ದ. ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ ಇಂದೇ ಪ್ರಕಟ; ಕೊಹ್ಲಿ ಬದಲು ಈತ ಏಕದಿನ ತಂಡದ ನೂತನ ನಾಯಕ!

ಇತ್ತೀಚೆಗಷ್ಟೇ ಟಿ ಟ್ವೆಂಟಿ ವಿಶ್ವಕಪ್ ಮುಗಿದ ಬಳಿಕ ಭಾರತ ಪ್ರವಾಸವನ್ನು ಕೈಗೊಂಡಿದ್ದ ನ್ಯೂಜಿಲೆಂಡ್ ವಿರುದ್ಧ ಟಿ ಟ್ವೆಂಟಿ ಮತ್ತು ಟೆಸ್ಟ್ ಎರಡೂ ಸರಣಿಗಳಲ್ಲಿಯೂ ಭಾರತ ಜಯ ಸಾಧಿಸುವುದರ ಮೂಲಕ ನ್ಯೂಜಿಲೆಂಡ್‌ಗೆ ಮಣ್ಣುಮುಕ್ಕಿಸಿದೆ. ಹೌದು, ಟಿ ಟ್ವೆಂಟಿ ವಿಶ್ವಕಪ್ ಮುಗಿಸಿ ಭಾರತ ಪ್ರವಾಸವನ್ನು ಕೈಗೊಂಡಿದ್ದ ನ್ಯೂಜಿಲೆಂಡ್ ಭಾರತ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಎಲ್ಲಾ ಪಂದ್ಯಗಳಲ್ಲಿಯೂ ಸೋಲುವುದರ ಮೂಲಕ ವೈಟ್ ವಾಷ್ ಮುಖಭಂಗಕ್ಕೆ ಒಳಗಾಯಿತು. ನಂತರ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲನೇ ಪಂದ್ಯವನ್ನು ಡ್ರಾ ಮಾಡಿಕೊಂಡ ನ್ಯೂಜಿಲೆಂಡ್ ದ್ವಿತೀಯ ಪಂದ್ಯದಲ್ಲಿ 372 ರನ್‌ಗಳ ಬೃಹತ್ ಅಂತರದಲ್ಲಿ ಹೀನಾಯವಾಗಿ ಸೋತಿತು.
ಹೀಗೆ ಹಾಲಿ ವಿಶ್ವ ಟೆಸ್ಟ್ ಚಾಂಪಿಯನ್ಸ್‌ಗೆ ಮಣ್ಣು ಮುಕ್ಕಿಸಿದ ವಿರಾಟ್ ಕೊಹ್ಲಿ ಪಡೆ ಇದೀಗ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲು ಸಜ್ಜಾಗುತ್ತಿದೆ. ಹೌದು, ನ್ಯೂಜಿಲೆಂಡ್ ವಿರುದ್ಧದ ಸರಣಿ ಮುಗಿದ ಬಳಿಕ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ, ಏಕದಿನ ಮತ್ತು ಟೆಸ್ಟ್ ಸರಣಿಗಳನ್ನು ಆಡಬೇಕಿತ್ತು. ಆದರೆ ದಕ್ಷಿಣ ಆಫ್ರಿಕಾದಲ್ಲಿ ಸದ್ಯ ಒಮಿಕ್ರಾನ್ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಮುಂಜಾಗ್ರತಾ ಕ್ರಮದಿಂದ ಟಿ ಟ್ವೆಂಟಿ ಸರಣಿಯನ್ನು ರದ್ದು ಮಾಡಲಾಗಿದೆ. ಒಮಿಕ್ರಾನ್ ಭೀತಿಯಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆಯಬೇಕಿದ್ದ ಪಂದ್ಯಗಳಲ್ಲಿ ಬದಲಾವಣೆಗಳಾಗಿದ್ದು ಇತ್ತಂಡಗಳ ನಡುವೆ 3 ಪಂದ್ಯಗಳ ಟೆಸ್ಟ್ ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿ ಮಾತ್ರ ನಡೆಯಲಿದೆ.
ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಪ್ರಥಮ ಪಂದ್ಯ ಡಿಸೆಂಬರ್ 17ರಿಂದ ಆರಂಭವಾಗಬೇಕಿತ್ತು. ಅದರೆ ಒಮಿಕ್ರಾನ್ ವೈರಸ್ ಕಾರಣದಿಂದಾಗಿ 9 ದಿನಗಳು ತಡವಾಗಿ ಇತ್ತಂಡಗಳ ನಡುವಿನ ಟೆಸ್ಟ್ ಸರಣಿ ಆರಂಭವಾಗಲಿದ್ದು ಡಿಸೆಂಬರ್ 26ರಂದು ಪ್ರಥಮ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಇನ್ನು ನ್ಯೂಜಿಲೆಂಡ್ ವಿರುದ್ಧದ ಸರಣಿಗಳಲ್ಲಿ ಭಾರತ ತಂಡದ ಆಟಗಾರರು ತೋರಿದ ಪ್ರದರ್ಶನ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ನಡೆಯಲಿರುವ ಆಟಗಾರರ ಆಯ್ಕೆಯ ಮೇಲೆ ಪ್ರಭಾವ ಬೀರಿರುವುದು ನಿಜ. ಇನ್ನು ಮೂಲಗಳ ಪ್ರಕಾರ ಬಿಸಿಸಿಐ ಇಂದೇ ( ಡಿಸೆಂಬರ್ 7 ) ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲಿರುವ ಭಾರತ ತಂಡವನ್ನು ಪ್ರಕಟಿಸಲಿದ್ದು ತಂಡದಲ್ಲಿ ಈ ಕೆಳಕಂಡ ಪ್ರಮುಖ ಬದಲಾವಣೆಗಳು ಆಗಲಿವೆ ಎನ್ನಲಾಗುತ್ತಿದೆ.

