India vs Afghanistan: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಇಬ್ಬರು ಕನ್ನಡಿಗರಿಗೆ ಸ್ಥಾನ
ಮತ್ತೆ ಭಾರತದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಆರಂಭವಾಗಿದೆ. ಅಫ್ಘಾನಿಸ್ತಾನ ಭಾರತದ ಪ್ರವಾಸ ಬೆಳೆಸಿದ್ದು, ಏಕೈಕ ಟೆಸ್ಟ್ ಹಾಗೂ ಏಕದಿನ ಸರಣಿಯನ್ನು ಈ ವೇಳೆ ಆಡಲಿದೆ. ನ್ಯೂ ಚಂಡೀಗಢದಲ್ಲಿ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ಕಾದಾಟ ನಡೆಸಲಿವೆ. ನ್ಯೂ ಚಂಡೀಗಢ ಮೈದಾನ ಭಾರತದ 31ನೇ ಟೆಸ್ಟ್ ಅಂಗಳವಾಗಲಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ, ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ತನ್ನದಾಗಿಸಿಕೊಂಡಿದೆ.
ಬಿಸಿಲಿನ ಕಾರಣದಿಂದ ಪಿಚ್ ಕೊಂಚ ಒಣಗಿದಂತಿದೆ. ಮುಂದೆಯೂ ಇದೇ ರೀತಿ ಇರಲಿದೆ. ನಾನು ಇಲ್ಲಿಗೆ ಹತ್ತಿರದಲ್ಲೇ ಬೆಳೆದವನು. ನನ್ನ ಸ್ವಂತ ಊರಿನಲ್ಲಿ ಆಡಬೇಕೆಂದು ಯಾವಾಗಲೂ ಬಯಸಿದ್ದೆ. ಇಲ್ಲಿ ನಮ್ಮ ತಂಡವನ್ನು ಮುನ್ನಡೆಸುತ್ತಿರುವುದು ನನ್ನ ಸೌಭಾಗ್ಯ ಮತ್ತು ಗೌರವವಾಗಿದೆ. ಬ್ಯಾಟಿಂಗ್ ವಿಭಾಗವು ಸಾಬೀತುಪಡಿಸಬೇಕಾದ್ದು ಬಹಳಷ್ಟಿದೆ. ಮಾನವ್ ಸುತಾರ್ ಪದಾರ್ಪಣೆ ಮಾಡಲಿದ್ದಾರೆ ಎಂದು ಶುಭಮನ್ ಗಿಲ್ ತಿಳಿಸಿದ್ದಾರೆ. ಟೀಮ್ ಇಂಡಿಯಾ ಮಹತ್ವದ ಪಂದ್ಯದಲ್ಲಿ ಮೂವರು ಸ್ಪಿನ್ ಬೌಲರ್‌ಗಳೊಂದಿಗೆ ಕಣಕ್ಕೆ ಇಳಿಯಲಿದೆ.

ಮಾನವ್ ಸುತಾರ್ ಪದಾರ್ಪಣೆ
ರಾಜಸ್ಥಾನ್ ತಂಡದ ಭರವಸೆಯ ಮಾನವ್ ಸುತಾರ್ ಅವರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಪದಾರ್ಪಣೆ ಮಾಡುವ ಅವಕಾಶ ಪಡೆದಿದ್ದಾರೆ. 23 ವರ್ಷದ ಮಾನವ್ ಸುತಾರ್ ಬೌಲಿಂಗ್ ಆಲ್‌ರೌಂಡರ್ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಇವರು ಆಡಿದ 29 ಪ್ರಥಮ ದರ್ಜೆ ಪಂದ್ಯದಲ್ಲಿ 129 ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ 945 ರನ್ ಸಿಡಿಸಿದ್ದಾರೆ. ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಇವರು 25 ಪಂದ್ಯಗಳಲ್ಲಿ 34 ವಿಕೆಟ್ ಪಡೆದಿದ್ದು, 350 ರನ್ ಸಿಡಿಸಿದ್ದಾರೆ. ಇವರು ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಿದ ಅನುಭವ ಹೊಂದಿದ್ದಾರೆ.
ರಿಷಭ್ ಪಂತ್‌ಗೆ ಸ್ಮರಣೀಯ ಪಂದ್ಯ
ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರಿಗೆ ಅಫ್ಘಾನಿಸ್ತಾನದ ವಿರುದ್ಧ ಸರಣಿ ಸ್ಮರಣೀಯವಾಗಿರಲಿದೆ. ರಿಷಭ್ ಪಂತ್ ಭಾರತದ ಪರ ವಿಕೆಟ್ ಕೀಪರ್ ಆಗಿ 50ನೇ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ. ಈ ಮೂಲಕ ಈ ಸಾಧನೆಯನ್ನು ಮಾಡುವ 3ನೇ ವಿಕೆಟ್ ಕೀಪರ್ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಮಹೇಂದ್ರ ಸಿಂಗ್ ಧೋನಿ, ಸೈಯದ್ ಕಿರ್ಮಾನಿ ಈ ಸಾಧನೆ ಮಾಡಿದ್ದರು.
ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆ ಎಲ್ ರಾಹುಲ್, ಬಿ ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಮಾನವ್ ಸುತಾರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಅಫ್ಘಾನಿಸ್ತಾನ ತಂಡ: ಸೆದಿಖುಲ್ಲಾ ಅಟಲ್, ರಹಮಾನುಲ್ಲಾ ಗುರ್ಬಾಜ್, ಅಬ್ದುಲ್ ಮಲಿಕ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಫ್ಸರ್ ಜಜಾಯ್ (ವಿಕೆಟ್ ಕೀಪರ್), ಅಜ್ಮತುಲ್ಲಾ ಒಮರ್ಜಾಯ್, ಶರಾಫುದ್ದೀನ್ ಅಶ್ರಫ್, ನಂಗೆಯಾಲಿಯಾ ಖರೋಟೆ, ಜಿಯಾವುರ್ ರೆಹಮಾನ್, ಮೊಹಮ್ಮದ್ ಸಲೀಮ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications