Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Champions Trophy 2025:ಪಾಕಿಸ್ತಾನಕ್ಕೆ ಟೀಮ್‌ ಇಂಡಿಯಾ ಪ್ರವಾಸದ ಬಗ್ಗೆ ಬಿಸಿಸಿಐ ಮೌನ; ಹೈವೋಲ್ಟೇಜ್‌ ಪಂದ್ಯಕ್ಕೆ ದಿನಾಂಕ ನಿಗದಿ

ಜುಲೈ 3 ಬುಧವಾರ, ಟಿ20 ವಿಶ್ವಕಪ್ 2024ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಉತ್ತಮ ಪೈಪೋಟಿ ಕಂಡುಬಂದಿದೆ. ಟೀಮ್‌ ಇಂಡಿಯಾ ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಪಾಕಿಸ್ತಾನ ವಿರುದ್ಧ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದು ಪ್ರಾಬಲ್ಯ ಸಾಧಿಸಿದೆ.

ಇದೀಗ ಈ ಸೋಲಿಗೆ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನ ತಂಡವು 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಹೈವೋಲ್ಟೇಜ್‌ ಪಂದ್ಯದ ದಿನಾಂಕ ಮತ್ತು ಸ್ಥಳವನ್ನು ಪಿಸಿಬಿ ನಿರ್ಧರಿಸಿದೆ. ಆದರೆ, ಇದಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಪ್ಪಿಗೆ ನೀಡಬೇಕಿದೆ.

India tour Pakistan for Champions Trophy 2025

2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಪಾಕಿಸ್ತಾನ ಆಯೋಜಿಸುತ್ತಿದೆ. ಆದರೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲಿದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಐಸಿಸಿಗೆ ವೇಳಾಪಟ್ಟಿ ಹಸ್ತಾಂತರಿಸಿದ ಪಿಸಿಬಿ

ಪಿಟಿಐ ವರದಿ ಪ್ರಕಾರ, ಪಿಸಿಬಿ 15 ಪಂದ್ಯಗಳ ಕರಡು ವೇಳಾಪಟ್ಟಿಯನ್ನು ಐಸಿಸಿಗೆ ನೀಡಿದೆ. ಪಿಸಿಬಿ ವೇಳಾಪಟ್ಟಿಯ ಪ್ರಕಾರ ಚಾಂಪಿಯನ್ಸ್‌ ಟ್ರೋಫಿ ಟೂರ್ನಿ000 ಫೆಬ್ರವರಿ 19 ರಿಂದ ಪ್ರಾರಂಭವಾಗಲಿದ್ದು, ಫೈನಲ್‌ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಪ್ರಶಸ್ತಿ ಹೋರಾಟಕ್ಕೆ ಮೀಸಲು ದಿನವನ್ನು (ಮಾರ್ಚ್ 10) ಇರಿಸಲಾಗಿದೆ.

ಮತ್ತೊಂದೆಡೆ ವರದಿಯ ಪ್ರಕಾರ ಭದ್ರತಾ ಕಾರಣಗಳಿಂದ ಟೀಮ್‌ ಇಂಡಿಯಾ ಲಾಹೋರ್‌ನಲ್ಲಿ ಎಲ್ಲಾ ಪಂದ್ಯಗಳನ್ನು ಆಡಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಫೈನಲ್ ಪಂದ್ಯಕ್ಕಾಗಿ ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಬಾರ್ಬಡೋಸ್ ತಲುಪಿದ್ದರು. ಈ ವೇಳೆ 15 ಪಂದ್ಯಗಳ ವೇಳಾಪಟ್ಟಿಯನ್ನು ಐಸಿಸಿಗೆ ನೀಡಿದ್ದಾರೆ.

ಭಾರತ vs ಪಾಕಿಸ್ತಾನ ಪಂದ್ಯ ಯಾವಾಗ?

