Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು ಕಂಡ ಟೀಮ್ ಇಂಡಿಯಾ

India Vs Australia 1st Odi live updates wankhede stadium

ಮುಂಬೈ, ಜನವರಿ 14: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ಭರ್ಜರಿಯಾಗಿ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ನೀಡಿದ 256 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ಒಂದೂ ವಿಕೆಟ್ ಕಳೆದುಕೊಳ್ಳದೆ ಗುರಿ ಮುಟ್ಟಿದೆ.

ಆಸ್ಟ್ರೇಲಿಯಾದ ಆರಂಭಿಕ ಜೋಡಿಯಾದ ಡೇವಿಡ್ ವಾರ್ನರ್ ಮತ್ತು ಆರೋನ್ ಫಿಂಚ್ ಆಸ್ಟ್ರೇಲಿಯಾಗೆ ಭರ್ಜರಿ ಜಯವನ್ನು ತಂದಿತ್ತರು. ಅಜೇಯವಾಗಿ ಹೋರಾಡಿದ ಈ ಜೋಡಿ ಆಸ್ಟ್ರೇಲಿಯಾಗೆ ಸ್ವಲ್ಪವೂ ಹಿನ್ನೆಡೆಯಾಗದಂತೆ ನೋಡಿಕೊಂಡರು. ಆಸ್ಟ್ರೇಲಿಯಾದ ವಿಕೆಟ್ ಕೀಳಲು ಟೀಮ್ ಇಂಡಿಯಾದ ಬೌಲರ್‌ಗಳು ನಡೆಸಿದ ಎಲ್ಲಾ ಪ್ರಯತ್ನಗಳೂ ವಿಫಲವಾಯಿತು.

112 ಬಾಲ್ ಎದುರಿಸಿದ ಡೇವಿಡ್ ವಾರ್ನರ್ 17 ಬೌಂಡರಿ ಮತ್ತು 3 ಸಿಕ್ಸರ್ ಸಿಡಿಸಿ ಅಜೇಯ 128 ರನ್ ಬಾರಿಸಿದರೆ, ಮತ್ತೋರ್ವ ಆರಂಭಿಕ ಆಟಗಾರ ಆರೋನ್ ಫಿಂಚ್ 114 ಎಸೆತಗಳಲ್ಲಿ 110 ರನ್ ಸಿಡಿಸಿದರು.

ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್‌ಗಿಳಿದ ಟೀಮ್ ಇಂಡಿಯಾ 255ರನ್‌ಗಳಿಗೆ ಆಲ್‌ಔಟ್‌ ಆಯಿತು. ಭಾರತದ ಪರವಾಗಿ ಶಿಖರ್ ಧವನ್ (74 ರನ್ ) ಮತ್ತು ರಾಹುಲ್ (47 ರನ್) ಉತ್ತಮ ಆಟವನ್ನು ಪ್ರದರ್ಶಿಸಿದ್ದು ಬಿಟ್ಟರೆ ಉಳಿದ ಉಳಿದೆಲ್ಲಾ ಆಟಗಾರರು ನೀರಸ ಪ್ರದರ್ಶನವನ್ನು ನೀಡಿದರು.

ಆಸ್ಟ್ರೇಲಿಯಾ ಬೌಲರ್‌ಗಳು ಕೂಡ ಈ ಪಂದ್ಯದಲ್ಲಿ ಸಂಘಟಿತ ಪ್ರದರ್ಶನವನ್ನು ನೀಡಿದ್ದಾರೆ. ಮಿಚೆಲ್ ಸ್ಟಾರ್ಕ್ 3 ವಿಕೆಟ್ ಕಿತ್ತು ಮಿಂಚಿದರೆ ಪ್ಯಾಟ್ ಕಮಿನ್ಸ್ ಮತ್ತು ಕೇನ್ ರಿಚರ್ಡ್ಸನ್ ತಲಾ ಎರಡು ವಿಕೆಟ್ ಕಿತ್ತು ಮಿಂಚಿದರು. ಸ್ಪಿನ್ನರ್‌ಗಳಾದ ಆಡಂ ಜಂಪಾ ಮತ್ತು ಆಸ್ಟನ್ ಆ್ಯಗರ್ ತಲಾ ಒಂದು ವಿಕೆಟ್ ಪಡೆದರು.

ಭಾರತ vs ಆಸ್ಟ್ರೇಲಿಯಾ, 1ನೇ ಏಕದಿನ, Live ಸ್ಕೋರ್‌ಕಾರ್ಡ್

1
46130

Story first published: Tuesday, January 14, 2020, 20:47 [IST]
Other articles published on Jan 14, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+