ಕ್ರಿಕೆಟ್: ಐರ್ಲೆಂಡ್ ಪ್ರವಾಸಕ್ಕೆ ಭಾರತ, ವೇಳಾಪಟ್ಟಿ ಪ್ರಕಟ

Posted By:
India to tour Ireland in June for two T20Is

ಮುಂಬೈ, ಜನವರಿ 10 : ಟೀಂ ಇಂಡಿಯಾ ಎರಡು ಟಿ20 ಪಂದ್ಯಗಳ ಸರಣಿಯನ್ನಾಡಲು ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ ಎಂದು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ)ಯ ಕಾರ್ಯದರ್ಶಿ ಅಮಿತಾಬ್ ಚೌಧರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈನಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯ ಮುನ್ನ ಜೂನ್ ಕೊನೆ ವಾರದಲ್ಲಿ ಭಾರತ ತಂಡ ಐರ್ಲೆಂಡ್ ವಿರುದ್ಧ ಎರಡು ಟಿ20 ಪಂದ್ಯಗಳ ಸರಣಿಯನ್ನಾಡಲಿದೆ ಎಂದು ಅಮಿತಾಬ್ ಚೌಧರಿ ತಿಳಿಸಿದರು.

ಜೂನ್ 27 ಮೊದಲ ಟಿ20 ಹಾಗೂ ಜೂನ್ 29ರಂದು ಎರಡನೇ ಟಿ20 ಪಂದ್ಯ ನಡೆಯಲಿದೆ. 2007ರ ನಂತರ ಭಾರತ ಇದೇ ಮೊದಲ ಬಾರಿಗೆ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ.

ಈ ಹಿಂದೆ ಟೀಂ ಇಂಡಿಯಾ 2007ರಲ್ಲಿ ಐರ್ಲೆಂಡ್ ಪ್ರವಾಸ ಕೈಗೊಂಡಿತ್ತು. ಈ ಸರಣಿಯಲ್ಲಿ ಭಾರತ ಐರ್ಲೆಂಡ್ ತಂಡವನ್ನು ಡೆಕ್ವರ್ಥ್ ಲೂಯಿಸ್ ಪ್ರಕಾರ 9 ವಿಕೆಟ್ ಗಳಿಂದ ಸೋಲಿಸಿತ್ತು. ಇದಾದ ಬಳಿಕ 2009ರ ಐಸಿಸಿ ಟಿ20 ವಿಶ್ವಕಪ್ ನಲ್ಲಿ ಉಭಯ ತಂಡಗಳು ಒಮ್ಮೆ ಮಾತ್ರ ಮುಖಾಮುಖಿಯಾಗಿದ್ದವು.

ಸದ್ಯ ಟೀಂ ಇಂಡಿಯಾ ದಕ್ಷಿಣಾ ಆಫ್ರಿಕಾ ಪ್ರವಾಸದಲ್ಲಿದೆ.

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Wednesday, January 10, 2018, 17:36 [IST]
Other articles published on Jan 10, 2018

myKhel ನಿಂದ ತಾಜಾ ಸುದ್ದಿಗಳನ್ನು ಪಡೆಯಿರಿ