For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ ಮೊದಲ ಪಂದ್ಯ: ಈ ಮೂವರ ಮೇಲಿದೆ ಟೀಮ್ ಇಂಡಿಯಾ ಅಭಿಮಾನಿಗಳ ಕಣ್ಣು!

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಶುಕ್ರವಾರ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ವಿಶ್ವಕಪ್‌ಗೆ ಕೇವಲ ಎರಡು ವಾರಗಳಿಗೂ ಕಡಿಮೆ ಸಮಯವಿರುಆಗ ಈ ಸರಣಿ ಆಯೋಜನೆಗೊಳ್ಳುತ್ತಿದ್ದು ಸಿದ್ಧತೆಯ ದೃಷ್ಟಿಯಿಂದ ಈ ಸರಣಿ ಸಾಕಷ್ಟು ಕುತೂಹಲ ಮೂಡಿಸಿದೆ. ಇನ್ನು ಟೀಮ್ ಇಂಡಿಯಾ ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ತಂಡದ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ್ದು ಉಳಿದ ಆಟಗಾರರಿಗೆ ಇದು ಅತ್ಯುತ್ತಮ ಅವಕಾಶ ಎನ್ನಲಾಗಿದೆ.

ಇನ್ನು ವಿಶ್ವಕಪ್‌ನ ದೃಷ್ಟಿಯಿಂದಾಗಿ ಈ ಸರಣಿಯ ಮೊದಲ ಪಂದ್ಯದ ಕೆಲ ಆಟಗಾರರ ಪಾಲಿಗೆ ಮಹತ್ವ ಪಡೆದುಕೊಳ್ಳಲಿದೆ. ವಿಶ್ವಕಪ್ ತಂಡದ ಆಡುವ ಬಳಗದಲ್ಲಿ ತಮ್ಮ ಸ್ಥಾನವನ್ನು ಭದ್ರಡಿಸಿಕೊಳ್ಳಲು ಕೆಲವರಿಗೆ ಇದು ಮಹತ್ವದ್ದಾಗಿದ್ದರೆ ಓರ್ವ ಆಟಗಾರನಿಗೆ ತಂಡದಲ್ಲಿ ಸ್ಥಾನವನ್ನು ಪಡೆಯಲು ತಾನು ಸಮರ್ಥ ಎನ್ನುವುದನ್ನು ಸಾಬೀತುಪಡಿಸಲು ನಿರ್ಣಾಯಕ ಎನಿಸಿದೆ.

India vs Australia 1st ODI: Team India fans eye on These 3 Indian Players

ಹಾಗಾದರೆ ಯಾವ ಮೂವರು ಆಟಗಾರರಿಗೆ ಈ ಪಂದ್ಯ ನಿರ್ಣಾಯಕವಾಗಲಿದೆ. ಅಭಿಮಾನಿಗಳ ಕಣ್ಣು ಯಾರ ಮೇಲಿದೆ? ಮುಂದೆ ಓದಿ..

ಅನುಭವಿ ಆರ್ ಅಶ್ವಿನ್

ಟೀಮ್ ಇಂಡಿಯಾದ ಅನುಭವಿ ಆಟಗಾರ ಆರ್ ಅಶ್ವಿನ್ ವಿಶ್ವಕಪ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳಲು ವಿಫಲವಾಗಿದ್ದಾರೆ. ಆದರೆ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಅಶ್ವಿನ್ ಆಯ್ಕೆಯಾಗುವ ಮೂಲಕ ವಿಶ್ವಕಪ್ ತಂಡದಲ್ಲಿ ಮತ್ತೆ ಸ್ಥಾನವನ್ನು ಗಿಟ್ಟಿಸಿಕೊಳ್ಳುವ ಅವಕಾಶವನ್ನು ಕೂಡ ಹೊಂದಿದ್ದಾರೆ. ಅಕ್ಷರ್ ಪಟೇಲ್ ಗಾಯಕ್ಕೆ ತುತ್ತಾಗಿರುವ ಕಾರಣ ಅವರ ಚೇತರಿಕೆಯ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲವಾಗಿರುವ ಕಾರಣ ಅವರ ಅಲಭ್ಯತೆ ಖಚಿತವಾದಲ್ಲಿ ಅಶ್ವಿನ್ ಈ ಸರಣಿಯಲ್ಲಿ ನೀಡುವ ಪ್ರದರ್ಶನ ವಿಶ್ವಕಪ್ ತಂಡದಲ್ಲಿ ಅವರ ಸ್ಥಾನವನ್ನು ಖಚಿತಪಡಿಸಲಿದೆ.

