ಇಂಗ್ಲೆಂಡ್ ವಿರುದ್ಧದ 3 ಟೆಸ್ಟ್ ಪಂದ್ಯಗಳಿಗಾಗಿ ಭಾರತದ ತಂಡ ಪ್ರಕಟ


ನವದೆಹಲಿ, ಜುಲೈ 18: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯು ಆಗಸ್ಟ್ 1ರಿಂದ ಆರಂಭಗೊಳ್ಳಲಿದ್ದು, ಕ್ರಿಕೆಟ್ ಸಮಿತಿ ಮೂರು ಟೆಸ್ಟ್ ಪಂದ್ಯಗಳಿಗಾಗಿ ಭಾರತದ ತಂಡವನ್ನು ಪ್ರಕಟಿಸಿದೆ. ಪ್ರಕಟಿಸಿರುವ ತಂಡದಲ್ಲಿ ಯುವ ಸ್ಫೋಟಕ ಬ್ಯಾಟ್ಸ್ಮನ್ ರಿಷಬ್ ಪಂತ್ ಅವರೂ ಇದ್ದಾರೆ.
ಆಗಸ್ಟ್ 1ರಿಂದ ಸೆಪ್ಟೆಂಬರ್ 7ರ ವರೆಗೆ ಈ ಟೆಸ್ಟ್ ಸರಣಿ ನಡೆಯಲಿದೆ. ಪಂತ್ ಜೊತೆಗೆ ಕರುಣ್ ನಾಯರ್ ಕೂಡ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಆದರೆ ಬೆನ್ನು ನೋವಿನ ಕಾರಣದಿಂದಾಗಿ ಭುವನೇಶ್ವರ್ ಕುಮಾರ್ ತಂಡದಿಂದ ಹೊರಗುಳಿದಿದ್ದಾರೆ.
ಟೆಸ್ಟ್ ಸರಣಿಯು ಒಟ್ಟು 5 ಪಂದ್ಯಗಳನ್ನು ಒಳಗೊಂಡಿದ್ದು, ಈಗ ಆರಂಭಿಕ ಮೂರು ಪಂದ್ಯಗಳಿಗಾಗಿ ಮಾತ್ರ ಬಿಸಿಸಿಐ ತಂಡ ಪ್ರಕಟಿಸಿದೆ. ಉಳಿದೆರಡು ಪಂದ್ಯಗಳಿಗಾಗಿ ತಂಡದಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಸದ್ಯ ಪ್ರಕಟಿಸಿರುವ ತಂಡದಲ್ಲಿ ವೇಗಿ ಮೊಹಮ್ಮದ್ ಶಮಿಯೂ ಇದ್ದಾರೆ.
ಸಂಭಾವ್ಯ ಭಾರತ ತಂಡ
ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಮುರಳಿ ವಿಜಯ್, ಚೇತೇಶ್ವರ ಪೂಜಾರಾ, ಅಜಿಂಕ್ಯ ರಹಾನೆ (ವಿ.ಸಿ), ಕರುಣ್ ನಾಯರ್, ದಿನೇಶ್ ಕಾರ್ತಿಕ್ (ವಿಕೆ), ರಿಷಬ್ ಪಂತ್ (ವಿ.ಕೆ), ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಾಸ್ಪ್ರಿತ್ ಬುಮ್ರಾ, ಶಾರ್ದೂಲ್ ಠಾಕೂರ್.
ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಸೋತಿರುವ ಭಾರತ, ಟೆಸ್ಟ್ ಸರಣಿಯನ್ನು ಗೆಲ್ಲುವ ನಿರೀಕ್ಷೆಯಿದೆ. ಇಂಗ್ಲೆಂಡ್ ಪ್ರವಾಸ ಸರಣಿಗಳಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ಗೆದ್ದುಕೊಂಡಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications