For Quick Alerts
ALLOW NOTIFICATIONS  
For Daily Alerts
 

ಭಾರತ vs ಶ್ರೀಲಂಕಾ: ಭಾರತದ ನೆಲದಲ್ಲಿ ಚೊಚ್ಚಲ ಟಿ20 ಸರಣಿ ಗೆಲ್ಲುತ್ತಾ ಶ್ರೀಲಂಕಾ

India v Sri Lanka: Dasun Shanaka led lanka teams eyeon first-ever series win in India

ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯ ಶನಿವಾರ ನಡೆಯಲಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಸರಣಿಯಲ್ಲಿ ಇತ್ತಂಡಗಳು ಸಮಬಲ ಸಾಧಿಸಿದ್ದು ಶನಿವಾರದ ಒಂದ್ಯದಲ್ಲಿ ಗೆದ್ದ ತಂಡ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಸರಣಿಯ ಮೊದಲ ಎರಡು ಪಂದ್ಯಗಳು ಕೂಡ ತೀವ್ರ ಪೈಪೋಟಿಯ ಪಂದ್ಯಳಾಗಿರುವ ಕಾರಣ ಮತ್ತೊಮ್ಮೆ ಜೊದ್ದಾಜಿಒದ್ದಿನ ಕದನ ನಡೆಯುವ ಎಲ್ಲಾ ಸಾಧ್ಯತೆಗಳು ಇದೆ.

ಶ್ರೀಲಂಕಾ ತಂಡ ಈವರೆಗೆ ಭಾರತದ ನೆಲದಲ್ಲಿ ಟಿ20 ಸರಣಿಯನ್ನು ತನ್ನ ವಶಕ್ಕೆ ಪಡೆಯಲು ಸಾಧ್ಯವಾಗಿಲ್ಲ. ಈ ಸರಣಿಯ ಎರಡನೇ ಪಂದ್ಯ ಗೆದ್ದು ಶ್ರೀಲಂಕಾ ಸರಣಿ ಸಮಬಲ ಮಾಡಿಕೊಂಡಿದ್ದು ಸರಣಿ ಗೆಲ್ಲುವ ಅವಕಾಶವನ್ನು ಸೃಷ್ಟಿಸಿಕೊಂಡಿದೆ. ಹೀಗಾಗಿ ಶನಿವಾರ ರಾಜ್‌ಕೋಟ್‌ನಲ್ಲಿ ನಡೆಯಲಿರವ ಪಂದ್ಯ ಎಲ್ಲರ ಗಮನಸೆಳೆಯುವಲ್ಲಿ ಯಶಸ್ವಿಯಾಗಿದೆ.

ಹಾರ್ದಿಕ್ ಪಾಂಡ್ಯ ಭಾರತವನ್ನು 7 T20ಐ ಗಳಲ್ಲಿ ಮುನ್ನಡೆಸಿದ್ದಾರೆ. ಪ್ರಸ್ತುತ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಸರಣಿಯ 2ನೇ ಟಿ20 ಪಂದ್ಯದಲ್ಲಿ ಸೋಲು ಅನುಭವಿಸುವ ಮೂಲಕ ಹಾರ್ದಿಕ್ ಪಾಂಡ್ಯ ನಾಯಕನಾಗಿ ಮೊದಲ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸರಣಿ ಸಮಬಲಗೊಂಡಿದ್ದು ಅಂತಿಮ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯಗೆ ಆಯಕನಾಗಿಯೂ ಸಾಕಷ್ಟು ಒತ್ತಡದ ಸಂದರ್ಭಗಳು ಎದುರಾಗುವ ಸಾಧ್ಯತೆಯಿದೆ

