ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ಟಿ20 ತಂಡಕ್ಕೆ ಮರಳಿದ ಆರ್ ಅಶ್ವಿನ್: ಅಚ್ಚರಿ ವ್ಯಕ್ತಪಡಿಸಿದ ನೆಟ್ಟಿಗರು

India squad for t20 series against West Indies, cricket fans reaction for Ravi Ashwin inclusion T20I

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಗುರುವಾರ ಪ್ರಕಟಿಸಿದೆ. ಸಾಕಷ್ಟು ಕುತೂಹಲ ಮೂಡಿಸಿದ್ದ ಈ ಆಯ್ಕೆಯಲ್ಲಿ ಬೂಮ್ರಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಆದರೆ ಅನುಭವಿ ಆಟಗಾರ ಆರ್ ಅಶ್ವಿನ್ ಮತ್ತೆ ಭಾರತ ಟಿ20 ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದು ನೆಟ್ಟಿಗರು ಈ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧ ಜುಲೈ 27ರಿಂದ ಟಿ20 ಸರಣಿ ಆರಂಭವಾಗಲಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಹಾಗೂ ನಾಉಭವಿ ಸ್ಪಿನ್ನರ್ ಯುಜುವೇಂದ್ರ ಚಾಹಲ್‌ಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಆದರೆ ಐಪಿಎಲ್ ಬಳಿಕ ನಡೆದ ಸೀಮಿತ ಓವರ್‌ಗಳ ಸರಣಿಯಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದ ಆರ್ ಅಶ್ವಿನ್ ಈ ಸರಣಿಯಲ್ಲಿ ಮತ್ತೆ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

4 ವರ್ಷಗಳ ಕಾಲ ಸೀಮಿತ ಓವರ್‌ಗಳ ತಂಡದಿಂದ ಹೊರಗಿದ್ದರು ಅಶ್ವಿನ್

4 ವರ್ಷಗಳ ಕಾಲ ಸೀಮಿತ ಓವರ್‌ಗಳ ತಂಡದಿಂದ ಹೊರಗಿದ್ದರು ಅಶ್ವಿನ್

ಆರ್ ಅಶ್ವಿನ್ ಭಾರತ ಟೆಸ್ಟ್ ತಂಡದ ಪ್ರಮುಖ ಭಾಗವಾಗಿದ್ದರೂ ಸೀಮಿತ ಓವರ್‌ಗಳ ತಂಡದಲ್ಲಿ 2017ರಿಂದ ಸ್ಥಾನ ಪಡೆದಿರಲಿಲ್ಲ. ಆದರೆ 2021ರ ಟಿ20 ವಿಶ್ವಕಪ್‌ಗೆ ಅಶ್ವಿನ್ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದರು. ಐಪಿಎಲ್‌ನಲ್ಲಿ ನೀಡುತ್ತಿದ್ದ ಸ್ಥಿರ ಪ್ರದರ್ಶನದ ಕಾರಣದಿಂದಾಗಿ ಈ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಅಶ್ವಿನ್ ಯಶಸ್ವಿಯಾಗಿದ್ದರು. ಅದಾದ ಬಳಿಕ ಭಾರತದಲ್ಲಿ ನವೆಂಬರ್‌ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿಯೂ ಆಡಿದ್ದರು. ಆದರೆ 2022ರಲ್ಲಿ ಮತ್ತೆ ಟಿ20 ತಂಡದಿಂದ ಅಶ್ವಿನ್ ಹೊರಗುಳಿದರು. ಹೀಗಾಗಿ ಈ ಬಾರಿಯ ಟಿ20 ವಿಶ್ವಕಪ್‌ನ ಯೋಜನೆಯಲ್ಲಿ ಅಶ್ವಿನ್ ಭಾಗವಾಗಿಲ್ಲ ಎಂದು ಅಂದುಕೊಳ್ಳಲಾಯಿತು. ಆದರೆ ಇದೀಗ ವಿಂಡೀಸ್ ವಿರುದ್ಧದ ಸರಣಿಯಲ್ಲಿ ಅವಕಾಶ ನಿಡುವ ಮೂಲಕ ಅಚ್ಚರಿ ಮೂಡಿಸಿದೆ.

ಕುತೂಹಲ ಮೂಡಿಸಿದೆ ಅಶ್ವಿನ್ ಪ್ರದರ್ಶನ

ಕುತೂಹಲ ಮೂಡಿಸಿದೆ ಅಶ್ವಿನ್ ಪ್ರದರ್ಶನ

ಆರ್ ಅಶ್ವಿನ್ ಈವರೆಗೆ ಭಾರತದ ಪರವಾಗಿ 51 ಟಿ20 ಪಂದ್ಯಗಳನ್ನು ಆಡಿದ್ದು ಅದರಲ್ಲಿ 61 ವಿಕೆಟ್ ಸಂಪಾದಿಸಿದ್ದಾರೆ. ಇದೀಗ ಕೆರಿಬಿಯನ್ ನಾಡಿನಲ್ಲಿ ಆರ್ ಅಶ್ವಿನ್ ಯಾವ ರೀತಿ ಮೊಡಿ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಈ ಪ್ರದರ್ಶನದ ಮೂಲಕ ಅಶ್ವಿನ್ ಮುಂಬರುವ ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್‌ನ್ಲಲಿ ಮತ್ತೆ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಲಿದ್ದಾರೆಯಾ ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ. ಆರ್ ಅಶ್ವಿನ್ ಜೊತೆಗೆ ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ಕುಲ್‌ದೀಪ್ ಯಾದವ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಸ್ಥಾನ ಪಡೆದುಕೊಂಡಿದ್ದಾರೆ.

ಅಭಿಮಾನಿಗಳಿಗೆ ಗೊಂದಲ

ಅಭಿಮಾನಿಗಳಿಗೆ ಗೊಂದಲ

ಇನ್ನು ಈ ವರ್ಷ ನಡೆದ ಯಾವಿದೇ ಟಿ20 ಸರಣಿಯಲ್ಲಿಯೂ ಆರ್ ಅಶ್ವಿನ್‌ಗೆ ಅವಕಾಶ ನೀಡದೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಅವಕಾಶ ನೀಡುವ ಮೂಲಕ ಅಭಿಮಾನಿಗಳು ಗೊಂದಲಕ್ಕೆ ಒಳಗಾಗಿದ್ದಾರೆ. ಆರ್ ಅಶ್ವಿನ್ ಅವರು ನಿಜಕ್ಕೂ ಕೂಡ ಟಿ20 ವಿಶ್ವಕಪ್‌ನ ಯೋಈಜನೆಯಲ್ಲಿ ಇದ್ದಾರೆಯೇ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ಆರ್ ಅಶ್ವಿನ್ ಅವರನ್ನು ಮತ್ತೆ ಟಿ20 ಸರಣಿಯಲ್ಲಿ ಆಡಿಸುತ್ತಿರುವ ಉದ್ದೇಶವೇನು ಎಂದು ಪ್ರಶ್ನಿಸುತ್ತಿದ್ದಾರೆ.

West Indies ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ | *Cricket | OneIndia Kannada
ಭಾರತ ಸ್ಕ್ವಾಡ್ ಹೀಗಿದೆ

ಭಾರತ ಸ್ಕ್ವಾಡ್ ಹೀಗಿದೆ

ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್*, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಕುಲದೀಪ್ ಯಾದವ್*, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್.

Story first published: Friday, July 15, 2022, 10:10 [IST]
Other articles published on Jul 15, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X