For Quick Alerts
ALLOW NOTIFICATIONS  
For Daily Alerts
 

IND vs SA: ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ತಂಡ ಪ್ರಕಟ; ರೋಹಿತ್, ಕೊಹ್ಲಿಗೆ ರೆಸ್ಟ್; ರಾಹುಲ್, ಸೂರ್ಯನಿಗೆ ನಾಯಕತ್ವ ಪಟ್ಟ

ಇದೇ ಡಿಸೆಂಬರ್ ಮೊದಲ ವಾರದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ಕ್ರಿಕೆಟ್ ತಂಡ, ಬಹು-ಸ್ವರೂಪದ ಸರಣಿಯಲ್ಲಿ ಹರಿಣ ಪಡೆಯನ್ನು ಎದುರಿಸಲಿದೆ. ಗುರುವಾರ, ನವೆಂಬರ್ 30ರಂದು ದಕ್ಷಿಣ ಆಫ್ರಿಕಾ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ.

ಮುಂಬರುವ 2024ರ ಟಿ20 ವಿಶ್ವಕಪ್ ಪಂದ್ಯಾವಳಿ ಗಮನದಲ್ಲಿಟ್ಟುಕೊಂಡು, ಟಿ20 ಸರಣಿಗೆ ಯುವ ಆಟಗಾರರನ್ನು ಪ್ರಕಟಿಸಿದ್ದರೆ, ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ವೈಟ್‌ಬಾಲ್ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

India Squad for South Africa Series For T20, ODI and Test Announced: Virat and Rohit on rest

ಡಿಸೆಂಬರ್ 10ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು ಮುನ್ನಡೆಸಲಿದ್ದರೆ, ನಂತರದ ಮೂರು ಏಕದಿನ ಪಂದ್ಯಗಳಿಗೆ ಕೆಎಲ್ ರಾಹುಲ್ ನಾಯಕತ್ವ ವಹಿಸಲಿದ್ದಾರೆ. ಅಂತಿಮವಾಗಿ ಸೆಂಚೂರಿಯನ್ (ಡಿಸೆಂಬರ್ 26ರಿಂದ) ಮತ್ತು ಕೇಪ್ ಟೌನ್ (ಜನವರಿ 3ರಿಂದ) ನಲ್ಲಿ ನಡೆಯುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ನಾಯಕತ್ವ ವಹಿಸಲು ಹಿಂದಿರುಗಲಿದ್ದಾರೆ.

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ವಿಶ್ರಾಂತಿಗಾಗಿ ಬಿಸಿಸಿಐಗೆ ವಿನಂತಿಸಿದ ಕಾರಣ ವೈಟ್-ಬಾಲ್ ಸರಣಿಗೆ ಪ್ರಯಾಣಿಸುವುದಿಲ್ಲ. ವೇಗಿ ಮೊಹಮ್ಮದ್ ಶಮಿ ಪ್ರಸ್ತುತ ವೈದ್ಯಕೀಯ ಚಿಕಿತ್ಸೆಯಲ್ಲಿರುವ ಕಾರಣ, ಅವರ ಲಭ್ಯತೆಯು ಫಿಟ್‌ನೆಸ್‌ಗೆ ಒಳಪಟ್ಟಿರುತ್ತದೆ.

India Squad for South Africa Series For T20, ODI and Test Announced: Virat and Rohit on rest

ದಕ್ಷಿಣ ಆಫ್ರಿಕಾ ವಿರುದ್ಧ 3 ಟಿ20 ಪಂದ್ಯಗಳಿಗೆ ಭಾರತ ತಂಡ

ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹಾರ್.

ದಕ್ಷಿಣ ಆಫ್ರಿಕಾ ವಿರುದ್ಧ 3 ಏಕದಿನ ಪಂದ್ಯಗಳಿಗೆ ಭಾರತ ತಂಡ

ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್‌ದೀಪ್ ಸಿಂಗ್, ದೀಪಕ್ ಚಹಾರ್.

ದಕ್ಷಿಣ ಆಫ್ರಿಕಾ ವಿರುದ್ಧ 2 ಟೆಸ್ಟ್‌ ಪಂದ್ಯಗಳಿಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.

ದಕ್ಷಿಣ ಆಫ್ರಿಕಾ ಪ್ರವಾಸದ ಸಮಯದಲ್ಲಿ ಭಾರತ ಎ ತಂಡವು ದಕ್ಷಿಣ ಆಫ್ರಿಕಾ ಎ ತಂಡದ ವಿರುದ್ಧ ಎರಡು ನಾಲ್ಕು ದಿನಗಳ ಪಂದ್ಯಗಳು ಮತ್ತು ಒಂದು ಅಂತರ-ತಂಡಗಳ ಮೂರು ದಿನಗಳ ಪಂದ್ಯವನ್ನೂ ಆಡಲಿದೆ.

ಮೊದಲನೇ ನಾಲ್ಕು-ದಿನಗಳ ಪಂದ್ಯಕ್ಕಾಗಿ ಭಾರತ ಎ ತಂಡ:

ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ದೇವದತ್ ಪಡಿಕ್ಕಲ್, ಪ್ರದೋಶ್ ರಂಜನ್ ಪಾಲ್, ಸರ್ಫರಾಜ್ ಖಾನ್, ಕೆಎಸ್ ಭರತ್ (ನಾಯಕ/ವಿಕೆಟ್ ಕೀಪರ್), ಧ್ರುವ್ ಜುರೆಲ್, ಶಾರ್ದೂಲ್ ಠಾಕೂರ್, ಪುಲ್ಕಿತ್ ನಾರಂಗ್, ಸೌರಭ್ ಕುಮಾರ್, ಮಾನವ್ ಸುತಾರ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ವಿಧ್ವತ್ ಕಾವೇರಪ್ಪ, ತುಷಾರ್ ದೇಶಪಾಂಡೆ.

ಮೂರು ದಿನಗಳ ಪಂದ್ಯದ ಭಾರತ ಅಂತರ-ತಂಡ

ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಅಭಿಮನ್ಯು ಈಶ್ವರನ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸರ್ಫರಾಜ್ ಖಾನ್, ಪ್ರದೋಶ್ ರಂಜನ್ ಪಾಲ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಪುಲ್ಕಿತ್ ನಾರಂಗ್, ಹರ್ಷಿತ್ ರಾಣಾ, ಶಾರ್ದೂಲ್ ಠಾಕೂರ್, ಸೌರಭ್ ಕುಮಾರ್, ಮಾನವ್ ಸುತಾರ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ವಿಧ್ವತ್ ಕಾವೇರಪ್ಪ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ನವದೀಪ್ ಸೈನಿ.

2ನೇ ನಾಲ್ಕು-ದಿನಗಳ ಪಂದ್ಯಕ್ಕಾಗಿ ಭಾರತ ಎ ತಂಡ

ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕೆಎಸ್ ಭರತ್ (ನಾಯಕ/ ವಿಕೆಟ್ ಕೀಪರ್) ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮಾನವ್ ಸುತಾರ್, ಆಕಾಶ್ ದೀಪ್, ವಿಧ್ವತ್ ಕಾವೇರಪ್ಪ, ನವದೀಪ್ ಸೈನಿ.

Story first published: Thursday, November 30, 2023, 21:02 [IST]
Other articles published on Nov 30, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+