ಇನ್ನು ಎರಡನೇ ಪಂದ್ಯದಲ್ಲಿ ಶ್ರೀಲಂಕಾ ಮೊದಲಿಗೆ ಅಬ್ಬರದ ಬ್ಯಾಟಿಂಗ್ ನಡೆಸಿ 206 ರನ್‌ಗಳ ಬೃಹತ್ ಮೊತ್ತ ಗಳಿಸಿತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ಆರಂಭದಲ್ಲಿಯೇ ಭಾರೀ ಕುಸಿತ ಕಂಡಿತು. ಒಂದು ಹಂತದಲ್ಲಿ 57 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಹೀನಾಯ ಪರಿಸ್ಥಿತಿಯಲ್ಲಿದ್ದ ಭಾರತ ತಂಡಕ್ಕೆ ಸೂರ್ಯಕುಮಾರ್ ಯಾದವ್ ಹಾಗೂ ಅಕ್ಷರ್ ಪಟೇಲ್ ಜೋಡಿ ಆಸರೆಯಾದರು. ತಲಾ ಅರ್ಧ ಶತಕ ಬಾರಿಸಿದ ಸೂರ್ಯಕುಮಾರ್ ಹಾಗೂ ಅಕ್ಷರ್ ಪಟೇಲ್ ಕೊನೆಯ ಕ್ಷಣದವರೆಗೂ ಹೋರಾಡಿದರು. ಸೂರ್ಯಕುಮಾರ್ ವಿಕೆಟ್ ಕಳೆದುಕೊಂಡ ಬಳಿಕ ಶಿವಂ ಮಾವಿ ಜೊತೆಗೂಡಿ ಅಕ್ಷರ್ ಪಟೇಲ್ ಗೆಲುವಿನ ಆಸೆ ಜೀವಂತವಾಗಿಸಿದರಾದರೂ ಅಂತಿಮವಾಗಿ ಟೀಮ್ ಇಂಡಿಯಾ 16 ರನ್‌ಗಳ ಸೋಲು ಅನುಭವಿಸಿದೆ. ಈ ಮೂಲಕ ಶ್ರೀಲಂಕಾ ಮೂರು ಪಂದ್ಯಗಳ ಟಿ20 ಸರಣಿಯನ್ನು ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ.

ಈ ಪಂದ್ಯದ ಸೋಲಿನ ಬಳಿಕ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಪ್ರತಿಕ್ರಿಯಿಸಿದ್ದರು. ಈ ಸಂದರ್ಭದಲ್ಲಿ ಅವರು ಸೋಲಿಗೆ ಕಾರಣವಾದ ಪ್ರಮುಖ ಅಂಶವನ್ನು ಬೊಟ್ಟು ಮಾಡಿದ್ದಾರೆ. ಭಾರತ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲಿಯೂ ಪವರ್‌ಪ್ಲೇ ಅವಧಿಯಲ್ಲಿ ಕಳಪೆಯಾಗಿ ಆಡಿದ್ದು ಇದುವೇ ನಮಗೆ ಆಘಾತ ನೀಡತು ಎಂದಿದ್ದಾರೆ. ಅಲ್ಲದೆ ಕೆಲ ಮೂಲಭೂತ ತಪ್ಪುಗಳನ್ನು ನಾವು ಮಾಡಿದ್ದು ಈ ಹಂತದಲ್ಲಿ ಅಂಥಾ ತಪ್ಪುಗಳು ನಡೆಯಬಾರದು ಎಂದಿದ್ದಾರೆ. ಅರ್ಷ್‌ದೀಪ್ ಸಿಂಗ್ ಅವರ ನೋಬಾಲ್ ಉದ್ದೇಶಿಸಿ ಹಾರ್ದಿಕ್ ಪಾಂಡ್ಯ ಈ ಸಂದರ್ಭದಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಭಾರತ ಸ್ಕ್ವಾಡ್: ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಅಕ್ಸರ್ ಪಟೇಲ್, ಅರ್ಷ್‌ದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್, ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್, ಮುಖೇಶ್ ಕುಮಾರ್

ಶ್ರೀಲಂಕಾ ಸ್ಕ್ವಾಡ್: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ, ಲಹಿರು ಕುಮಾರ, ಅವಿಷ್ಕ ಫೆರ್ನಾಂಡೋ, ಅಶೇನ್ ಬಂಡಾರ, ಪ್ರಮೋದ್ ಮದುಶನ್, ದುನಿತ್ ವೆಳ್ಳಾಲಗೆ, ನುವಾನ್ ತುಷಾರ, ಸದೀರ ಸಮರವಿಕ್ರಮ

Story first published: Friday, January 6, 2023, 23:57 [IST]
Other articles published on Jan 6, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+