ಟೀಮ್ ಇಂಡಿಯಾದಲ್ಲಿ ಯಾರೆಲ್ಲಾ ಹೊಸ ಆಟಗಾರರಿಗೆ ಸ್ಥಾನ? ಏನೆಲ್ಲಾ ಬದಲಾವಣೆ?

ನವೆಂಬರ್ ತಿಂಗಳಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಮೂರು ಸ್ವರೂಪದ ಕ್ರಿಕೆಟ್ ಸರಣಿಗೆ ಚಾಲನೆ ಸಿಗಲಿದ್ದು, ಮೂರು ಏಕದಿನ, ಮೂರು ಟಿ20 ಬಳಿಕ ನಾಲ್ಕು ಟೆಸ್ಟ್ ಪಂದ್ಯಗಳು ನಡೆಯಲಿವೆ.
ಈ ದೀರ್ಘಾವಧಿ ಸರಣಿಗೆ ಬಿಸಿಸಿಐ ಇಂದು ಟೀಮ್ ಇಂಡಿಯಾ ಆಟಗಾರರನ್ನು ಆಯ್ಕೆ ಮಾಡಿದೆ.
ಟಿ20, ಏಕದಿನ ಮತ್ತು ಟೆಸ್ಟ್ ಹೀಗೆ ಮೂರು ಫಾರ್ಮೆಟ್‌ಗೆ ತಕ್ಕಂತೆ ಬಿಸಿಸಿಐ ಹಿರಿಯ ಆಟಗಾರರ ಆಯ್ಕೆ ಸಮಿತಿಯು ಕೊಹ್ಲಿ ಪಡೆಯನ್ನು ಸಿದ್ಧಪಡಿಸಿದೆ. ಕೆಲ ಆಟಗಾರರು ಮೂರು ಫಾರ್ಮೆಟ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಮತ್ತೆ ಕೆಲವರು ಒಂದೇ ಸ್ವರೂಪದ ಕ್ರಿಕೆಟ್ ಫಾರ್ಮೆಟ್‌ನಲ್ಲಿ ಅವಕಾಶ ಗಿಟ್ಟಿಸಿದ್ದಾರೆ. ಇದರ ನಡುವೆ ಟೀಮ್ ಇಂಡಿಯಾದಲ್ಲಿ ಹೊಸ ಆಟಗಾರರು ಸ್ಥಾನ ಪಡೆದಿದ್ದಾರೆ.
ಟೆಸ್ಟ್ ತಂಡದಲ್ಲಿ ಇದೇ ಮೊದಲ ಬಾರಿಗೆ ಶುಭ್ಮನ್ ಗಿಲ್, ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ಸ್ಥಾನ ಪಡೆದಿದ್ದಾರೆ . ಜೊತೆಗೆ ಅನುಭವಿ ಆಟಗಾರ ಕೆ.ಎಲ್ ರಾಹುಲ್ , ಯುವ ಆಟಗಾರ ಪೃಥ್ವಿ ಶಾ ಮತ್ತೆ ತಂಡಕ್ಕೆ ಮರಳಿದ್ದಾರೆ.
ಇದೇ ಮೊದಲ ಬಾರಿಗೆ ಐಪಿಎಲ್ 13ನೇ ಆವೃತ್ತಿಯಲ್ಲಿ ಕೆಕೆಆರ್ ಪರ ಮಿಂಚುತ್ತಿರುವ ಸ್ಪಿನ್ನರ್ ವರುಣ್ ಚಕ್ರವರ್ತಿ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಏಕದಿನ ಹಾಗೂ ಟಿ20 ತಂಡದಲ್ಲಿ ಕೆ.ಎಲ್ ರಾಹುಲ್‌ಗೆ ಉಪನಾಯಕತ್ವ ಹೊಣೆ ನೀಡಲಾಗಿದೆ.
ಇನ್ನು ಮನೀಶ್ ಪಾಂಡೆ, ನವದೀಪ್ ಸೈನಿ, ಶಾರ್ದೂಲ್ ಠಾಕೂರ್ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಶಭ್ ಪಂತ್ ಕೇವಲ ಟೆಸ್ಟ್ ತಂಡದಲ್ಲಿ ಮಾತ್ರ ಸ್ಥಾನ ಪಡೆದಿದ್ದು, ಟಿ20 ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲಗೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications