ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ ವಿರುದ್ಧದ ಪಿಂಕ್ ಬಾಲ್ ಟೆಸ್ಟ್‌ನ ಬಗ್ಗೆ ಖಚಿತ ಮಾಹಿತಿ ನೀಡಿದ ಸೌರವ್ ಗಂಗೂಲಿ

India to play Pink ball test against England in Ahmedabad next year, says Sourav Ganguly

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಇಂಗ್ಲೆಂಡ್ ವಿರುದ್ಧ ಭಾರತ ಹಗಲು ರಾತ್ರಿ ಟೆಸ್ಟ್ ಪಂದ್ಯವನ್ನು ಆಡಲಿದೆ ಎಂದು ತಿಳಿಸಿದ್ದಾರೆ. ಮುಂದಿನ ವರ್ಷದಾರಂಭದಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ನಡೆಯಲಿದೆ. ಅಹ್ಮದಾಬಾದ್ ನಲ್ಲಿ ನಡೆಯುವ ಟೆಸ್ಟ್ ಸರಣಿ ಅಹರ್ನಿಶಿಯಾಗಿ ಸಾಗಲಿದೆ ಎಂದು ಗಂಗೂಲಿ ಖಚಿತಪಡಿಸಿದ್ದಾರೆ.

ಇಂಗ್ಲೆಂಡ್ ತಂಡ ಮುಂದಿನ ಜನವರಿಯಿಂದ ಮಾರ್ಚ್ ಮಧ್ಯೆ ಟೆಸ್ಟ್ ಹಾಗೂ ಸೀಮಿತ ಓವರ್‌ಗಳ ಸರಣಿಗಾಗಿ ಪ್ರವಾಸವನ್ನು ಕೈಗೊಳ್ಳಲಿದೆ. ಈ ಸರಣಿಯ ಬಗ್ಗೆ ಕೊಲ್ಕತಾದ ಪ್ಲೆಸ್ ಕ್ಲಬ್‌ನಲ್ಲಿ ಸಿಪಿಐ(ಎಂ)ನ ಶಾಸಕ ಅಶೋಕ್ ಭಟ್ಟಾಚಾರ್ಯ ಅವರ ಪುಸ್ತಕವನ್ನು ಬಿಡುಗಡೆಗೊಳಿಸಿ ಸೌರವ್ ಗಂಗೂಲಿ ಮಾತನಾಡಿದರು. ಈ ವೇಳೆ 'ಅಹ್ಮದಾಬಾದ್ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಅಹರ್ನಿಶಿ ಪಂದ್ಯಕ್ಕೆ ಆತಿಥ್ಯವನ್ನು ವಹಿಸಲಿದೆ' ಎಂದು ತಿಳಿಸಿದರು.

ಆಸ್ಟ್ರೇಲಿಯಾ ಪ್ರವಾಸಕ್ಕೆ ಸದ್ಯದಲ್ಲೇ ಟೀಮ್ ಇಂಡಿಯಾ ಆಟಗಾರರ ಆಯ್ಕೆಆಸ್ಟ್ರೇಲಿಯಾ ಪ್ರವಾಸಕ್ಕೆ ಸದ್ಯದಲ್ಲೇ ಟೀಮ್ ಇಂಡಿಯಾ ಆಟಗಾರರ ಆಯ್ಕೆ

ಸದ್ಯ ಕೊರೊನಾ ವೈರಸ್‌ನ ಹಾವಳಿಯಿಂದಾಗಿ 'ಐಪಿಎಲ್ 2020' ಆವೃತ್ತಿಯನ್ನು ಯುಎಇನಲ್ಲಿ ಆಯೋಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂಗ್ಲೆಂಡ್ ವಿರುದ್ದದ ಸರಣಿಗೂ ಯುಎಇ ಆತಿಥ್ಯವನ್ನು ವಹಿಸಲಿದೆ ಎಂಬ ಬಗ್ಗೆ ಮಾತುಗಳು ಕೇಳಿ ಬಂದಿತ್ತು. ಆದರೆ ಸೌರವ್ ಗಂಗೂಲಿ ಈ ಬಗ್ಗೆ ಸ್ಪಷ್ಟವಾಗಿ ಹೇಳಿಕೆ ನೀಡಿದ್ದು ಇಂಗ್ಲೆಂಡ್ ವಿರುದ್ಧದ ಸರಣಿ ಭಾರತದಲ್ಲೇ ಬಯೋಬಬಲ್ ನಿರ್ಮಿಸಿ ಏರ್ಪಡಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸಲಾಗುತ್ತದೆ ಎಂದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಸರಣಿಗಾಗಿ ಯಾವ ಸ್ಥಳಗಳಲ್ಲಿ ಪಂದ್ಯಗಳನ್ನು ಏರ್ಪಡಿಸಬಹುದು ಎಂಬ ಪ್ರಶ್ನೆಗೆ 'ಸದ್ಯಕ್ಕೆ ನಾವು ತಾತ್ಕಾಲಿಕ ಯೋಜನೆಗಳನ್ನು ರೂಪಿಸಿಕೊಂಡಿದ್ದು ಯಾವುದನ್ನೂ ಅಂತಿಮಗೊಳಿಸಿಲ್ಲ. ನಮಗಿನ್ನೂ ನಾಲ್ಕು ತಿಂಗಳುಗಳ ಕಾಲಾವಕಾಶವಿದೆ' ಎಂದು ಸೌರವ್ ಗಂಗೂಲಿ ಪ್ರತಿಕ್ರಿಯಿಸಿದ್ದಾರೆ. ಟೆಸ್ಟ್ ಸರಣಿಯ ಮೂರು ಪಂದ್ಯಗಳನ್ನು ಅಹ್ಮದಾಬಾದ್, ಧರ್ಮಶಾಲಾ ಹಾಗೂ ಕೊಲ್ಕತಾದಲ್ಲಿ ನಡೆಸಲು ಯೋಜನೆ ಸಿದ್ಧವಾಗಿದೆ ಎಂಬ ಮಾಹಿತಿಗಳು ದೊರೆತಿದೆ.

Story first published: Wednesday, October 21, 2020, 10:29 [IST]
Other articles published on Oct 21, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X