ಪಿಸಿಬಿ ವೇಳಾಪಟ್ಟಿಯ ಪ್ರಕಾರ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಾರ್ಚ್ 1 ರಂದು ನಿಗದಿಯಾಗಿದೆ. ಉಭಯ ತಂಡಗಳ ನಡುವೆ ಈ ಪಂದ್ಯವನ್ನು ಲಾಹೋರ್‌ನಲ್ಲಿ ನಡೆಸಲು ಯೋಜನೆ ರೂಪಿಸಲಾಗಿದೆ. ಎರಡೂ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ.

ಐಸಿಸಿ ಮಂಡಳಿಯ ಸದಸ್ಯರೊಬ್ಬರು ಪಿಟಿಐಗೆ ನೀಡಿರುವ ಹೇಳಿಕೆ ಪ್ರಕಾರ, 'ಪಿಸಿಬಿ 15 ಪಂದ್ಯಗಳ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿಯನ್ನು ಪ್ರಸ್ತುತಪಡಿಸಿದೆ. ಇದರ ಪ್ರಕಾರ ಲಾಹೋರ್‌ನಲ್ಲಿ 7, ಕರಾಚಿಯಲ್ಲಿ 3 ಮತ್ತು ರಾವಲ್ಪಿಂಡಿಯಲ್ಲಿ 5 ಪಂದ್ಯಗಳು ನಡೆಯಲಿವೆ. ಚಾಂಪಿಯನ್ಸ್ ಟ್ರೋಫಿಯು ಕರಾಚಿಯಲ್ಲಿ ಆರಂಭವಾಗಲಿದ್ದು, ಎರಡು ಸೆಮಿಫೈನಲ್ ಪಂದ್ಯಗಳು ಕರಾಚಿ ಮತ್ತು ರಾವಲ್ಪಿಂಡಿಯಲ್ಲಿ ನಡೆಯಲಿವೆ. ಫೈನಲ್ ಲಾಹೋರ್‌ನಲ್ಲಿ ನಡೆಯಲಿದೆ.

ಆಯೋಜನೆಯಲ್ಲಿ ಮತ್ತೆ ಗೊಂದಲ?

ಏಷ್ಯಾಕಪ್ 2023ರ ಆತಿಥ್ಯವೂ ಪಾಕಿಸ್ತಾನದ ಕೈಯಲ್ಲಿತ್ತು. ಆದರೆ ಭದ್ರತಾ ಕಾರಣಗಳಿಂದಾಗಿ ಟೀಮ್‌ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ಸ್ಪಷ್ಟವಾಗಿ ನಿರಾಕರಿಸಿತ್ತು. ಇದರಿಂದಾಗಿ ಹಲವಾರು ತಿಂಗಳುಗಳ ಕಾಲ ಸಾಕಷ್ಟು ಸಭೆಗಳು ನಡೆಯಿತು. ಅಂತಿಮವಾಗಿ ಈ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಯಿತು. ಹೀಗಾಗಿ ಶ್ರೀಲಂಕಾದಲ್ಲಿ ಭಾರತ ತನ್ನಲ್ಲೇ ಪಂದ್ಯಗಳನ್ನು ಆಡಿತ್ತು.

ಈ ಬಾರಿಯೂ ಬಿಸಿಸಿಐ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮೂಲಗಳ ಪ್ರಕಾರ, ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ಎಲ್ಲಾ ದೇಶಗಳ ಕ್ರಿಕೆಟ್‌ ಬೋರ್ಡ್‌ ಮುಖ್ಯಸ್ಥರು ತಮ್ಮ ಬೆಂಬಲ ನೀಡುವ ಬಗ್ಗೆ ಭರವಸೆ ನೀಡಿದ್ದಾರೆ. ಬಿಸಿಸಿಐ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ. ಭಾರತ ಸರ್ಕಾರದ ಅನುಮತಿಯ ನಂತರವೇ ಬಿಸಿಸಿಐ ಈ ವಿಷಯದ ಬಗ್ಗೆ ಮೌನ ಮುರಿಯಲಿದೆ.

Story first published: Wednesday, July 3, 2024, 22:33 [IST]
Other articles published on Jul 3, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+