Guwahati Test: ತವರಿನಲ್ಲಿ ಮುಗ್ಗರಿಸಿದ ಟೀಮ್ ಇಂಡಿಯಾ: ದಕ್ಷಿಣ ಆಫ್ರಿಕಾಕ್ಕೆ ಸರಣಿ ಗೆಲುವು
ಗುವಾಹಟಿಯಲ್ಲಿ ಟೀಮ್ ಇಂಡಿಯಾ ಮುಖಭಂಗ ಅನುಭವಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಪಡೆ 408 ರನ್‌ಗಳ ಸೋಲು ಕಂಡಿದೆ. ಈ ಮೂಲಕ ಟೀಮ್ ಇಂಡಿಯಾ ತವರಿನಲ್ಲಿ ಮತ್ತೊಮ್ಮೆ ಕ್ಲೀನ್ ಸ್ವೀಪ್ ಸೋಲಿಗೆ ತುತ್ತಾಗಿದೆ. ಇದಕ್ಕೂ ಮೊದಲು ನ್ಯೂಜಿಲೆಂಡ್ ಈ ಹಿಂದೆ ಈ ಸಾಧನೆ ಮಾಡಿತ್ತು. ಈಗ ದಕ್ಷಿಣ ಆಫ್ರಿಕಾ ಈ ಸಾಧನೆ ಮಾಡಿ ಬೀಗಿದೆ. ದಕ್ಷಿಣ ಆಫ್ರಿಕಾ 2-0ಯಿಂದ ಸರಣಿಯನ್ನು ತನ್ನ ವಶಕ್ಕೆ ಮಾಡಿಕೊಂಡಿದೆ.
ದಕ್ಷಿಣ ಆಫ್ರಿಕಾ ನೀಡಿದ್ದ ಸವಾಲಿನ ಗುರಿಯನ್ನು ಬೆನ್ನಟ್ಟುವಲ್ಲಿ ಟೀಮ್ ಇಂಡಿಯಾ ವಿಫಲವಾಗಿದೆ. ಅಲ್ಲದೆ ಇತಿಹಾಸ ನಿರ್ಮಿಸುವ ಕನಸನ್ನು ಕೈ ಚೆಲ್ಲಿದೆ. ಈ ಮೂಲಕ ದಕ್ಷಿಣ ಆಫ್ರಿಕಾ 25 ವರ್ಷಗಳ ಇತಿಹಾಸವನ್ನು ಪುನರಾವರ್ತಿಸುವಲ್ಲಿ ಯಶಸ್ವಿಯಾಯಿತು. ಇದಕ್ಕೂ ಮೊದಲು, ದಕ್ಷಿಣ ಆಫ್ರಿಕಾ 2000 ರಲ್ಲಿ ಭಾರತದಲ್ಲಿ ಟೀಮ್ ಇಂಡಿಯಾವನ್ನು ಕ್ಲೀನ್ ಸ್ವೀಪ್ ಮಾಡಿತ್ತು. ಆಗಲೂ ಪ್ರವಾಸಿ ತಂಡ ಕ್ಲೀನ್ ಸ್ವೀಪ್ ಸಾಧನೆ ಮಾಡಿತ್ತು.

ಬುಧವಾರ ಟೀಮ್ ಇಂಡಿಯಾ ಎರಡನೇ ಇನಿಂಗ್ಸ್‌ನ್ನು 2 ವಿಕೆಟ್‌ಗೆ 27 ರನ್‌ಗಳಿಂದ ಮುಂದುವರಿಸಿತು. ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಸೋಲು, ಡ್ರಾ ಸಾಧಿಸುವ ಆಯ್ಕೆಗಳು ಇದ್ದವು. ಆದರೆ ಟೀಮ್ ಇಂಡಿಯಾದ ಆಟಗಾರರು ಡ್ರಾ ಸಾಧಿಸುವಲ್ಲಿ ಬೇಕಾದಷ್ಟು ಹೋರಾಟದ ಮನೋಭಾವನೆ ತೋರಲಿಲ್ಲ. ಟೀಮ್ ಇಂಡಿಯಾ ಆಟಗಾರರ ಮುಂದೆ ದೊಡ್ಡ ಬಂಡೆ ಕಲ್ಲಿನಂತೆ ರನ್ ಗೋಪುರ ಇತ್ತು. ಈ ಸವಾಲಿನ ಮೊತ್ತವನ್ನು ಚೇಸ್ ಮಾಡುವಲ್ಲಿ ಭಾರತ ವಿಫಲವಾಗಿ ಕೊನೆಯಲ್ಲಿ 140 ರನ್‌ಗಳಿಗೆ ಆಲೌಟ್ ಆಯಿತು.
ಜಡೇಜಾ ಅರ್ಧಶತಕ
ಎರಡನೇ ಇನಿಂಗ್ಸ್‌ನಲ್ಲೂ ಟೀಮ್ ಇಂಡಿಯಾದ ಪರ ಧ್ರುವ್ ಜುರೇಲ್, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ ರನ್‌ಗಳನ್ನು ಕಲೆ ಹಾಕುವಲ್ಲಿ ವಿಫಲರಾದರು. ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ದಕ್ಷಿಣ ಆಫ್ರಿಕಾದ ಬೌಲರ್‌ಗಳನ್ನು ಕೊಂಚ ಕಾಡಿದರು. ಪಿಚ್ ಮರ್ಮ ಅರಿತು ಬ್ಯಾಟ್ ಮಾಡಿದ ಜಡ್ಡು 87 ಎಸೆತಗಳನ್ನು ಎದುರಿಸಿ 4 ಬೌಂಡರಿ, 2 ಸಿಕ್ಸರ್ ಸಹಾಯದಿಂದ 54 ರನ್ ಬಾರಿಸಿ ಮಿಂಚಿದರು. ಆದರೆ ಇವರು ತಂಡಕ್ಕೆ ಗೆಲುವಿನ ಮಾಲೆ ತೊಡಿಸುವಲ್ಲಿ ವಿಫಲರಾದರು. ಕೆಳ ಕ್ರಮಾಂಕದಲ್ಲೂ ಬ್ಯಾಟರ್‌ಗಳು ಬಂದು ಹೋಗುವ ಸಂಪ್ರದಾಯವನ್ನು ಮುಗಿಸಿದರು.
ದಕ್ಷಿಣ ಆಫ್ರಿಕಾದ ಪರ ಸಿಮೋನ್ ಹಾರ್ಮರ್ 37 ರನ್ ನೀಡಿ 6 ವಿಕೆಟ್ ಕಬಳಿಸಿದರು. ವೇಗದ ಬೌಲರ್ ಮಾರ್ಕೋ ಜಾನ್ಸನ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಯಿತು. ಸ್ಪಿನ್ ಬೌಲರ್ ಸಿಮೋನ್ ಹಾರ್ಮರ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications