For Quick Alerts
ALLOW NOTIFICATIONS  
For Daily Alerts
 

IND vs AFG World Cup 2023: ಏಕದಿನ ವಿಶ್ವಕಪ್‌ನಲ್ಲಿ ಅಪರೂಪದ ಸಾಧನೆ ಮಾಡಿದ ಅಫ್ಘಾನಿಸ್ತಾನ

ಬುಧವಾರ, ಅಕ್ಟೋಬರ್ 11ರಂದು ಅಫ್ಘಾನಿಸ್ತಾನ ತಂಡವು ಏಕದಿನ ವಿಶ್ವಕಪ್ ಇತಿಹಾಸದಲ್ಲಿ ತನ್ನ ಎರಡನೇ ಅತ್ಯಧಿಕ ಸ್ಕೋರ್ ದಾಖಲಿಸಿದೆ.

ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡದ ವಿರುದ್ಧ ಹಶ್ಮತುಲ್ಲಾ ಶಾಹಿದಿ ನಾಯಕತ್ವದ ಅಫ್ಘಾನಿಸ್ತಾನ ತಂಡ 8 ವಿಕೆಟ್ ನಷ್ಟಕ್ಕೆ 272 ರನ್ ಕಲೆಹಾಕಿತು.

India vs AFG Match: Afghanistan Created This Record in World Cup History Against India Match

2019ರ ಜುಲೈ 4ರಂದು ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 50 ಓವರ್‌ಗಳಲ್ಲಿ ಅಫ್ಘಾನಿಸ್ತಾನ ತಂಡದ ಗರಿಷ್ಠ ಸ್ಕೋರ್ 288 ರನ್ ದಾಖಲಾಗಿದೆ. ಅಲ್ಲದೆ, ಅಫ್ಘಾನಿಸ್ತಾನ ತಂಡ ಮೊದಲು ಬ್ಯಾಟಿಂಗ್ ಮಾಡುವಾಗ ವಿಶ್ವಕಪ್‌ನಲ್ಲಿ ತಮ್ಮ ತಂಡದ ಗರಿಷ್ಠ ಮೊತ್ತವನ್ನು ಗಳಿಸಿದೆ.

2015ರ ಫೆಬ್ರವರಿ 22ರಂದು ಡ್ಯುನೆಡಿನ್‌ನ ಯೂನಿವರ್ಸಿಟಿ ಓವಲ್‌ನಲ್ಲಿ ಶ್ರೀಲಂಕಾ ವಿರುದ್ಧ 49.4 ಓವರ್‌ಗಳಲ್ಲಿ ಅಫ್ಘಾನಿಸ್ತಾನದ ಹಿಂದಿನ ಗರಿಷ್ಠ ಸ್ಕೋರ್ 232 ಆಗಿದೆ.

ಭಾರತ ತಂಡದ ವಿರುದ್ಧ ಅಫ್ಘಾನಿಸ್ತಾನ ತಂಡ ಮೊದಲ ಬಾರಿಗೆ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್ ಮತ್ತು ರಹಮತ್ ಶಾ ಉತ್ತಮ ಆರಂಭವನ್ನು ಪಡೆದರೂ, ಆದರೆ ಅದನ್ನು ಮುಂದುವರಿಸಲು ವಿಫಲರಾದರು.

ಆನಂತರ ಅಶ್ಮತುಲ್ಲಾ ಶಾಹಿದಿ ಮತ್ತು ಅಜ್ಮತುಲ್ಲಾ ಒಮರ್ಜಾಯ್ ನಾಲ್ಕನೇ ವಿಕೆಟ್‌ಗೆ 121 ರನ್‌ಗಳ ಜೊತೆಯಾಟವಾಡುವ ಮೂಲಕ ಅಫ್ಘಾನಿಸ್ತಾನ ತಂಡದ ಇನ್ನಿಂಗ್ಸ್‌ಗೆ ಬಲ ತಂದರು.

ಅಶ್ಮತುಲ್ಲಾ ಶಾಹಿದಿ 88 ಎಸೆತಗಳಲ್ಲಿ 8 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 80 ರನ್ ಗಳಿಸಿ ಕುಲದೀಪ್ ಯಾದವ್ ಎಸೆತದಲ್ಲಿ ಸ್ವೀಪ್ ಶಾಟ್ ಬಾರಿಸುವ ಯತ್ನದಲ್ಲಿ ಎಲ್‌ಬಿಡಬ್ಲ್ಯೂ ಆಗಿ ಔಟಾದರು.

ಅಜ್ಮತುಲ್ಲಾ ಒಮರ್ಜಾಯ್ ಕೂಡ ತಮ್ಮ ಶಾಟ್‌ಗಳನ್ನು ಮುಕ್ತವಾಗಿ ಆಡಿ 69 ಎಸೆತಗಳಲ್ಲಿ 2 ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಮೂಲಕ 62 ರನ್ ಬಾರಿಸಿದರು. ಬರ್ಥ್ ಡೇ ಬಾಯ್ ಹಾರ್ದಿಕ್ ಪಾಂಡ್ಯ ಅವರ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.

ಆ ಬಳಿಕ ರಶೀದ್ ಖಾನ್ ಮತ್ತು ಮುಜೀಬ್ ಉರ್ ರೆಹಮಾನ್ ಅವರು ಕ್ರಮವಾಗಿ 16 ಮತ್ತು 10 ರನ್ ಗಳಿಸಿ ಅಫ್ಘಾನಿಸ್ತಾನ ತಂಡ ಸ್ಪರ್ಧಾತ್ಮಕ ಮೊತ್ತ ಗಳಿಸಲು ಸಹಾಯ ಮಾಡಿದರು.

ಜಸ್ಪ್ರೀತ್ ಬುಮ್ರಾ ಅವರ ಬೌಲಿಂಗ್‌ನಲ್ಲಿ ಔಟಾಗುವ ಮೊದಲು 27 ಎಸೆತಗಳಲ್ಲಿ 19 ರನ್ ಗಳಿಸಿದ್ದ ಮೊಹಮ್ಮದ್ ನಬಿ ಕೂಡ ಉತ್ತಮವಾಗಿ ಆಡಿದರು.

ಭಾರತದ ಪರ ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ 10 ಓವರ್‌ಗಳಲ್ಲಿ 39 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಹಾರ್ದಿಕ್ ಪಾಂಡ್ಯ 7 ಓವರ್‌ಗಳಲ್ಲಿ 43 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಶಾರ್ದೂಲ್ ಠಾಕೂರ್ ಮತ್ತು ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Wednesday, October 11, 2023, 19:35 [IST]
Other articles published on Oct 11, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+