U19 Asia Cup: ಭಾರತ-ಪಾಕ್ ಬಿಗ್ ಫೈಟ್: ಇಲ್ಲಿದೆ ಕಂಪ್ಲೀಟ್ ಮಾಹಿತಿ
ಭಾರತ ಸದ್ಯ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯನ್ನು ಆಡುತ್ತಿದೆ. ಇದೇ ವೇಳೆ ಭಾರತ ಅಂಡರ್ 19 ತಂಡ ಏಷ್ಯಾ ಕಪ್ ನಲ್ಲಿ ಭಾಗವಹಿಸುತ್ತಿದೆ. ಭಾರತ ಭಾನುವಾರ ತನ್ನ ಮುಂದಿನ ಪಂದ್ಯದಲ್ಲಿ ಸಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿದ್ದರಿಂದ ಪಂದ್ಯ ರೋಚಕತೆ ಹೆಚ್ಚಿಸಿದೆ. ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಅಂಗಳಕ್ಕೆ ಇಳಿಯಲಿದ್ದು ಎಲ್ಲರ ಚಿತ್ತ ಕದ್ದಿದೆ.
ಉಭಯ ತಂಡಗಳು ಈಗಾಗಲೇ ಎ ಗುಂಪಿನಲ್ಲಿ ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಪಾಕ್ ಮಲೇಷ್ಯಾ ವಿರುದ್ಧ 297 ರನ್‌ಗಳಿಂದ ಗೆದ್ದರೆ, ಭಾರತ ಯುಎಇ ವಿರುದ್ಧ 234 ರನ್‌ಗಳಿಂದ ಜಯ ಸಾಧಿಸಿತ್ತು. ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ವೈಭವ್ ಸೂರ್ಯವಂಶಿ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇವರು ಯುಎಇ ವಿರುದ್ದದ ಪಂದ್ಯದಲ್ಲಿ 95 ಎಸೆತಗಳಲ್ಲಿ 9 ಬೌಂಡರಿ, 14 ಸಿಕ್ಸರ್ ಸಹಾಯದಿಂದ 171 ರನ್ ಬಾರಿಸಿ ತಂಡಕ್ಕೆ ಆಧಾರವಾಗಿದ್ದರು. ಹೀಗಾಗಿ ಈ ಆಟಗಾರನ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಮಲೇಷ್ಯಾ ವಿರುದ್ಧದ ಪಂದ್ಯದಲ್ಲಿ ಪಾಕ್ ಪರ ಶತಕ ಸಾಧನೆ ಮಾಡಿರುವ ಸಮೀರ್ ಮಿನ್ಹಾಸ್, ಅಹ್ಮದ್ ಹುಸೇನ್ ಭಾರತದ ಬೌಲರ್‌ಗಳನ್ನು ಕಾಡುವ ನಿರೀಕ್ಷೆ ಇದೆ.
ಭಾರತ, ಪಾಕ್ ನಡುವಣ ಪಂದ್ಯ ನಡೆಯುವುದು ಯಾವಾಗ?
ಭಾರತೀಯ ಕಾಲಮಾನ ಬೆಳಿಗ್ಗೆ 10:30 ಕ್ಕೆ ಆರಂಭವಾಗಲಿದೆ. ಪಂದ್ಯ ಆರಂಭಕ್ಕೂ ಅರ್ಧಗಂಟೆ ಮುನ್ನ ಟಾಸ್ ನಡೆಯಲಿದೆ.
ಭಾರತ ತಂಡವನ್ನು ಮುನ್ನಡೆಸುತ್ತಿರುವುದು ಯಾರು?
ಯುವ ಪ್ರತಿಭೆ ಆಯುಷ್ ಮಾತ್ರೆ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಪಾಕ್ ತಂಡದ ನಾಯಕ ಯಾರು?
ಪಾಕಿಸ್ತಾನ ಪರ ಫರ್ಹಾನ್ ಯೂಸುಫ್ ನಾಯಕತ್ವದ ಜವಾಬ್ದಾರಿ ಹೊತ್ತಿದ್ದಾರೆ.
ಈ ಪಂದ್ಯವನ್ನು ಎಲ್ಲಿ ನೋಡಬಹುದು?
ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪಂದ್ಯದ ನೇರ ಪ್ರಸಾರವನ್ನು ನೋಡಬಹುದು. ಅಲ್ಲದೆ, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ಪಂದ್ಯ ನೇರ ಪ್ರಸಾರ ಲಭ್ಯವಿರುತ್ತದೆ.
ಭಾರತ ತಂಡದಲ್ಲಿ ಯಾರೆಲ್ಲಾ ಇದ್ದಾರೆ?
ವೈಭವ್ ಸೂರ್ಯವಂಶಿ, ಆಯುಷ್ ಮ್ಹಾತ್ರೆ (ನಾಯಕ), ವಿಹಾನ್ ಮಲ್ಹೋತ್ರಾ, ಕನಿಷ್ಕ್ ಚೌಹಾಣ್, ಅಭಿಗ್ಯಾನ್ ಕುಂದು (ವಿಕೆಟ್ ಕೀಪರ್), ಹರ್ವಂಶ್ ಪಂಗಾಲಿಯಾ, ಖಿಲನ್ ಪಟೇಲ್, ಹೆನಿಲ್ ಪಟೇಲ್, ದೀಪೇಶ್ ದೇವೇಂದ್ರನ್, ಉಧವ್ ಮೋಹನ್, ನಮನ್ ಪುಷ್ಪಕ್, ವೇದಾಂತ್ ತ್ರಿವೇದಿ, ಕಿಶನ್ ಕುಮಾರ್ ಸಿಂಗ್, ಆರೋನ್ ಜಾರ್ಜ್, ಯುವರಾಜ್ ಗೋಹಿಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications