
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದೆ. ಟೀಮ್ ಇಂಡಿಯಾ ಮೊದಲಿಗೆ ಬೌಲಿಂಗ್‌ನಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ನೀಡಿದರೆ ಬಳಿಕ ಬ್ಯಾಟಿಂಗ್‌ನಲ್ಲಿಯೂ ಭರ್ಜರಿ ಪ್ರದರ್ಶನ ನೀಡಿದೆ. ಈ ಮೂಲಕ ಮೊದಲ ದಿನದಾಟದ ಸಂಪೂರ್ಣ ಯಶಸ್ಸನ್ನು ಟೀಮ್ ಇಂಡಿಯಾ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ಇದರ ಲಾಭವನ್ನು ಪಡೆಯುವಲ್ಲಿ ಸಂಪೂರ್ಣವಾಗಿ ವಿಫಲವಾಯಿತು. ಆರಂಭದಲ್ಲಿ ಭಾರತದ ವೇಗಿಗಳಾದ ಸಿರಾಜ್ ಹಾಗೂ ಶಮಿ ದಾಳಿಗೆ ಆರಂಭಿಕರಿಬ್ಬರು ಕೂಡ ಶೀಘ್ರದಲ್ಲಿಯೇ ವಿಕೆಟ್ ಕಳೆದುಕೊಂಡರು. ಬಳಿಕ ಲ್ಯಾಬುಶೈನ್ ಹಾಗೂ ಸ್ಮಿತ್ ಜೋಡಿ ಆಸ್ಟ್ರೇಲಿಯಾ ತಂಡಕ್ಕೆ ಚೇತರಿಕೆ ನೀಡುವ ಪ್ರಯತ್ನ ನಡೆಸಿದರಾದರೂ ಮತ್ತೆ ಭಾರತ ಕಮ್‌ಬ್ಯಾಖ್ ಮಾಡಿ ಪಂದ್ಯದಲ್ಲಿ ಹಿಡಿತ ಸಾಧಿಸಿತು.
ಅಬ್ಬರಿಸಿದ ರವೀಂದ್ರ ಜಡೇಜಾ: ಭಾರತದ ಬೌಲಿಂಗ್‌ನಲ್ಲಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅದ್ಭುತ ಪ್ರದರ್ಶನ ನೀಡಿ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ನೀಡಿದ್ದಾರೆ. ಆಸ್ಟ್ರೇಲಿಯಾದ ಪ್ರಮುಖ ಆಟಗಾರರಾದ ಮಾರ್ನಸ್ ಲ್ಯಾಬುಶೈನ್ ಹಾಗೂ ಸ್ಟೀವ್ ಸ್ಮಿತ್ ಸೇರಿದಂತೆ ಒಟ್ಟು ಐದು ವಿಕೆಟ್ ಪಡೆದುಕೊಂಡು ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಭಾರೀ ಏಟು ನೀಡಿದ್ದಾರೆ. ಇನ್ನು ಟೀಮ್ ಇಂಡಿಯಾದ ಮತ್ತೋರ್ ಬೌಲರ್ ಆರ್ ಅಶ್ವಿನ್ ಕೂಡ ಈ ಪಂದ್ಯದಲ್ಲಿ ಮೂರು ವಿಕೆಟ್ ಪಡೆದುಕೊಂಡು ಮಿಂಚಿದ್ದಾರೆ. ಎರಡು ವಿಕೆಟ್‌ಗಳು ಸಿರಾಜ್ ಹಾಗೂ ಶಮಿ ಪಾಲಾಗಿದೆ.
ಇನ್ನು ಭಾರತದ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ ಕೇವಲ 177 ರನ್‌ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಪರವಾಗಿ ಯಾವ ಒಬ್ಬ ಆಟಗಾರ ಕೂಡ ಅರ್ಧ ಶತಕದ ಗಡಿ ದಾಟಲು ಸಾಧ್ಯವಾಗಿಲ್ಲ. ಲ್ಯಾಬುಶೈನ್ ಗಳಿಸಿದ 49 ರನ್ ತಂಡದ ಪರ ದಾಖಲಾದ ಅತಿ ಹೆಚ್ಚಿನ ಸ್ಕೋರ್ ಆಗಿದೆ. ಉಳಿದಂತೆ ಸ್ಟೀವ್ ಸ್ಮಿತ್ 37 ರನ್‌ಗಳ ಕೊಡುಗೆ ನೀಡಿದರೆ ಅಲೆಕ್ಸ್ ಕ್ಯಾರಿ 36 ರನ್‌ಗಳಿಸಿದರು.
ಬ್ಯಾಟಿಂಗ್‌ನಲ್ಲಿ ಭರ್ಜರಿ ಆರಂಭ: ಇನ್ನು ಬೌಲಿಂಗ್‌ನಲ್ಲಿ ಯಶಸ್ಸು ಸಾಧಿಸಿದ ಬಳಿಕ ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗದಲ್ಲಿಯೂ ಉತ್ತಮ ಆರಂಭವನ್ನು ಪಡೆದುಕೊಂಡಿದೆ. ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಮೊದಲ ವಿಕೆಟ್‌ಗೆ 76 ರನ್‌ಗಳ ಜೊತೆಯಾಟ ನೀಡಿದ್ದಾರೆ. ಆದರೆ ದಿನದಾಟದ ಅಂತಿಮ ಹಂತದಲ್ಲಿ 20 ರನ್‌ಗಳಿಸಿದ್ದ ಕೆಎಲ್ ರಾಹುಲ್ ವಿಕೆಟ್ ಕಳೆದುಕೊಂಡಿದ್ದಾರೆ. ನಾಯಕ ರೋಹಿತ್ ಶರ್ಮಾ 56 ರನ್‌ಗಳಿಸಿ 2ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದು ಅವರಿಗೆ ