WTC ಅಂಕಪಟ್ಟಿಯಲ್ಲಿ ಭಾರತ ಯಾವ ಸ್ಥಾನದಲ್ಲಿದೆ?
ಭಾರತ ಸದ್ಯ ಟೆಸ್ಟ್ ಪಂದ್ಯಗಳನ್ನು ಆಡುತ್ತಿಲ್ಲ. ಸೀಮಿತ ಓವರ್‌ಗಳ ಪಂದ್ಯಗಳನ್ನು ಆಡುತ್ತಿದೆ. ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಏಕದಿನ ಹಾಗೂ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್‌ಗೆ ತಯಾರಿ ನಡೆಸಲಿದೆ. ಆ ಬಳಿಕ ಸಾಲು ಸಾಲು ಸರಣಿಗಳಲ್ಲಿ ಭಾರತ ತಂಡ ಭಾಗವಹಿಸಲಿದೆ. ಈಗ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲಿ ಯಾವ ಸ್ಥಾನದಲ್ಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಮೆಲ್ಬೋರ್ನ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಅಮೋಘ ಪ್ರದರ್ಶನ ನೀಡಿ ಸರಣಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಸ್ಥಿರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ ನೀಡಿದ ಇಂಗ್ಲೆಂಡ್ 5 ಪಂದ್ಯಗಳ ಆಶಸ್ ಸರಣಿಯಲ್ಲಿ ಮೊದಲ ಗೆಲುವಿನ ನಗೆ ಬೀರಿದೆ. ಈ ಮೂಲಕ ಇಂಗ್ಲೆಂಡ್ 3-1 ರಿಂದ ಹಿನ್ನಡೆ ಅನುಭವಿಸುತ್ತಿದೆ. ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋತರೂ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. ಅಡಿದ 7 ಪಂದ್ಯಗಳಲ್ಲಿ 6 ರಲ್ಲಿ ಜಯ ಸಾಧಿಸಿರುವ ಆಸೀಸ್, ಮೊದಲ ಸ್ಥಾನದಲ್ಲಿದೆ. ಈ ವೇಳೆ ಆಸ್ಟ್ರೇಲಿಯಾದ ಗೆಲುವಿನ ಶೆಕಡಾವಾರು 85.71 ಆಗಿದೆ. ಇನ್ನು ಈ ಪಟ್ಟಿಯಲ್ಲಿ ನ್ಯೂಜಿಲೆಂಡ್ ಎರಡನೇ ಸ್ಥಾನದಲ್ಲಿದೆ. ಆಡಿರುವ 3 ಪಂದ್ಯಗಳಲ್ಲಿ, 2 ಜಯ, 1 ಡ್ರಾ ಸಾಧಿಸಿರುವ ಕಿವೀಸ್ 77ರ ಗೆಲುವಿನ ಶೆಕಡಾ ಹೊಂದಿದೆ.
ಭಾರತ ಯಾವ ಸ್ಥಾನದಲ್ಲಿದೆ?
ಹಾಲಿ ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ ಮೂರನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಭಾರತದಲ್ಲಿ ಆಡಿದ್ದ ಎರಡೂ ಟೆಸ್ಟ್ ಪಂದ್ಯಗಳನ್ನು ಗೆದ್ದು ಇತಿಹಾಸ ಬರೆದಿತ್ತು. ಈಗ ದಕ್ಷಿಣ ಆಫ್ರಿಕಾ ಆಡಿದ 4 ಪಂದ್ಯಗಳಲ್ಲಿ 3ರಲ್ಲಿ ಜಯ, 1ರಲ್ಲಿ ಸೋಲು ಕಂಡಿದೆ. ಈ ಮೂಲಕ ದಕ್ಷಿಣ ಆಫ್ರಿಕಾದ ಶೆಕಡಾವಾರು 75 ಆಗಿದೆ. ಇನ್ನು ನಾಲ್ಕನೇ ಸ್ಥಾನದಲ್ಲಿ ಶ್ರೀಲಂಕಾ, ಐದನೇ ಸ್ಥಾನದಲ್ಲಿ ಪಾಕಿಸ್ತಾನ ತಂಡಗಳು ಇವೆ.

ಭಾರತ ಸದ್ಯ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನ ಹೊಂದಿದೆ. ಆಡಿರುವ 9 ಪಂದ್ಯಗಳಲ್ಲಿ 4 ಜಯ, 4 ಸೋಲು, 1 ಡ್ರಾ ಸಾಧಿಸಿರುವ ಭಾರತದ ಗೆಲುವಿನ ಶೆಕಡಾವಾರು 48.15 ಆಗಿದೆ. ಇನ್ನು ಮೆಲ್ಬೋರ್ನ್ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್ ಗೆಲುವಿನ ಶೆಕಡಾ 35.19 ಆಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications