IND vs SA: ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ಟಿ20 ತಂಡ ಪ್ರಕಟ; ಆರ್‌ಸಿಬಿಯ ಇಬ್ಬರು ವೇಗಿಗಳಿಗೆ ಅವಕಾಶ
ಆಸ್ಟ್ರೇಲಿಯಾ ಪ್ರವಾಸದ ಜೊತೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಮಂಡಳಿಯು ತಂಡವನ್ನು ಪ್ರಕಟಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ 4 ಪಂದ್ಯಗಳ ಟಿ20 ಸರಣಿಯ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್ ಅವರಿಗೆ ನೀಡಲಾಗಿದೆ.
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಿರುವ ಬಗ್ಗೆ ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿಯನ್ನು ನೀಡಿದೆ. ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 4 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಭಾರತ ತಂಡವು ನವೆಂಬರ್ 8 ರಂದು ಡರ್ಬನ್‌ನಲ್ಲಿ ತನ್ನ ಮೊದಲ ಟಿ20 ಪಂದ್ಯವನ್ನು ಆಡಲಿದೆ.

ಟೀಮ್ ಇಂಡಿಯಾದಲ್ಲಿ ಇಬ್ಬರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಸ್ಟಾರ್ ಯುವ ಬೌಲರ್‌ಗಳಿಗೆ ಅವಕಾಶ ನೀಡಲಾಗಿದೆ. ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಮಿಂಚಿ ಹರಿಸಿದ ವಿಜಯ್‌ಕುಮಾರ್ ವೈಶಾಖ್ ಮತ್ತು ಯಶ್ ದಯಾಳ್ ಅವರಿಗೆ ಅದೃಷ್ಟ ಕೈ ಹಿಡಿದಿದೆ. ಮಯಾಂಕ್ ಯಾದವ್ ಮತ್ತು ಶಿವಂ ದುಬೆ ಗಾಯದ ಕಾರಣ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದಾರೆ. ರಿಯಾನ್ ಪರಾಗ್ ಅವರಿಗೂ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಸದ್ಯ ಪರಾಗ್ ತಮ್ಮ ಬಲ ಭುಜದ ಹಳೆಯ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಚೇತರಿಸಿಕೊಳ್ಳಲು ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯಲ್ಲಿ ಭಾರತದ ಪರ ಅಬ್ಬರಿಸಿದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್, ರಿಂಕು ಸಿಂಗ್, ವರುಣ್ ಚಕ್ರವರ್ತಿ ಅವರು ಕೂಡ ಭಾರತ ತಂಡದ ಭಾಗವಾಗಿದ್ದಾರೆ. ಎಸಿಸಿ ಉದಯೋನ್ಮುಖ ಏಷ್ಯಾಕಪ್ 2024ರ ಟೂರ್ನಿಯಲ್ಲಿ ಭಾರತ ಎ ತಂಡದಲ್ಲಿ ಅದ್ಭುತ ಪ್ರದರ್ಶನ ನೀಡಿದ ರಮಣದೀಪ್ ಸಿಂಗ್ ಅವರಿಗೆ ಅವಕಾಶ ಕೊಡಲಾಗಿದೆ.
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ. ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವಿಜಯ್‌ಕುಮಾರ್ ವೈಶಾಖ್, ಅವೇಶ್ ಖಾನ್, ಯಶ್ ದಯಾಳ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications