗೆ ತವರು ನೆಲವಾದ ಕಾರಣ ಸಹಜವಾಗಿಯೇ ನ್ಯೂಜಿಲೆಂಡ್‌ಗೆ ಪೂರಕವಾದ ವಾತಾವರಣವಿರಲಿದೆ. ಆದರೆ ಟೀಮ್ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಟೀಮ್ ಇಂಡಿಯಾ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ತಮ್ಮ ಎಂದಿನ ಫಾರ್ಮ್‌ಅನ್ನು ಕಳೆದುಕೊಂಡಂತೆ ಕಂಡುಬಂದಿದ್ದರು. ನ್ಯೂಜಿಲೆಂಡ್ ವಿರುದ್ಧ ಆಡಿದ 7 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಗಳಿಸಿದ್ದು ಒಂದು ಅರ್ಧ ಶತಕ ಮಾತ್ರ. 45, 11, 38, 11, 51, 15 ಮತ್ತು 9 ರನ್‌ಗಳನ್ನು ಮಾತ್ರವೇ ಗಳಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಡೇ-ನೈಟ್ ಟೆಸ್ಟ್‌ ಪಂದ್ಯವನ್ನಾಡಲಿದೆ ಟೀಮ್ ಇಂಡಿಯಾ

ಟೀಮ್ ಇಂಡಿಯಾದ ಆಟಗಾರರ ಏಕಾಗ್ರತೆ ಮತ್ತು ದೈಹಿಕ ಸಾಮರ್ಥ್ಯದ ಕಾರಣಕ್ಕೆ ವಿಶ್ವದ ಯಾವ ತಂಡದ ವಿರುದ್ಧವೂ ಸ್ಫರ್ಧಿಸಲು ವಿಶ್ವಾಸವನ್ನು ತುಂಬುತ್ತದೆ. ಈ ವಿಶ್ವಾಸವನ್ನೇ ನ್ಯೂಜಿಲೆಂಡ್ ತಂಡದ ವಿರುದ್ಧದವೂ ಮುಂದುವರಿಸುತ್ತೇವೆ ಎಂಬ ಮಾತನ್ನು ವಿರಾಟ್ ಕೊಹ್ಲಿ ಹೇಳಿದ್ದಾರೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
 

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Wednesday, February 19, 2020, 17:38 [IST]
Other articles published on Feb 19, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X