Ind vs Aus 1st ODI : ಮೊದಲ ಏಕದಿನ ಪಂದ್ಯದಲ್ಲಿ ಮುಖಾಮುಖಿ; Live ಸ್ಕೋರ್, ಆಡುವ ಬಳಗ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ಆಸ್ಟ್ರೇಲಿಯಾ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ. ಇನ್ನು ಈ ಪಂದ್ಯದಲ್ಲಿ ಖಾಯಂ ನಾಯಕ ರೋಹಿತ್ ಶರ್ಮಾ ಕಣಕ್ಕಿಳಿಯುತ್ತಿಲ್ಲವಾದ್ದರಿಂದ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸುತ್ತಿದ್ದಾರೆ. ರೋಹಿತ್ ಶರ್ಮಾ ಬದಲಿಗೆ ಆರಂಭಿಕನಾಗಿ ಇಶಾನ್ ಕಿಶನ್ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿಯುತ್ತಿದೆ. ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಹಾಗೂ ಸ್ವತಃ ನಾಯಕ ಹಾರ್ದಿಕ್ ಪಾಂಡ್ಯ ವೇಗಿಗಳಾಗಿ ಕಣಕ್ಕಿಲಿಯುತ್ತಿದ್ದಾರೆ. ಅಲ್ಲದೆ ಸ್ಪಿನ್ನರ್‌ಗಳಾಗಿ ರವೀಂದ್ರ ಜಡೇಜಾ ಹಾಗೂ ಕುಲ್‌ದೀಪ್ ಯಾದವ್ ತಂಡದಲ್ಲಿದ್ದಾರೆ.
Live ಸ್ಕೋರ್ ಹೀಗಿದೆ
ಇನ್ನು ಆಸ್ಟ್ರೇಲಿಯಾ ತಂಡದಲ್ಲಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಸಂಪೂರ್ಣವಾಗಿ ಫಿಟ್ ಆಗಿಲ್ಲವಾದ ಕಾರಣ ಮಿಚ್ ಮಾರ್ಶ್ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಕಮ್‌ಬ್ಯಾಕ್ ಮಾಡಿದ್ದು ಬಲಿಷ್ಠ ಪಡೆಯೊಂದಿಗೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಆಡಲಿಳಿದಿದೆ
ಭಾರತ ಆಡುವ ಬಳಗ: ಶುಬ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ
ಆಸ್ಟ್ರೇಲಿಯಾ ಆಡುವ ಬಳಗ: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಶೈನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಶಾನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications