For Quick Alerts
ALLOW NOTIFICATIONS  
For Daily Alerts
 

IND vs AUS: ಕೆಲವೇ ಕ್ಷಣಗಳಲ್ಲಿ ಆಸೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ರೋಹಿತ್, ಕೊಹ್ಲಿಗೆ ವಿಶ್ರಾಂತಿ?

ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಲಿರುವ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಸೋಮವಾರ, ಸೆಪ್ಟೆಂಬರ್ 18ರಂದೇ ಬಿಸಿಸಿಐ ಪ್ರಕಟಿಸಲಿದೆ.

ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಹಿರಿಯರ ತಂಡದ ಆಯ್ಕೆ ಸಮಿತಿಯು ಮಾಜಿ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಸೋಮವಾರ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ.

India Squad Will Be Announced For ODI Series Against Australia Soon; Rest For Rohit, Kohli?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 22ರಂದು ಶುಕ್ರವಾರ ಮೊಹಾಲಿಯಲ್ಲಿ ಆರಂಭವಾಗಲಿದೆ.

ಏಕದಿನ ಸರಣಿಯು ಅಕ್ಟೋಬರ್ 5ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ 2023ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಮೊದಲು ರೋಹಿತ್ ಶರ್ಮಾ ನಾಯಕತ್ವದ ಭಾರತ ಮತ್ತು ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ತಯಾರಿಯಾಗಿರಲಿದೆ.

2023ರ ಏಕದಿನ ವಿಶ್ವಕಪ್ ಅಭಿಯಾನದಲ್ಲಿ ಅಕ್ಟೋಬರ್ 8ರಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸೆಣಸಾಡಲಿವೆ.

India Squad Will Be Announced For ODI Series Against Australia Soon; Rest For Rohit, Kohli?

ಅಕ್ಷರ್ ಪಟೇಲ್ ಕನಿಷ್ಠ ಒಂದೆರಡು ಪಂದ್ಯಗಳಿಗೆ ಹೊರಗುಳಿಯುವುದರೊಂದಿಗೆ ಭಾರತವು ಕೆಲವು ಗಾಯದ ಸಮಸ್ಯೆಯನ್ನು ಹೊಂದಿದೆ. ಇತ್ತ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಕೂಡ 2023ರ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಬೆನ್ನು ಸೆಳೆತದಿಂದ ಬಳಲಿದ ನಂತರ, ತಂಡಕ್ಕೆ ಮರಳಲು ಹೆಣಗಾಡುತ್ತಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಅನುಭವಿಗಳಿಗೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಶ್ವಕಪ್‌ಗೆ ಮುಂಚಿತವಾಗಿ ತಮ್ಮ ಬೆಂಚ್ ಬಲವನ್ನು ಪ್ರಯತ್ನಿಸಲು, ವಿಶ್ರಾಂತಿ ನೀಡಲಾಗುತ್ತದೆಯೇ ಎಂಬುದು ಕಾದು ನೋಡಬೇಕಿದೆ.

ಈಗಾಗಲೇ ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಆಸ್ಟ್ರೇಲಿಯಾ ತನ್ನ 18 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಸ್ಟಾರ್ ಆಟಗಾರರಾದ ಪ್ಯಾಟ್ ಕಮ್ಮಿನ್ಸ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್ ಸೇರಿದಂತೆ ಪ್ರಮುಖ ಆಟಗಾರರು ವಾಪಸ್ಸಾಗಿದ್ದಾರೆ.

ಭಾರತ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಅಲೆಕ್ಸ್ ಕ್ಯಾರಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಆಡಮ್ ಝಂಪಾ.

Story first published: Monday, September 18, 2023, 14:24 [IST]
Other articles published on Sep 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+