Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಕೊಹ್ಲಿ ಅಡ್ಡಾದಲ್ಲಿ ರೋಹಿತ್ ಆರ್ಭಟ: ವಿಶ್ವಕಪ್‌ನಲ್ಲಿ 7ನೇ ಶತಕ ಸಿಡಿಸಿದ ಹಿಟ್‌ಮ್ಯಾನ್

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅಫ್ಘಾನಿಸ್ತಾನ ನೀಡಿದ ಸವಾಲಿನ ಮೊತ್ತವನ್ನು ಬೆನ್ನಟ್ಟಿರುವ ಟೀಮ್ ಇಂಡಿಯಾಗೆ ನಾಯಕ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಅಮೋಘ ಜೊತೆಯಾಟ ನೀಡಿದ್ದು ಅಫ್ಘನ್ ಬೌಲಿಂಗ್ ದಾಳಿಯನ್ನು ಪುಡಿಗಟ್ಟಿದ್ದಾರೆ. ರೋಹಿತ್ ಶರ್ಮಾ ಅಮೋಘ ಶತಕ ಸಿಡಿಸಿದ್ದು ಭಾರತದ ನೆಲದಲ್ಲಿ ಪ್ರಪ್ರಥಮ ವಿಶ್ವಕಪ್ ಶತಕ ಸಿಡಿಸಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 31ನೇ ಶತಕ ಸಿಡಿಸಿದ್ದಾರೆ. ಈ ಶತಕ ಕೇವಲ 63 ಎಸೆತಗಳಲ್ಲಿ ಬಂದಿದ್ದು 12 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್ ಸಿಡಿಸಿದ್ದಾರೆ. ಇದು ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಬ್ಯಾಟ್‌ನಿಂದ ಬಂದಿರುವ 7ನೇ ಶತಕ ಎನ್ನುವುದು ಮತ್ತೊಂದು ವಿಶೇಷ.

India vs Afghanistan Match: Rohit Sharma Scores 7th Century in ICC World Cup History

ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಭಾರತಕ್ಕೆ 273 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ. ಈ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಅಮೋಘ 156 ರನ್‌ಗಳ ಜೊತೆಯಾಟ ನೀಡಿದ್ದಾರೆ. ಇದರಲ್ಲಿ ಇಶಾನ್ ಕಿಶನ್ ಪಾಲು 47 ರನ್ ಮಾತ್ರ. ಈ ಸಂದರ್ಭದಲ್ಲಿ ರಶೀದ್ ಖಾನ್ ಎಸೆತದಲ್ಲಿ ಇಶಾನ್ ಕ್ಯಾಚ್ ನೀಡಿ ನಿರ್ಗಮಿಸಿದ್ದಾರೆ.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್,

ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜಿಬುಲ್ಲಾ ಜದ್ರಾನ್, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ
ಬೆಂಚ್: ಇಕ್ರಂ ಅಲಿಖಿಲ್, ಅಬ್ದುಲ್ ರೆಹಮಾನ್, ರಿಯಾಜ್ ಹಸನ್, ನೂರ್ ಅಹ್ಮದ್

Story first published: Wednesday, October 11, 2023, 20:06 [IST]
Other articles published on Oct 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+