ಸೂರ್ಯಕುಮಾರ್ ಯಾದವ್

ಟೀಮ್ ಇಂಡಿಯಾದ ಆಟಗಾರ ಸೂರ್ಯಕುಮಾರ್ ಯಾದವ್ ಟಿ20 ಮಾದರಿಯಲ್ಲಿ ನಂಬರ್ 1 ಬ್ಯಾಟರ್ ಆಗಿ ಗುರುತಿಸಿಕೊಂಡವರು. ಆದರೆ ಏಕದಿನ ಮಾದರಿಯಲ್ಲಿ ಅವರ ಸಾಧನೆ ತೀರಾ ಕಳಪೆಯಾಗಿದೆ. ಸಾಕಷ್ಟು ಅವಕಾಶಗಳ ಹೊರತಾಗಿಯೂ ಸೂರ್ಯಕುಮಾರ್‌ಗೆ ಈ ಮಾದರಿಯಲ್ಲಿ ಭರವಸೆಯ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಇದೀಗ ಮತ್ತೊಂದು ಅವಕಾಶ ಈ ಆಟಗಾರನಿಗೆ ದೊರೆತಿದ್ದು ವಿಶ್ವಕಪ್‌ಗೂ ಮುನ್ನ ಲಯ ಕಂಡುಕೊಳ್ಳಲು ಇದು ಅತ್ಯುತ್ತಮ ಅವಕಾಶವಾಗಿದೆ.

ಶ್ರೇಯಸ್ ಐಯ್ಯರ್

ಇನ್ನು ಟೀಮ್ ಇಂಡಿಯಾದ ಮತ್ತೋರ್ವ ಪ್ರಮುಖ ಆಟಗಾರ ಶ್ರೇಯಸ್ ಐಯ್ಯರ್ ಗಾಯದ ಸಮಸ್ಯೆಗೆ ಮತ್ತೊಮ್ಮೆ ತುತ್ತಾಗಿದ್ದರು. ಸುದೀರ್ಘ ಕಾಲ ಗಾಯದಿಂದಾಗಿ ವಿಶ್ರಾಂತಿ ಪಡೆದುಕೊಂಡಿದ್ದ ಅವರು ಕಳೆದ ಏಷಯಾಕಪ್ ಟೂರ್ನಿಯ ಮೂಲಕ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದರು. ಆದರೆ ಮತ್ತೆ ಗಾಯದ ಸಮಸ್ಯೆಗೆ ಒಳಗಾದ ಕಾರಣ ಕೇವಲ ಎರಡು ಪಂದ್ಯದಲ್ಲಿ ಮಾತ್ರವೇ ಆಡುವ ಅವಕಾಶ ಪಡೆದುಕೊಂಡಿದ್ದರು. ಇದೀಗ ಈ ಸರಣಿಯಲ್ಲಿ ಶ್ರೇಯಸ್ ಐಯ್ಯರ್ ಅವಕಾಶವನ್ನು ಪಡೆದುಕೊಂಡಿದ್ದು ಈ ಪಂದ್ಯದಲ್ಲಿ ಅವರು ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.

ಮೊದಲ ಎರಡು ಏಕದಿನ ಪಂದ್ಯಗಳಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ (ಫಿಟ್‌ನೆಸ್‌ಗೆ ಒಳಪಟ್ಟು), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

Story first published: Thursday, September 21, 2023, 21:39 [IST]
Other articles published on Sep 21, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+