ಭಾರತ ಏಕದಿನ ತಂಡಕ್ಕೆ ನೂತನ ನಾಯಕನ ನೇಮಕ
ಇತ್ತೀಚೆಗಷ್ಟೇ ಭಾರತ ಟಿ ಟ್ವೆಂಟಿ ತಂಡದ ನಾಯಕನ ಸ್ಥಾನದಿಂದ ವಿರಾಟ್ ಕೊಹ್ಲಿ ಕೆಳಗಿಳಿದಿದ್ದು ನೂತನ ನಾಯಕನಾಗಿ ರೋಹಿತ್ ಶರ್ಮಾ ಅಧಿಕಾರವನ್ನು ಸ್ವೀಕರಿಸಿ ಪೂರ್ಣಾವಧಿ ನಾಯಕನಾಗಿ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಜಯ ಸಾಧಿಸುವುದರ ಮೂಲಕ ಶುಭಾರಂಭವನ್ನು ಮಾಡಿದರು. ಇದಾದ ಬೆನ್ನಲ್ಲೇ ಇದೀಗ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಪ್ರಕಟವಾಗಲಿರುವ ಭಾರತ ತಂಡಕ್ಕೆ ನೂತನ ಏಕದಿನ ನಾಯಕನ ನೇಮಕ ಕೂಡ ಆಗಲಿದ್ದು ವಿರಾಟ್ ಕೊಹ್ಲಿ ಬದಲಾಗಿ ರೋಹಿತ್ ಶರ್ಮಾ ಭಾರತ ಏಕದಿನ ತಂಡದ ನಾಯಕನಾಗಲಿದ್ದಾರೆ ಎನ್ನಲಾಗುತ್ತಿದೆ.

ಭಾರತ ಟೆಸ್ಟ್ ತಂಡದ ಉಪನಾಯಕನ ಆಯ್ಕೆ ಕೂಡ ನಡೆಯಲಿವೆ
ಇನ್ನು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಪ್ರಕಟವಾಗಲಿರುವ ಭಾರತ ಟೆಸ್ಟ್ ತಂಡದಲ್ಲಿ ಕೂಡ ದೊಡ್ಡ ಬದಲಾವಣೆಯಾಗಲಿದ್ದು ಟೆಸ್ಟ್ ತಂಡದ ಉಪನಾಯಕನ ಬದಲಾವಣೆ ಕೂಡಾ ನಡೆಯಲಿದೆ ಎನ್ನಲಾಗುತ್ತಿದೆ. ಸದ್ಯ ಭಾರತ ಟೆಸ್ಟ್ ತಂಡದ ನಾಯಕತ್ವವನ್ನು ವಿರಾಟ್ ಕೊಹ್ಲಿ ನಿಭಾಯಿಸುತ್ತಿದ್ದರೆ ಉಪನಾಯಕನ ಜವಾಬ್ದಾರಿಯನ್ನು ಅಜಿಂಕ್ಯಾ ರಹಾನೆ ನಿರ್ವಹಿಸುತ್ತಿದ್ದರು. ಆದರೆ ಅಜಿಂಕ್ಯ ರಹಾನೆ ಸಾಲುಸಾಲು ಕಳಪೆ ಪ್ರದರ್ಶನ ನೀಡುತ್ತಿರುವ ಕಾರಣದಿಂದಾಗಿ ಇದೀಗ ಭಾರತ ಟೆಸ್ಟ್ ತಂಡಕ್ಕೆ ರೋಹಿತ್ ಶರ್ಮಾ ಉಪ ನಾಯಕನಾಗುವ ಸಾಧ್ಯತೆಗಳು ಹೆಚ್ಚಿವೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿಗಳ ವೇಳಾಪಟ್ಟಿ ಹೀಗಿದೆ
ಮೊದಲಿಗೆ ಇತ್ತಂಡಗಳ ನಡುವೆ ಟೆಸ್ಟ್ ಸರಣಿ ನಡೆಯಲಿದ್ದು ಇದರ ವೇಳಾ ಪಟ್ಟಿ ಈ ಕೆಳಕಂಡಂತಿದೆ
ಮೊದಲ ಟೆಸ್ಟ್: ಡಿಸೆಂಬರ್ 26-30, ಸೂಪರ್‌ಸ್ಪೋರ್ಟ್ಸ್ ಪಾರ್ಕ್, ಸೆಂಚುರಿಯನ್
ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್
ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್ ಟೌನ್
ಹೀಗೆ 3 ಪಂದ್ಯಗಳ ಟೆಸ್ಟ್ ಸರಣಿ ಮುಗಿದ ನಂತರ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು ಅದರ ವೇಳಾಪಟ್ಟಿ ಹೀಗಿದೆ
ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM
ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM
ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್ ಟೌನ್, ಸಮಯ - 2.00 PM
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications