ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೊಹ್ಲಿ ಮತ್ತು ರೋಹಿತ್ ಇಲ್ಲದೆ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ ಈ ಐಪಿಎಲ್ ಸ್ಟಾರ್ಸ್ ತಂಡ!

India Team For Sri Lanka Tour Will Be Picked From IPL Talent Pool
ಸೀನಿಯರ್ಸ್ ಗೆ ಕೊಕ್ ಕೊಟ್ಟು ಜೂನಿಯರ್ಸ್ ಆಯ್ಕೆ ಮಾಡಿದ BCCI | Oneindia Kannada

ಕೊರೊನಾವೈರಸ್ ಕಾರಣದಿಂದಾಗಿ ಪ್ರಸ್ತುತ ಐಪಿಎಲ್ ಟೂರ್ನಿ ಮುಂದೂಡಲ್ಪಟ್ಟ ಬಳಿಕ ಇದೀಗ ಕ್ರೀಡಾಭಿಮಾನಿಗಳ ಚಿತ್ತ ಜೂನ್ 18ರಿಂದ ಇಂಗ್ಲೆಂಡ್‌ನಲ್ಲಿ ಶುರುವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಹಾಗೂ ಇನ್ನೂ ಹಲವು ಟೂರ್ನಿಗಳ ಮೇಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಮುಗಿದ ನಂತರ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಇಂಗ್ಲೆಂಡ್‌ನಲ್ಲಿಯೇ ಆರಂಭವಾಗಲಿದೆ. ಹೀಗಾಗಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಮತ್ತು ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗೆ ಬೃಹತ್ ತಂಡವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದೆ.

ಭಾರತ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳುವ ಸಮಯದಲ್ಲಿಯೇ ಜುಲೈ ತಿಂಗಳಿನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ 3 ಏಕದಿನ ಮತ್ತು 3 ಟಿ ಟ್ವೆಂಟಿ ಪಂದ್ಯಗಳ ಸರಣಿಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗಿದ್ದು ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳುವ ತಂಡವನ್ನು ಬಿಟ್ಟು ಉಳಿದ ಆಟಗಾರರ ತಂಡವೊಂದನ್ನು ಶ್ರೀಲಂಕಾ ಪ್ರವಾಸಕ್ಕೆ ಕಳುಹಿಸಲಿದೆ ಬಿಸಿಸಿಐ.

3 ಏಕದಿನ ಪಂದ್ಯಗಳು ಜುಲೈ 13, 16 ಹಾಗೂ 19ರಂದು ಮತ್ತು 3 ಟಿ ಟ್ವೆಂಟಿ ಪಂದ್ಯಗಳು ಜುಲೈ 22, 24 ಹಾಗೂ 27ರಂದು ನಡೆಯಲಿದ್ದು, ಪಂದ್ಯ ನಡೆಯುವ ಸ್ಥಳಗಳನ್ನು ಇನ್ನೂ ನಿಶ್ಚಯಿಸಿಲ್ಲ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆ ಎಲ್ ರಾಹುಲ್ ಹಾಗೂ ಜಸ್ಪ್ರೀತ್ ಬುಮ್ರಾ ಸೇರಿದಂತೆ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಆಟಗಾರರು ಶ್ರೀಲಂಕಾ ಸರಣಿಗೆ ಅಲಭ್ಯರಾಗಲಿದ್ದು ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಆಟಗಾರರನ್ನು ಈ ಸರಣಿಗೆ ಆಯ್ಕೆ ಮಾಡಲಾಗುವ ಸಂಭವವಿದ್ದು ಈ ಕೆಳಕಂಡ ಆಟಗಾರರು ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿ ಇದೆ.

ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆಯಾಗುವ ಸಂಭವವಿರುವ ಆಟಗಾರರೆಂದರೆ : ಶಿಖರ್ ಧವನ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಹಾಲ್, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ಪೃಥ್ವಿ ಶಾ, ದೀಪಕ್ ಚಾಹರ್, ರಾಹುಲ್ ಚಾಹರ್, ಜಯದೇವ್ ಉನಾದ್ಕತ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಹಾಗೂ ರಾಹುಲ್ ತೆವಾಟಿಯಾ ಸೇರಿದಂತೆ ಮತ್ತಷ್ಟು ಆಟಗಾರರು ಆಯ್ಕೆಯಾಗುವ ಸಾಧ್ಯತೆಯಿದೆ.

Story first published: Monday, May 10, 2021, 20:14 [IST]
Other articles published on May 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X