U-19 World Cup 2026: ಆಯುಷ್ ಮ್ಹಾತ್ರೆಗೆ ಪಟ್ಟ: ವೈಭವ್ ಸೂರ್ಯವಂಶಿಗೆ ಸ್ಥಾನ
2026ನೇ ವರ್ಷ ಆರಂಭವಾಗುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳಲ್ಲಿ ಸಂತಸ. ಈ ವರ್ಷ ಸಾಲು ಸಾಲು ಕ್ರಿಕೆಟ್ ಟೂರ್ನಿಗಳು ಅಭಿಮಾನಿಗಳ ಮನ ತಣಿಸಲಿವೆ. ಆರಂಭದಲ್ಲಿ ಜನವರಿ 9 ರಿಂದ ಮಹಿಳಾ ಪ್ರೀಮಿಯರ್ ಲೀಗ್ ಆರಂಭವಾದರೆ, ಜನವರಿ 15 ರಂದು ಐಸಿಸಿ ಅಂಡರ್ 19 ವಿಶ್ವಕಪ್ ನಡೆಯಲಿದೆ. ಜಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಅಂಡರ್ 19 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ಜನವರಿ 15 ರಿಂದ ಆರಂಭವಾಗಲಿರುವ ಮೆಗಾ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಆಯುಷ್ ಮ್ಹಾತ್ರೆ ಮುನ್ನಡೆಸಲಿದ್ದಾರೆ. ಈ ತಂಡದಲ್ಲಿ ಸ್ಟಾರ್ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರಿಗೂ ಸ್ಥಾನ ಕಲ್ಪಿಸಲಾಗಿದೆ. ತಂಡದ ಉಪನಾಯಕನ ಜವಾಬ್ದಾರಿಯನ್ನು ವಿಹಾನ್ ಮಲ್ಹೋತ್ರಾ ಅವರಿಗೆ ನೀಡಲಾಗಿದೆ. ಟೀಮ್ ಇಂಡಿಯಾ ಈ ಟೂರ್ನಿಯಲ್ಲಿ ಜನವರಿ 15 ರಿಂದ ತನ್ನ ಅಭಿಯಾನವನ್ನು ಆರಂಭಿಸಲಿದೆ. ಮೊದಲ ಪಂದ್ಯದಲ್ಲಿ ಭಾರತ ಯುಎಇ ವಿರುದ್ಧ ಕಾದಾಟವನ್ನು ನಡೆಸಲಿದೆ.

ಅಂಡರರ್ 19 ಏಷ್ಯಾ ಕಪ್ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಭಾರತ ಈ ಟೂರ್ನಿಯಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಅಲ್ಲದೆ ಅಮೆರಿಕ, ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ತಂಡಗಳ ಜೊತೆಗೆ ಗ್ರೂಪ್ ಎ ನಲ್ಲಿ ಸ್ಥಾನ ಪಡೆದಿದೆ. ಟೀಮ್ ಇಂಡಿಯಾ ಐದು ಬಾರಿ ಐಸಿಸಿ ಅಂಡರ್ -19 ವಿಶ್ವಕಪ್ ಗೆದ್ದಿದೆ, ಅಲ್ಲದೆ ಕಳೆದ ಬಾರಿ ರನ್ನರ್ ಅಪ್ ಸ್ಥಾನವನ್ನು ಪಡೆದಿದೆ.
ವೈಭವ್ ಸೂರ್ಯವಂಶಿ ಆಕರ್ಷಣೆ
ಟೀಮ್ ಇಂಡಿಯಾದ ಭರವಸೆಯ ಆಟಗಾರ ವೈಭವ್ ಸೂರ್ಯವಂಶಿ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇವರು ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಬ್ಯಾಟ್ ಬೀಸಲಿದ್ದಾರೆ. ಇವರು ಸ್ಥಿರ ಪ್ರದರ್ಶನವನ್ನು ನೀಡಿ ಆರ್ಭಟಿಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇವರು ಅಂಡರ್ 19 ಏಷ್ಯಾ ಕಪ್ ಟೂರ್ನಿಯಲ್ಲಿ ಯುಎಇ ವಿರುದ್ಧ ಸ್ಫೋಟಕ ಶತಕ ಬಾರಿಸಿ ಮಿಂಚಿದರು. ಅಲ್ಲದೆ ಇತ್ತೀಚಿಗೆ ದೇಶೀಯ ವಿಜಯ್ ಹಜಾರೆ ಟೂರ್ನಿಯಲ್ಲಿ ಅಮೋಘ ಸಾಧನೆ ಮಾಡಿರುವ ವೈಭವ್ ಸೂರ್ಯವಂಶಿ 36 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆದಿದ್ದರು. ವೈಭವ್ ಸೂರ್ಯವಂಶಿ ಐಪಿಎಲ್ 2025ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 35 ಎಸೆತಗಳಲ್ಲಿ ಶತಕ ಬಾರಿಸಿ ಅಬ್ಬರಿಸಿದ್ದರು. ಅಲ್ಲಿಂದ ಇವರ ಆಟದ ಮೇಲೆ ಎಲ್ಲರೂ ಚಿತ್ತ ನೆಟ್ಟಿದ್ದಾರೆ.
ಐಸಿಸಿ ಅಂಡರ್-19 ವಿಶ್ವಕಪ್‌ಗಾಗಿ ಭಾರತ ತಂಡ: ಆಯುಷ್ ಮ್ಹಾತ್ರೆ (ನಾಯಕ), ವಿಹಾನ್ ಮಲ್ಹೋತ್ರಾ (ಉಪನಾಯಕ), ವೈಭವ್ ಸೂರ್ಯವಂಶಿ, ಆರನ್ ಜಾರ್ಜ್, ವೇದಾಂತ್ ತ್ರಿವೇದಿ, ಅಭಿಗ್ಯಾನ್ ಕುಂಡು, ಹರ್ವಂಶ್ ಸಿಂಗ್, ಆರ್.ಎಸ್. ಅಂಬ್ರಿಸ್, ಕನಿಷ್ಕ್ ಚೌಹಾಣ್, ಖಿಲನ್ ಪಟೇಲ್, ಮೊಹಮ್ಮದ್ ಅನನ್, ಹೆನಿಲ್ ಪಟೇಲ್, ಡಿ. ದೀಪೇಶ್, ಕಿಶನ್ ಕುಮಾರ್ ಸಿಂಗ್, ಉದ್ಧವ್ ಮೋಹನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications