ಟೀಮ್ ಇಂಡಿಯಾದ ಚಿಂತೆ ಹೆಚ್ಚಿಸಿದ ವೇಗದ ಬೌಲರ್‌ಗಳ ಗಾಯ
ಸದ್ಯ ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಡೆಯುತ್ತಿದೆ. ಈ ಲೀಗ್‌ನಲ್ಲಿ ದೇಶ ಹಾಗೂ ವಿದೇಶದ ಆಟಗಾರರು ಭಾಗವಹಿಸುತ್ತಿದ್ದಾರೆ. ಈ ಲೀಗ್ ಮುಗಿದ ಬಳಿಕ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಟೂರ್ನಿಗಳು ಆರಂಭವಾಗಲಿವೆ. ಭಾರತ ತನ್ನ ಮುಂದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ತವರಿನಲ್ಲಿ ಅಫ್ಘಾನ್ ವಿರುದ್ಧ ಆಡಲಿದೆ. ಈ ಸರಣಿಗೆ ಇನ್ನೇನು ಕೆಲವೇ ದಿನಗಳಲ್ಲಿ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಈ ವೇಳೆ ತಂಡದ ಆಟಗಾರರ ಫಿಟ್ನೆಸ್ ತಂಡಕ್ಕೆ ದೊಡ್ಡ ಚಿಂತೆಯ ವಿಷಯವಾಗಿದೆ.
ವೇಗದ ಬೌಲರ್ ಹರ್ಷಿತ್ ರಾಣಾ, ಆಕಾಶ್ ದೀಪ್ ಅವರು ಸದ್ಯ ಗಾಯಕ್ಕೆ ತುತ್ತಾಗಿದ್ದಾರೆ. ಈ ಇಬ್ಬರು ಆಟಗಾರರು ಇನ್ನು ಚೇತರಿಸಿಕೊಳ್ಳದ್ದರಿಂದ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಇವರು ತಂಡವನ್ನು ಸೇರುವುದು ಕಷ್ಟ. ಈ ಇಬ್ಬರೂ ಅಫ್ಘಾನಿಸ್ತಾನ ವಿರುದ್ಧದ ಸರಣಿಯ ಬಳಿಕ ತಂಡಕ್ಕೆ ಮರಳಬಹುದು.

ಅಫ್ಘಾನಿಸ್ತಾನ ವಿರುದ್ಧದ ಸರಣಿ ಮುಗಿದ ನಂತರ, ಟೀಮ್ ಇಂಡಿಯಾ ಸೀಮಿತ ಓವರ್‌ಗಳ ಸರಣಿಗಾಗಿ ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ ಮತ್ತು ಈ ಸರಣಿಗೆ ಆಕಾಶ್ ದೀಪ್, ಹರ್ಷಿತ್ ರಾಣಾ ತಂಡಕ್ಕೆ ಮರಳುವ ಸಾಧ್ಯತೆ ಕಡಿಮೆ. ಆಕಾಶ್ ದೀಪ್ ಹಾಗೂ ಹರ್ಷಿತ್ ರಾಣಾ ಗಾಯಗಳಿಂದಾಗಿ ಸ್ವಲ್ಪ ಸಮಯದಿಂದ ಆಟದಿಂದ ಹೊರಗುಳಿದಿದ್ದಾರೆ. ಆಕಾಶ್ ದೀಪ್ ಬೆನ್ನುನೋವಿನಿಂದ ಬಳಲುತ್ತಿದ್ದರೆ, ಮೊಣಕಾಲಿನ ಗಾಯದಿಂದಾಗಿ ಹರ್ಷಿತ್ ರಾಣಾ ತವರಿನಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ಇವರು ತಂಡಕ್ಕೆ ಮರಳುವುದು ಯಾವಾಗ ಎಂಬ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ.
ಆಕಾಶ್ ದೀಪ್, ಹರ್ಷಿತ್ ರಾಣಾ ಈಗಾಗಲೇ ವ್ಯಾಯಾಮಗಳನ್ನು ಪ್ರಾರಂಭಿಸಿದ್ದಾರೆ, ಇದರಲ್ಲಿ ಜಾಗಿಂಗ್, ಓಟ, ಸ್ಪ್ರಿಂಟ್‌ಗಳು ಸೇರಿವೆ. ಈ ಇಬ್ಬರೂ ಆಟಗಾರರು ಭಾರತ ಟೆಸ್ಟ್ ತಂಡದ ಸದಸ್ಯರಾಗಿದ್ದಾರೆ. ಅಲ್ಲದೆ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಇವರಿಬ್ಬರ ಅನುಪಸ್ಥಿತಿ ತಂಡಕ್ಕೆ ಬಹುವಾಗಿ ಕಾಡಲಿದೆ. ಈ ಇಬ್ಬರೂ ಆಟಗಾರರು ದೇಶೀಯ ಟೂರ್ನಿ ದುಲೀಪ್ ಟ್ರೋಫಿಯ ವೇಳೆ ಮೈದಾನಕ್ಕೆ ಇಳಿಯುವ ಸಾಧ್ಯತೆ ಇದೆ.

ಭಾರತ ತಂಡವು ಜೂನ್ 6 ರಿಂದ ತವರಿನಲ್ಲಿ ಅಫ್ಘಾನಿಸ್ತಾನ ವಿರುದ್ಧ ಒಂದು ಪಂದ್ಯದ ಟೆಸ್ಟ್ ಸರಣಿಯನ್ನು ಆಡಲಿದೆ, ನಂತರ ಜೂನ್ 14 ರಿಂದ 20 ರವರೆಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಬಳಿಕ ಬ್ಲ್ಯೂ ಬಾಯ್ಸ್ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸ ಬೆಳೆಸಲಿದೆ.
ಉಭಯ ಆಟಗಾರರ ಸಾಧನೆ
29 ವರ್ಷದ ಆಕಾಶ್ ದೀಪ್ ಭಾರತದ ಪರ 10 ಟೆಸ್ಟ್ ಪಂದ್ಯಗಳನ್ನು ಆಡಿದ್ದು 28 ವಿಕೆಟ್ ಪಡೆದಿದ್ದಾರೆ. ಇನ್ನು 24 ವರ್ಷದ ಹರ್ಷಿತ್ ರಾಣಾ ಭಾರತದ ಪರ 2 ಟೆಸ್ಟ್ ಪಂದ್ಯಗಳಲ್ಲಿ 4 ವಿಕೆಟ್ ಪಡೆದಿದ್ದಾರೆ. ಅಲ್ಲದೆ 14 ಏಕದಿನ ಪಂದ್ಯಗಳಲ್ಲಿ 26 ವಿಕೆಟ್, 9 ಟಿ20 ಪಂದ್ಯಗಳಲ್ಲಿ 9 ವಿಕೆಟ್ ಕಬಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications