
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಟೀಮ್ ಇಂಡಿಯಾ ವಿಚಾರವಾಗಿ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಶ್ರೀಲಂಕಾ ವಿರುದ್ಧ ಸೀಮಿತ ಓವರ್‌ಗಳ ಸರಣಿಗಾಗಿ ಭಾರತ ತಂಡ ಶ್ರೀಲಂಕಾಗೆ ಜುಲೈ ತಿಂಗಳಲ್ಲಿ ಪ್ರವಾಸ ಮಾಡಲಿದೆ ಎಂಬುದನ್ನು ಖಚಿತಪಡಿಸಿದ್ದಾರೆ.
ಆದರೆ ಈ ಸರಣಿಯಲ್ಲಿ ಭಾರತದ ಪ್ರಮುಖ ಆಟಗಾರರಾದ ನಾಯಕ ವಿರಾಟ್ ಕೊಹ್ಲಿ, ಉಪ ನಾಯಕ ರೋಹಿತ್ ಶರ್ಮಾ ಅವರಂತಾ ಪ್ರಮುಖ ಆಟಗಾರರು ಈ ಸರಣಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದನ್ನು ಕೂಡ ಗಂಗೂಲಿ ಸ್ಪಷ್ಟಪಡಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳುವ ಕಾರಣ ಪ್ರಮುಖ ಆಟಗಾರರ ಅಲಭ್ಯತೆಯಲ್ಲಿ ಈ ಸರಣಿ ಆಯೋಜನೆಯಾಗಲಿದೆ.
ಪಿಟಿಐ ಜೊತೆಗೆ ಮಾತನಾಡಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಜುಲೈ ತಿಂಗಳಿನಲ್ಲಿ ಶ್ರೀಲಂಕಾಗ ಎಪ್ರವಾಸ ತೆರಳಿ ಏಕದಿನ ಹಾಗೂ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲು ನಾವು ಯೋಜನೆಯನ್ನು ರೂಪಿಸಿದ್ದೇವೆ ಎಂದು ಗಂಗೂಲಿ ಹೇಳಿದ್ದಾರೆ.
"ಹೌದು ಇದು ಸೀಮಿತ ಓವರ್‌ಗಳ ಸ್ಪೆಶಲಿಸ್ಟ್‌ಗಳ ತಂಡವೇ ಆಗಿರುತ್ತದೆ. ಇದೊಂದು ವಿಭಿನ್ನವಾದ ತಂಡವಾಗಿರಲಿದೆ ಎಂದು ಸೌರವ್ ಗಂಗೂಲಿ ಈ ಸಂದರ್ಭದಲ್ಲಿ ಖಚಿತಪಡಿಸಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲಿರುವ ಈ ತಂಡದಲ್ಲಿ ಇರುವುದಿಲ್ಲ ಎಂಬುದು ಸ್ಪಷ್ಟವಾಗಿದೆ.
ಇಂಗ್ಲೆಂಡ್ ಪ್ರವಾಸದಲ್ಲಿಲ್ಲದ ಶಿಖರ್ ಧವನ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಯುಜುವೇಂದ್ರ ಚಾಹರ್ ಜೊತೆಗೆ ಪೃಥ್ವಿ ಶಾ, ರಾಹುಲ್ ಚಾಹರ್, ಕನ್ನಡಿಗ ದೇವದತ್ ಪಡಿಕ್ಕಲ್, ಚೇತನ್ ಸಕಾರಿಯಾಕೂಡ ಅವಕಾಶ ಪಡೆಯುವ ಸಾಧ್ಯತೆಗಳು ಕಂಡು ಬರುತ್ತಿದೆ.