ಭಾರತ vs ಆಸ್ಟ್ರೇಲಿಯಾ ಟಿ20 ಸರಣಿ: ಮೊದಲ ಪಂದ್ಯದ ಸಮಯ, ನೇರಪ್ರಸಾರ ಮತ್ತು ಸಂಭಾವ್ಯ XI
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿದ್ದು ಸರಣಿಯ ಮೊದಲ ಪಂದ್ಯ ಗುರುವಾರ ನಡೆಯಲಿದೆ. ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೆಣೆಸಾಡಿದ್ದ ಈ ಎರಡು ತಂಡಗಳು ಇದೀಗ ಚುಟುಕು ಮಾದರಿಯಲ್ಲಿ ಕದನಕ್ಕಿಳಿದಿರುವುದು ಕುತೂಹಲ ಮೂಡಿಸಿದೆ. ಯುವ ಆಟಗಾರರನ್ನೇ ಒಳಗೊಂಡಿರುವ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದರೆ ಆಸ್ಟ್ರೇಲಿಯಾ ತಂಡ ಕೂಡ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ್ದು ಮ್ಯಾಥ್ಯೂ ವೇಡ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ.
ಮುಂದಿನ ಆರು ತಿಂಗಳಿನಲ್ಲಿ ಟಿ20 ವಿಶ್ವಕಪ್ ಟೂರ್ನಿ ಆಯೋಜನೆಯಾಗಲಿದೆ. ಹಾಗಾಗಿ ಆ ವಿಶ್ವಕಪ್‌ಗೆ ತಂಡವನ್ನು ಸಿದ್ಧಪಡಿಸುವ ದೃಷ್ಟಿಯಿಂದ ಈ ಸರಣಿಯ ಮೂಲಕವೇ ಸಿಜ್ಜುಗೊಳಿಸಲಾಗುತ್ತಿದೆ. ಹೀಗಾಗಿ ಈ ಸರಣಿ ಸಾಕಷ್ಟು ಮಹತ್ವ ಪಡೆದುಕೊಂಡಿದ್ದು ಯುವ ಆಟಗಾರರ ತಮಗೆ ಸಿಕ್ಕ ಅವಕಾಶವನ್ನು ಹೇಗೆ ಬಳಸಿಕೊಳ್ಳಲಿದ್ದಾರೆ ಎನ್ನುವುದು ಮುಖ್ಯವಾಗಲಿದೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರ ಮಾಹಿತಿ
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ನವೆಂಬರ್ 23 ಗುರುವಾರದಂದು ವಿಶಾಖಪಟ್ಟಣಂನ ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ಆಯೋಜನೆಯಾಗಲಿದೆ. ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು ಅದಕ್ಕೂ ಅರ್ಧ ಗಂಟೆ ಮುನ್ನ ಅಂದರೆ 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಪೋರ್ಟ್ಸ್ 18-1 ಹಾಗೂ ಸ್ಪೋರ್ಟ್ಸ 18-1 HDಯಲ್ಲಿ ಈ ಪಂದ್ಯ ನೇರಪ್ರಸಾರವಾಗಲಿದೆ. ಇನ್ನು ಜಿಯೋ ಸಿನಿಮಾದಲ್ಲಿ ಈ ಪಂದ್ಯದ ಲೈವ್‌ಸ್ಟ್ರೀಮಿಂಗ್ ಆಗಲಿದೆ.
ಟೀಮ್ ಇಂಡಿಯಾ ಸಂಭಾವ್ಯ XI: ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್/ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ಶಿವಂ ದುಬೆ/ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಮುಖೇಶ್ ಕುಮಾರ್
ಆಸ್ಟ್ರೇಲಿಯಾ ಸಂಭಾವ್ಯ XI: ಮ್ಯಾಥ್ಯೂ ವೇಡ್, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಆರನ್ ಹಾರ್ಡಿ, ನಾಥನ್ ಎಲ್ಲಿಸ್, ಕೇನ್ ರಿಚರ್ಡ್ಸನ್ / ಶಾನ್ ಅಬಾಟ್, ಜೇಸನ್ ಬೆಹ್ರೆನ್ಡಾರ್ಫ್, ಆಡಮ್ ಝಂಪಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications