
ಶ್ರೇಯಸ್ ಅಯ್ಯರ್, ಕುಲ್ದೀಪ್ ಆಯ್ಕೆ
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಶ್ರೇಯಸ್ ಅಯ್ಯರ್ ಮತ್ತು ಕುಲದೀಪ್ ಯಾದವ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಎಡಗೈ ಚೈನಾಮನ್ ಬೌಲರ್, ಕುಲ್ದೀಪ್, ಕೊನೆಯ ಬಾರಿಗೆ ದಕ್ಷಿಣ ಆಫ್ರಿಕಾ ವಿರುದ್ಧ ಸ್ವದೇಶದಲ್ಲಿ ಆಡಿದರು, ಮೂರು ಏಕದಿನ ಪಂದ್ಯಗಳಲ್ಲಿ 6 ವಿಕೆಟ್ ಪಡೆದಿದ್ದರು. ಅದರಲ್ಲೂ ಒಂದೇ ಪಂದ್ಯದಲ್ಲಿ 18 ರನ್ ನೀಡಿ 4 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಮುಖ್ಯಪಾತ್ರ ವಹಿಸಿದ್ದರು.
ಶ್ರೇಯಸ್ ಅಯ್ಯರ್ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾದ ನಂತರ, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಮೂರು ಏಕದಿನ ಪಂದ್ಯಗಳಲ್ಲಿ 103, 52 ಮತ್ತು 62 ರನ್ ಗಳಿಸುವ ಮೂಲಕ ಆಯ್ಕೆದಾರರ ಗಮನ ಸೆಳೆದಿದ್ದರು.
5 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಅವರು 153 ರನ್ ಗಳಿಸಿದ್ದಾರೆ.
IND vs SA: ಪಂತ್ ಬದಲು ದೀಪಕ್ ಹೂಡಾ ಆಯ್ಕೆಯಾಗಿದ್ದಕ್ಕೆ ಆಶ್ಚರ್ಯಗೊಂಡ ವಾಸಿಂ ಜಾಫರ್

ವೇಗದ ಬೌಲರ್ ಉಮ್ರಾನ್ ಮಲಿಕ್ ಆಯ್ಕೆ
ತಮ್ಮ ವೇಗದ ಬೌಲಿಂಗ್ ಮೂಲಕ ಹಲವು ಪ್ರಮುಖ ಕ್ರಿಕೆಟಿಗರಿಂದ ಮೆಚ್ಚುಗೆಗೆ ಪಾತ್ರವಾಗಿದ್ದ ಉಮ್ರಾನ್ ಮಲಿಕ್ ತಂಡಕ್ಕೆ ವಾಪಸಾಗಿದ್ದಾರೆ. ಅವರನ್ನು ಟಿ20 ವಿಶ್ವಕಪ್ ತಂಡದಲ್ಲಿ ಸೇರಿಸಿಕೊಳ್ಳದ್ದಕ್ಕೆ ಹಲವರು ಬೇಸರ ವ್ಯಕ್ತಪಡಿಸಿದ್ದರು. ಉಮ್ರಾನ್ ಮಲಿಕ್ ಇದುವರೆಗೂ ಭಾರತದ ಪರವಾಗಿ ಕೇವಲ ಮೂರು ಪಂದ್ಯಗಳನ್ನು ಮಾತ್ರ ಆಡಿದ್ದಾರೆ.
ವಿಶ್ವ ಕಪ್ ತಂಡದಲ್ಲಿ ಉಮ್ರಾನ್ ಸಂಭಾವ್ಯ ಸ್ಥಾನಕ್ಕೆ ಅರ್ಹರಾಗಿರುತ್ತಾರೆ ಎಂಬ ಬಗ್ಗೆ ಭಾರಿ ಕೂಗು ಕೇಳಿಬಂದಿದೆ ಆದರೆ ಆಯ್ಕೆದಾರರು ನ್ಯೂಜಿಲೆಂಡ್ ಪ್ರವಾಸಕ್ಕೆ ಆಯ್ಕೆ ಮಾಡಿದ್ದಾರೆ. ವಾಸಿಂ ಅಕ್ರಂ, ಬ್ರೆಟ್ ಲೀ ಮತ್ತು ಡೇಲ್ ಸ್ಟೇಯ್ನ್ ಅವರಂತಹ ವೇಗದ ಬೌಲರ್‌ಗಳು ಕೂಡ ಉಮ್ರಾನ್ ಮಲಿಕ್ ಪರವಾಗಿ ಮಾತನಾಡಿದ್ದಾರೆ. ನ್ಯೂಜಿಲೆಂಡ್ ಪರಿಸ್ಥಿತಿಗಳಲ್ಲಿ ವೇಗದ ಮತ್ತು ಬೌನ್ಸಿ ಪಿಚ್‌ಗಳಲ್ಲಿ ಉಮ್ರಾನ್ ಮಲಿಕ್ ಮಾರಕ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ.

ನ್ಯೂಜಿಲೆಂಡ್ ಸರಣಿಗೆ ಟಿ20 ಮತ್ತು ಏಕದಿನ ತಂಡ
ಭಾರತದ ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ), ಇಶಾನ್ ಕಿಶನ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್.
ಭಾರತ ಏಕದಿನ ತಂಡ: ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ಉಪನಾಯಕ), ಶುಭಮನ್ ಗಿಲ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಕುಲದೀಪ್ ಯಾದವ್, ಶಹಬಾಜ್ ಅಹ್ಮದ್, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಕುಲದೀಪ್ ಸೇನ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.


Click it and Unblock the Notifications
