ಇಂಗ್ಲೆಂಡ್ ಟೆಸ್ಟ್ ಸರಣಿಗೂ ಮುನ್ನ ಭಾರತ-ಭಾರತ 'ಎ' ಮಧ್ಯೆ ಪಂದ್ಯ

ಲಂಡನ್: ಫೆಬ್ರವರಿ 5ರಿಂದ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಭಾರತದಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಆ ಬಳಿಕ ಇಂಗ್ಲೆಂಡ್‌ಗೆ ಪ್ರವಾಸ ಹೋಗಲಿರುವ ಭಾರತ ತಂಡ ಆಥಿಯೇಯರ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈ ಸರಣಿಗೂ ಮುನ್ನ ಭಾರತ ಮತ್ತು ಭಾರತ 'ಎ' ಮಧ್ಯೆ ನಾಲ್ಕು ದಿನಗಳ ಅಭ್ಯಾಸ ಪಂದ್ಯ ನಡೆಯಲಿದೆ.
ಮುಂಬರಲಿರುವ ಜುಲೈನಲ್ಲಿ ಭಾರತ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಭಾರತ ಮತ್ತು ಭಾರತ 'ಎ' ತಂಡಗಳ ಮಧ್ಯೆ ಅಭ್ಯಾಸ ಪಂದ್ಯ ನಡೆಯಲಿದೆ. ನಾರ್ಥಾಂಪ್ಟನ್ಶೈರ್ ಕೌಂಟಿ ಗ್ರೌಂಡ್‌ನಲ್ಲಿ ಭಾರತ ಮತ್ತು ಭಾರತ 'ಎ' ಮುಖಾಮುಖಿಯಾಗಲಿವೆ ಎಂದು ತಿಳಿದು ಬಂದಿದೆ.
ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಐದು ಪಂದ್ಯಗಳ ಟೆಸ್ಟ್ ಸರಣಿ ಅಸಲಿಗೆ ನಡೆಯೋದು ಆಗಸ್ಟ್-ಸೆಪ್ಟೆಂಬರ್‌ನಲ್ಲಿ. ಆರಂಭಿಕ ಟೆಸ್ಟ್ ಪಂದ್ಯ ನ್ಯಾಟಿಂಗ್‌ಹ್ಯಾಮ್‌ನಲ್ಲಿ ಆಗಸ್ಟ್ 4ರಿಂದ ಆರಂಭಗೊಳ್ಳಲಿದೆ. ಇದಕ್ಕೂ ಮುನ್ನ ಭಾರತ ಮತ್ತು ಭಾರತ 'ಎ' ಮಧ್ಯೆ ಅಭ್ಯಾಸ ಪಂದ್ಯ ನಡೆಯಲಿದೆ.
'ಈ ಬೇಸಗೆಯಲ್ಲಿ ವಿಶ್ವದ ಕೆಲ ಅತ್ಯುತ್ತಮ ಅಂತಾರಾಷ್ಟ್ರೀಯ ಆಟಗಾರರು ಕೌಂಟಿ ಗ್ರೌಂಡ್‌ನಲ್ಲಿ ಪ್ರದರ್ಶನ ನೀಡಲಿದ್ದಾರೆ. ನಾವು ಭಾರತ ಮತ್ತು ಭಾರತ 'ಎ'ಗೆ ಆತ್ಮೀಯ ಸ್ವಾಗತ ಕೋರುತ್ತಿದ್ದೇವೆ,' ಎಂದು ನಾರ್ಥಾಂಪ್ಟನ್ಶೈರ್ ಕೌಂಟಿ ಕ್ರಿಕೆಟ್ ಕ್ಲಬ್ ಹೇಳಿದೆ. ಇಂಗ್ಲೆಂಡ್‌ಗೆ ಭಾರತದ ಪ್ರವಾಸ ಐದು ಟೆಸ್ಟ್ ಪಂದ್ಯಗಳನ್ನಷ್ಟೇ ಒಳಗೊಂಡಿರಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications