Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸಿಸ್ ,1st ಟಿ20: ಆಸ್ಟ್ರೇಲಿಯಾಗೆ 162 ರನ್‌ಗಳ ಗುರಿ ನೀಡಿದ ಭಾರತ: Live ಸ್ಕೋರ್

India vs Australia, 1st t20 match, live score card, manuka ovel

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕ್ಯಾನ್‌ಬೆರಾದ ಮನುಕಾ ಓವಲ್‌ನಲ್ಲಿ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದೆ. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಭಾರತ ಮೊದಲಿಗೆ ಎದುರಾಳಿ ಆಸಿಸ್‌ಗೆ ಗುರಿ ನಿಗದಿ ಮಾದಬೇಕಿದೆ.

ಏಕದಿನ ಸರಣಿಯನ್ನು ಗೆದ್ದಿರುವ ಆಸ್ಟ್ರೇಲಿಯಾ ಟಿ20 ಸರಣಿಯಲ್ಲೂ ಅದೇ ಪ್ರದರ್ಶನ ಮುಂದುವರಿಸುವ ವಿಶ್ವಾಸದಲ್ಲಿದೆ. ಆದರೆ ಚುಟುಕು ಕ್ರಿಕೆಟ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಭಾರತೀಯ ಆಟಗಾರರು ಆತಿಥೇಯರ ವಿರುದ್ಧ ತಿರುಗಿ ಬೀಳುವ ವಿಶ್ವಾಸದಲ್ಲಿದೆ.

Live ಸ್ಕೋರ್ ಕಾರ್ಡ್ ಇಲ್ಲಿದೆ:

1
48437

ಟೀಮ್ ಇಂಡಿಯಾ ಟಿ20 ಆಡುವ ಬಳಗಕ್ಕೆ ಟಿ ನಟರಾಜನ್ ಆಯ್ಕೆಯಾಗಿದ್ದಾರೆ. ಜಸ್ಪ್ರೀತ್ ಬೂಮ್ರಾ ನಟರಾಜನ್‌ಗೆ ಕ್ಯಾಪ್ ನೀಡಿದ್ದಾರೆ. ಟೀಮ್ ಇಮಡಿಯಾದಲ್ಲಿ ಕೆಲ ಕುತೂಹಲಕಾರಿ ಆಯ್ಕೆಗಳು ನಡೆದಿದೆ. ಶ್ರೇಯಸ್ ಐಯ್ಯರ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿಲ್ಲ. ಸಂಜು ಸ್ಯಾಮ್ಸನ್ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯಲಿದ್ದಾರೆ. ಮನೀಷ್ ಪಾಂಡೆ ಟಿ20 ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಜಡೇಜಾ ಜೊತೆಗೆ ವಾಶಿಂಗ್ಟನ್ ಸುಂದರ್ ಕಣಕ್ಕಿಳಿಯುತ್ತಿದ್ದಾರೆ. ಯುಜುವೇಂದ್ರ ಚಾಹಲ್ ಕೂಡ ಆಡುವ ಬಳಗದಲ್ಲಿ ಇಲ್ಲ. ದೀಪಕ್ ಚಾಹರ್, ಮೊಹಮ್ಮದ್ ಶಮಿ ಹಾಗೂ ಟಿ ನಟರಾಜನ್ ವೇಗದ ಬೌಲಿಂಗ್ ವಿಭಾಗದಲ್ಲಿದ್ದಾರೆ.

ಟೀಮ್ ಇಂಡಿಯಾ ಆಡುವ ಬಳಗ: ಶಿಖರ್ ಧವನ್, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ (ನಾಯಕ), ಮನೀಶ್ ಪಾಂಡೆ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹರ್, ಮೊಹಮ್ಮದ್ ಶಮಿ, ಟಿ ನಟರಾಜನ್

ಆಸ್ಟ್ರೇಲಿಯಾ ಆಡುವ ಬಳಗ: ಡಿ ಆರ್ಕಿ ಶಾರ್ಟ್, ಆರೋನ್ ಫಿಂಚ್ (ನಾಯಕ), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಯಿಸಸ್ ಹೆನ್ರಿಕ್ಸ್, ಮಿಚ್ ಸ್ವೆಪ್ಸನ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್

Story first published: Friday, December 4, 2020, 15:29 [IST]
Other articles published on Dec 4, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+