For Quick Alerts
ALLOW NOTIFICATIONS  
For Daily Alerts
 

World Cup 2023 Points Table: ಪಾಕ್ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಭಾರತ; ಸೆಮಿಸ್‌ಗೆ ಹತ್ತಿರ

ಶನಿವಾರ, ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 12ನೇ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿದ ನಂತರ, ಭಾರತ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.

2023ರ ಏಕದಿನ ವಿಶ್ವಕಪ್‌ನಲ್ಲಿ ತಮ್ಮ ಗೆಲುವಿನ ಓಟವನ್ನು ಮುಂದುವರೆಸಿರುವ ಆತಿಥೇಯ ಭಾರತ ತಂಡ ಸತತ ಮೂರನೇ ಗೆಲುವು ಸಾಧಿಸಿ ಅಜೇಯವಾಗಿ ಮುನ್ನಗ್ಗುತ್ತಿದೆ. ಇನ್ನು ವಿಶ್ವಕಪ್‌ ಇತಿಹಾಸದಲ್ಲಿ ಭಾರತ ತಂಡವು ಪಾಕಿಸ್ತಾನ ವಿರುದ್ಧ ಅಜೇಯ 8ನೇ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಮೇಲುಗೈ ಸಾಧಿಸಿದೆ.

ಪಾಕಿಸ್ತಾನ ವಿರುದ್ಧ ಮಾರಕ ಬೌಲಿಂಗ್ ಪ್ರದರ್ಶನದ ನಂತರ, ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಅವರ ಅಮೋಘ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನ ತಂಡವನ್ನು 7 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು.

india-tops-the-icc-world-cup-2023-points-table

ಈ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಪ್ರಸ್ತುತ +1.821ರ ಅದ್ಭುತ ನೆಟ್ ರನ್‌ರೇಟ್ (NRR) ನೊಂದಿಗೆ ಮೂರು ಪಂದ್ಯಗಳಿಂದ ಆರು ಅಂಕಗಳನ್ನು ಸಂಪಾದಿಸಿ ಅಗ್ರಸ್ಥಾನ ತನ್ನದಾಗಿಸಿಕೊಂಡಿದೆ.

ಇನ್ನು ನ್ಯೂಜಿಲೆಂಡ್ ತಂಡ ಕೂಡ ಮೂರು ಪಂದ್ಯಗಳಿಂದ ಆರು ಪಾಯಿಂಟ್‌ಗಳನ್ನು ಹೊಂದಿದೆ. ಆದರೆ +1.604ರ ಕಡಿಮೆ ನೆಟ್ ರನ್‌ರೇಟ್‌ನಿಂದ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ತಂಡ ಎರಡು ಪಂದ್ಯಗಳಿಂದ ನಾಲ್ಕು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಆದರೆ ಅದು +2.360ರ ಅತ್ಯುತ್ತಮ ನೆಟ್ ರನ್‌ರೇಟ್‌ ಹೊಂದಿದೆ.

ಪಾಕಿಸ್ತಾನ ತಂಡ ಈ ವಿಶ್ವಕಪ್‌ನಲ್ಲಿ ತನ್ನ ಮೊದಲ ಪಂದ್ಯವನ್ನು ಸೋತಿದೆ ಮತ್ತು ಮೂರು ಪಂದ್ಯಗಳಿಂದ ನಾಲ್ಕು ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಮುಂದುವರೆದಿದೆ. 2 ಪಂದ್ಯಗಳಿಂದ 2 ಅಂಕಗಳೊಂದಿಗೆ ಇಂಗ್ಲೆಂಡ್ ಐದನೇ ಸ್ಥಾನದಲ್ಲಿದ್ದರೆ, ಮೂರು ಪಂದ್ಯಗಳಿಂದ 2 ಅಂಕ ಗಳಿಸಿರುವ ಬಾಂಗ್ಲಾದೇಶ ತಂಡ 6ನೇ ಸ್ಥಾನದಲ್ಲಿದೆ.

india-tops-the-icc-world-cup-2023-points-table

ಇನ್ನು 2023ರ ಏಕದಿನ ವಿಶ್ವಕಪ್‌ನಲ್ಲಿ ಈವರೆಗೆ ಒಂದೂ ಪಂದ್ಯ ಗೆಲ್ಲಲು ವಿಫಲವಾಗಿರುವ ಶ್ರೀಲಂಕಾ, ನೆದರ್ಲ್ಯಾಂಡ್ಸ್, ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ತಂಡಗಳು ನಂತರದ ಸ್ಥಾನದಲ್ಲಿವೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಾಯಕ ಬಾಬರ್ ಅಜಂ ಅವರ ಏಕೈಕ ಅರ್ಧಶತಕದ ನೆರವಿನಿಂದ 42.5 ಓವರ್‌ಗಳಲ್ಲಿ 191 ರನ್‌ಗಳಿಗೆ ಆಲೌಟ್ ಆಯಿತು.

192 ರನ್‌ಗಳ ಸುಲಭ ಗುರಿ ಬೆನ್ನಟ್ಟಿದ ಆತಿಥೇಯ ಭಾರತ ತಂಡ ರೋಹಿತ್ ಶರ್ಮಾ ಅವರ ಸ್ಫೋಟಕ ಅರ್ಧಶತಕದ ಸಹಾಯದಿಂದ ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್‌ ಗಳಿಸುವ ಮೂಲಕ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಭಾರತ ತಂಡದ ನಾಯಕ ರೋಹಿತ್ ಶರ್ಮಾ 63 ಎಸೆತಗಳಲ್ಲಿ 6 ಬೌಂಡರಿ ಹಾಗೂ 6 ಸಿಕ್ಸರ್ ಮೂಲಕ 86 ರನ್ ಬಾರಿಸಿದರೆ, ಶ್ರೇಯಸ್ ಅಯ್ಯರ್ ಕೂಡ ಬ್ಯಾಟಿಂಗ್ ಫಾರ್ಮ್‌ಗೆ ಮರಳಿದ್ದು, 61 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 53 ರನ್ ಗಳಿಸುವ ಮೂಲಕ ವಿಶ್ವಕಪ್‌ನಲ್ಲಿ ತಮ್ಮ ಮೊದಲ ಅರ್ಧಶತಕ ಗಳಿಸಿದರು.

ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಜೋಡಿ ಮುರಿಯದ 4ನೇ ವಿಕೆಟ್‌ಗೆ 46 ರನ್‌ಗಳ ಜೊತೆಯಾಟ ನೀಡಿದರು. ಕೆಎಲ್ ರಾಹುಲ್ ಕೂಡ 29 ಎಸೆತಗಳಲ್ಲಿ ಅಜೇಯ 19 ರನ್ ಗಳಿಸಿದರು.

ಪಾಕಿಸ್ತಾನ ತಂಡದ ಪರ ಬೌಲಿಂಗ್‌ನಲ್ಲಿ ಶಾಹೀನ್ ಅಫ್ರಿದಿ 6 ಓವರ್‌ಗಳಲ್ಲಿ 36 ರನ್ ನೀಡಿ 2 ವಿಕೆಟ್ ಪಡೆದರೆ, ಹಸನ್ ಅಲಿ 6 ಓವರ್‌ಗಳಲ್ಲಿ 34 ರನ್ ನೀಡಿ 1 ವಿಕೆಟ್ ಪಡೆದರು.

Story first published: Saturday, October 14, 2023, 21:27 [IST]
Other articles published on Oct 14, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+