Ind vs Aus 1st ODI: ಮೊದಲ ಪಂದ್ಯಕ್ಕೆ ಅಡ್ಡಿಯಾಗಲಿದೆಯಾ ಮಳೆ: ಮುಂಬೈ ಹವಾಮಾನ ವರದಿ

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಇಂದು(ಶುಕ್ರವಾರ) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಏಕದಿನ ಸರಣಿಯ ಮೊದಲ ಪಂದ್ಯವನ್ನಾಡಲಿದೆ. ಟೆಸ್ಟ್ ಸರಣಿಯ ಮುಕ್ತಾಯವಾಗಿದ್ದು ಭಾರತ ಹಾಗೂ ಆಸ್ಟ್ರೇಲಿಯಾ ಈ ಎರಡು ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಆ ಬಳಿಕ ಈ ಎರಡು ತಂಡಗಳು ಇದೀಗ 50 ಓವರ್‌ಗಳ ಕ್ರಿಕೆಟ್‌ನಲ್ಲಿ ಸ್ಪರ್ಧಿಸುತ್ತಿವೆ.
ಇನ್ನು ಈ ಪಂದ್ಯ ಮುಂಬೈನಲ್ಲಿ ನಡೆಯುತ್ತಿದ್ದು ಹವಾಮಾನ ವರದಿ ಅಭಿಮಾಣಿಗಳಿಗೆ ಸಣ್ಣ ಕಳವಳಕಾರಿಯಾಗಿದ್ದರೂ ಪಂದ್ಯಕ್ಕೆ ಅಡ್ಡಿಯುಂಟು ಮಾಡುವ ಸಾಧ್ಯತೆಯಿಲ್ಲ ಎನ್ನುತ್ತಿದೆ. ಮುಂದಿನ ಎರಡ್ಮೂರು ದಿನಗಳ ಕಾಲ ಮುಂಬೈ ನಗರದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದ್ದರೂ ಪಂದ್ಯಕ್ಕೆ ಅಡ್ಡಿಯಾಗಲಾರದು ಎನ್ನಲಾಗಿದೆ. ಶೇಕಡಾ 5ರಷ್ಟು ಮೋಡ ಕವಿದ ವಾತಾವರಣವಿರಲಿದ್ದು ಪಂದ್ಯದ ಸಂದರ್ಭದಲ್ಲಿ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದೆ.
ಇನ್ನು ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪಡೆಯನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ ಕೌಟುಂಬಿಕ ಕಾರಣದಿಂದಾಗಿ ಮೊದಲ ಪಂದ್ಯದಿಂದ ಹೊರಗುಳಿಯುತ್ತಿದ್ದು ಅಂತಿಮ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ರವೀಂದ್ರ ಜಡೇಜಾ ಈ ಸರಣಿಯ ಮೂಲಕ ಸುದೀರ್ಘ ಕಾಲದ ಬಳಿಕ ಭಾರತದ ಏಕದಿನ ತಂಡಕ್ಕೆ ಕಮ್‌ಬ್ಯಾಕ್ ಮಾಡುತ್ತಿದ್ದಾರೆ.
ಇನ್ನು ಆಸ್ಟ್ರೇಲಿಯಾ ತಂಡಕ್ಕೆ ಈ ಸರಣಿಯ ಮೂಲಕ ಇಬ್ಬರು ಪ್ರಮುಖ ಆಟಗಾರರು ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಗಾಯದ ಕಾರಣದಿಂದಾಗಿ ತಂಡದಿಂದ ಹೊರಗುಳಿದಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಶಾನ್ ಮಾರ್ಶ್ ಮತ್ತೆ ತಂಡಕ್ಕೆ ಮರಳಿದ್ದು ಈ ಮೂಲಕ ಆಸಿಸ್ ಪಡೆ ಮತ್ತಷ್ಟು ಬಲಿಷ್ಠವಾಗಿದೆ. ಇನ್ನು ಟೆಸ್ಟ್ ಸರಣಿಯಿಂದ ಅರ್ಧಕ್ಕೆ ತವರಿಗೆ ವಾಪಸಾಗಿದ್ದ ಡೇವಿಡ್ ವಾರ್ನರ್ ಕೂಡ ಈ ಸರಣಿಯಲ್ಲಿ ಆಡಲಿದ್ದಾರೆ.
ಇನ್ನು ಈ ಪಂದ್ಯಕ್ಕೂ ಮುನ್ನಾದಿನ ಆಸ್ಟ್ರೇಲಿಯಾದ ಮುಖ್ಯ ಕೋಚ್ ಮೆಕ್ ಡೊನಾಲ್ಡ್ ಮಾಧ್ಯಮಗಳ ಜೊತೆಗೆ ಮಾತನಾಡಿದ್ದಾರೆ. "ನಾವು ಬ್ಯಾಟಿಂಗ್ ವಿಭಾಗವನ್ನು 8ನೇ ಕ್ರಮಾಂಕದವರೆಗೆ ವಿಸ್ತರಿಸುವ ಯೋಜನೆ ಹೊಂದಿದ್ದೇವೆ. ನಾವು ಅದನ್ನು ಈ ಹಿಂದೆಯೂ ಪ್ರಯತ್ನ ಪಟ್ಟಿದ್ದೆವು. ವಿಶ್ವಕಪ್‌ನತ್ತ ಹೆಜ್ಜೆಯಿಡುತ್ತಿರುವ ಕಾರಣ ಸಂಯೋಜನೆಯಲ್ಲಿ ಬದಲಾವಣೆ ಮಾಡಿಕೊಳ್ಳುವ ಪ್ರಯತ್ನಗಳು ನಡೆಯಲಿದೆ. ಈ ತಂಡದಲ್ಲಿ ಸಾಕಷ್ಟು ಆಲ್‌ರೌಂಡರ್‌ಗಳು ಆಯ್ಕೆಯಾಗಿದ್ದಾರೆ. ಅವರೆಲ್ಲಾ ಒಂದು ತಂಡವಾಗಿ ಆಡುವ ಅವಕಾಶವಿದೆ. ಇಲ್ಲಿ ನಾಉ ಕೆಲ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬಹುದು" ಎಂದಿದ್ದಾರೆ ಆಸ್ಟ್ರೇಲಿಯಾದ ಮುಖ್ಯ ಕೋಚ್.
ಟೀಮ್ ಇಂಡಿಯಾ ಸ್ಕ್ವಾಡ್: ಶುಬ್ಮನ್ ಗಿಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ(ನಾಯಕ), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕತ್
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಶೈನ್, ಗ್ಲೆನ್ ಮ್ಯಾಕ್ಸ್‌ವೆಲ್, ಅಲೆಕ್ಸ್ ಕ್ಯಾರಿ(ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಆಷ್ಟನ್ ಅಗರ್, ಶಾನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಮಿಚೆಲ್ ಮಾರ್ಷ್, ಮಾರ್ಕಸ್ ಸ್ಟೊಯಿನಿಸ್, ಜೋಶ್ ಇಂಗ್ಲಿಸ್, ನಾಥನ್ ಎಲ್ಲಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications