IND vs AUS: 4-5ನೇ ಟೆಸ್ಟ್‌ಗೆ ಭಾರತ ತಂಡ ಪ್ರಕಟ; ಯುವ ಸ್ಪಿನ್ನರ್ ಸೇರ್ಪಡೆ
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕು ಮತ್ತು ಐದನೇ ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ ಪ್ರಕಟವಾಗಿದೆ. ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯೂ 1-1ರಲ್ಲಿ ಸಮಗೊಂಡಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಎರಡು ಟೆಸ್ಟ್ ಪಂದ್ಯಗಳು ಮೆಲ್ಬೋರ್ನ್ ಹಾಗು ಸಿಡ್ನಿಯಲ್ಲಿ ನಡೆಯಲಿವೆ. ಈ ಎರಡು ಟೆಸ್ಟ್ ಪಂದ್ಯಗಳಿಗಾಗಿ ಭಾರತ ತಂಡವನ್ನು ಯುವ ಸ್ಪಿನ್ನರ್ ಸೇರಿಕೊಂಡಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ಮೆಲ್ಬೋರ್ನ್ ಹಾಗು ಸಿಡ್ನಿ ಟೆಸ್ಟ್ ಪಂದ್ಯಗಳು ಮಹತ್ವದಾಗಿವೆ. ಹೀಗಾಗಿ ಉಭಯ ತಂಡಗಳು ಎರಡು ಟೆಸ್ಟ್ ಪಂದ್ಯಗಳನ್ನು ಗೆಲ್ಲುವ ಲೆಕ್ಕಚಾರವನ್ನು ಹಾಕಿಕೊಂಡಿವೆ. 26 ವರ್ಷದ ಆಲ್ ರೌಂಡರ್ ತನುಷ್ ಕೋಟ್ಯಾನ್ ಅವರಿಗೆ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ ಆಡುವ ಅವಕಾಶ ಸಿಕ್ಕಿದೆ. ಅವರು ಶೀಘ್ರದಲ್ಲೇ ಮೆಲ್ಬೋರ್ನ್ ಟೆಸ್ಟ್‌ಗೂ ಮೊದಲು ಟೀಮ್ ಇಂಡಿಯಾವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ.

ಭಾರತ ಎ ಪರ ಆಡುವಾಗ ತನುಷ್ ಕೋಟ್ಯಾನ್ ಬಿಸಿಸಿಐ ಆಯ್ಕೆ ಸಮಿತಿ ಚಿತ್ತ ಕದಿಯುವಲ್ಲಿ ಯಶಸ್ವಿಯಾಗದ್ದರು. ಹೀಗಾಗಿ ಅವರಿಗೆ ಟೀಮ್ ಇಂಡಿಯಾ ಬಾಗಿಲು ತೆರೆದಿದೆ. ಅಹಮದಾಬಾದ್‌ನಲ್ಲಿ ವಿಜಯ್ ಹಜಾರೆ ಟ್ರೋಫಿ ಆಡುತ್ತಿರುವ ಕೋಟ್ಯಾನ್ ಮಂಗಳವಾರ ಮುಂಬೈನಿಂದ ಹೊರಟು ಬಾಕ್ಸಿಂಗ್ ಡೇ ಟೆಸ್ಟ್‌ಗೆ ಮೊದಲು ಮೆಲ್ಬೋರ್ನ್ ತಲುಪಲಿದ್ದಾರೆ. ಹೈದರಾಬಾದ್ ವಿರುದ್ಧ ವಿಜಯ್ ಹಜಾರೆ ಪಂದ್ಯದಲ್ಲಿ ಮುಂಬೈ ಪರ 39 ರನ್ ಗಳಿಸಿ ಎರಡು ವಿಕೆಟ್ ಪಡೆದಿದ್ದರು. ಇದಲ್ಲದೆ, ಅವರು ಎಂಸಿಜಿಯಲ್ಲಿ ಭಾರತ ಎ ಪರ ಎಂಟನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ 44 ರನ್ ಗಳಿಸಿದ್ದರು.
ಅಕ್ಸರ್ ಪಟೇಲ್‌ಗೆ ತಪ್ಪಿದ ಅವಕಾಶ
ಸ್ಟಾರ್ ಆಲ್ ರೌಂಡರ್ ಅಕ್ಷರ್ ಪಟೇಲ್ ತಮ್ಮ ಆಲ್‌ರೌಂಡರ್ ಪ್ರದರ್ಶನದ ಮೂಲಕ ಎಲ್ಲರ ಮನ ಗೆದ್ದಿದ್ದಾರೆ. ಇದರಿಂದಾಗಿ ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ರವಿಚಂದ್ರನ್ ಅಶ್ವಿನ್ ಬದಲಿಗೆ ಅವರ ಹೆಸರು ಮುಂಚೂಣಿಯಲ್ಲಿತ್ತು. ಆದರೆ ಮೂಲಗಳ ಪ್ರಕಾರ, ಕೌಟುಂಬಿಕ ಬದ್ಧತೆಯಿಂದಾಗಿ ಅಕ್ಷರ್ ಪಟೇಲ್ ವಿಜಯ್ ಹಜಾರೆ ಟ್ರೋಫಿಯ ಮೊದಲ ಎರಡು ಪಂದ್ಯಗಳ ನಂತರ ವಿರಾಮ ತೆಗೆದುಕೊಂಡಿದ್ದಾರೆ. ಹೀಗಾಗಿ ತನುಷ್ ಕೋಟ್ಯಾನ್ ಅವರಿಗೆ ಅವಕಾಶ ಲಭಿಸಿದೆ.
4-5ನೇ ಟೆಸ್ಟ್‌ಗೆ ಭಾರತ ತಂಡ ಪ್ರಕಟ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ದೇವದತ್ ಪಡಿಕ್ಕಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ನಿತೀಶ್‌ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಹರ್ಷಿತ್ ಸುಂದರ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ತನುಷ್ ಕೋಟ್ಯಾನ್, ಪ್ರಸಿದ್ಧ್ ಕೃಷ್ಣ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications