ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಐ ಸರಣಿಗೆ ಭಾರತ ತಂಡ ಪ್ರಕಟ

ನವದೆಹಲಿ, ಆಗಸ್ಟ್ 29: ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗಾಗಿ ಬಿಸಿಸಿಐಯು 15 ಜನರ ತಂಡವನ್ನು ಪ್ರಕಟಿಸಿದೆ. ಸದ್ಯ ನಡೆಯುತ್ತಿರುವ ವೆಸ್ಟ್ ಇಂಡೀಸ್ ಪ್ರವಾಸ ಸರಣಿಯಲ್ಲಿ ವಿಶ್ರಾಂತಿಯಲ್ಲಿದ್ದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಂಡ ಸೇರಿಕೊಂಡಿದ್ದಾರೆ. ಈ ಟಿ20 ಸರಣಿ ಸೆಪ್ಟೆಂಬರ್ 15ರಿಂದ ಆರಂಭಗೊಳ್ಳಲಿದೆ.
ಪ್ರಕಟಿತ ತಂಡದಲ್ಲಿ ವೇಗಿ ಜಸ್‌ಪ್ರೀತ್ ಬೂಮ್ರಾ ಮತ್ತು ಮಾಜಿ ನಾಯಕ ಎಂಎಸ್ ಧೋನಿಯ ಹೆಸರಿಲ್ಲ. ವೇಗಿ ಭುಮನೇಶ್ವರ್ ಕುಮಾರ್ ಕೂಡ ಇಲ್ಲ. ಉಳಿದಂತೆ ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್, ಖಲೀಲ್ ಅಹ್ಮದ್, ನವದೀಪ್ ಸೈನಿ ತಂಡದಲ್ಲಿದ್ದಾರೆ.
ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ನಡೆದಿದ್ದ ವಿಶ್ವಕಪ್ 2019ರ ಬಳಿಕ ಧೋನಿ ಎರಡು ತಿಂಗಳ ಕಾಲ ವಿಶ್ರಾಂತಿ ಪಡೆಯುವುದಾಗಿ, ಈ ನಡುವೆ ಸೇನೆಗೆ ಸೇವೆ ಸಲ್ಲಿಸುವುದಾಗಿ ತಿಳಿಸಿದ್ದರು. ಅದರಂತೆ ಧೋನಿ 15 ದಿನಗಳ ಕಾಲ ಸೇನಾ ಸೇವೆ ಮುಗಿಸಿ, ಸದ್ಯ ಯುನೈಟೆಡ್ ಸ್ಟೇಟ್ಸ್‌ನಲ್ಲಿ ರಜೆ ಕಳೆಯುತ್ತಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಗೆ ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕೃನಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ರಾಹುಲ್ ಚಾಹರ್, ಖಲೀಲ್ ಅಹ್ಮದ್, ದೀಪಕ್ ಚಾಹರ್, ನವದೀಪ್ ಸೈನಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications