ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ಮೊದಲನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭ

India vs Australia, 1st t20 match, preview

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಈ ಕುತೂಹಲಕಾರಿ ಪಂದ್ಯ ಆರಂಭವಾಗಲಿದ್ದು, ರೋಚಕ ಕ್ಷಣಗಳನ್ನು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಮೊದಲೆರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೋತರೂ ಅಂತಿಮ ಪಂದ್ಯದಲಲಿ ಗೆದ್ದಿರುವುದು ತಂಡದ ಉತ್ಸಾಹವನ್ನು ಹೆಚ್ಚಿಸಿದೆ.

ಆಸ್ಟ್ರೇಲಿಯಾದ ರಾಜಧಾನಿ ಕ್ಯಾನ್‌ಬೆರಾದ ಮನಿಕಾ ಓವಲ್ ಅಂಗಣದಲ್ಲಿ ಈ ಎರಡು ದೇಶಗಳು ಮೂಖಾಮುಖಿಯಾಗುತ್ತಿದೆ. ಆಸ್ಟ್ರೇಲಿಯಾ ವಿರುದ್ಧಧ ಏಕದಿನ ಸರಣಿಯ ಕೊನೆಯ ಪಂದ್ಯವೂ ಇದೇ ಅಂಗಳದಲ್ಲಿ ನಡೆದಿತ್ತು. ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಈ ಪಂದ್ಯ ಆರಂಭವಾಗಲಿದೆ.

ಕೊಹ್ಲಿ ನಾಯಕತ್ವದಲ್ಲಿ ನಟರಾಜನ್ ಚೆನ್ನಾಗಿ ಆಡ್ತಾರೆ: ಕರ್ಸನ್ ಘವ್ರಿಕೊಹ್ಲಿ ನಾಯಕತ್ವದಲ್ಲಿ ನಟರಾಜನ್ ಚೆನ್ನಾಗಿ ಆಡ್ತಾರೆ: ಕರ್ಸನ್ ಘವ್ರಿ

ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ಎರಡೂ ದೇಶದ ಖ್ಯಾತ ಆಟಗಾರರು ಐಪಿಎಲ್‌ನಲ್ಲಿ ಆಡಿದ್ದರು. ಟೀಮ್ ಇಂಡಿಯಾದ ಬಹುತೇಕ ಆಟಗಾರರು ಈ ಬಾರಿಯ ಐಪಿಎಲ್‌ನಲ್ಲಿ ಶ್ರೇಷ್ಠ ಪ್ರದರ್ಶನವನ್ನು ನೀಡಿದ್ದರೆ ಆಸ್ಟ್ರೇಲಿಯಾದ ಖ್ಯಾತನಾಮರು ವಿಫಲರಾಗಿದ್ದರು. ಆದರೆ ಅದಾದ ಬಳಿಕ ನಡೆದ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಟಗಾರರು ತಮ್ಮ ಫಾರ್ಮ್ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಟೀಮ್ ಇಂಡಿಯಾ ಬ್ಯಾಟ್ಸ್‌ಮನ್‌ಗಳಾದ ಕೆಎಲ್ ರಾಹುಲ್, ಶಿಖರ್ ಧವನ್, ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಯುಜುವೇಂದ್ರ ಚಾಹಲ್ ಅತ್ಯುತ್ತಮ ಪ್ರದರ್ಶನ ನೀಡಿ ಮಿಂಚಿದ ಟೀಮ್ ಇಂಡಿಯಾದ ಆಟಗಾರರಾಗಿದ್ದಾರೆ. ಆಸ್ಟ್ರೇಲಿಯಾ ನೆಲದಲ್ಲಿ ಈ ಆಟಗಾರರಿಂದ ಯಾವ ರೀತಿಯ ಪ್ರದರ್ಶನ ಬರಲಿದೆ ಎಂಬುದು ಕುತೂಹಲ ಮೂಡಿಸಿದೆ.

ಟಿ20ಯಲ್ಲಿ ಆಸ್ಟ್ರೇಲಿಯಾಕ್ಕೆ ಭಾರತ ಕಠಿಣ ಸವಾಲೊಡ್ಡುವ ನಿರೀಕ್ಷೆಟಿ20ಯಲ್ಲಿ ಆಸ್ಟ್ರೇಲಿಯಾಕ್ಕೆ ಭಾರತ ಕಠಿಣ ಸವಾಲೊಡ್ಡುವ ನಿರೀಕ್ಷೆ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತದ ಬ್ಯಾಟಿಂಗ್ ವಿಭಾಗ ಗಮನ ಸೆಳೆದಿತ್ತು ಆದರೆ ಮೊದಲೆರಡು ಪಂದ್ಯಗಳಲ್ಲಿ ಬೌಲರ್‌ಗಳು ವಿಕೆಟ್ ಪಡೆಯಲು ವಿಫಲರಾಗಿದ್ದರು. ಅಂತಿಮ ಪಂದ್ಯದಲ್ಲಿ ಭಾರತೀಯ ಬೌಲಿಂಗ್ ಪಡೆ ಮತ್ತೆ ವಿಶ್ವಾಸವನ್ನು ಮೂಡಿಸಿದ್ದು ಗೆಲುವು ಭಾರತಕ್ಕೆ ದಕ್ಕಲಿದೆಯೇ ಎಂಬುದಕ್ಕೆ ಕೆಲವೇ ಗಂಟೆಗಳಲ್ಲಿ ಉತ್ತರ ಲಭಿಸಲಿದೆ.

Story first published: Friday, December 4, 2020, 10:30 [IST]
Other articles published on Dec 4, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X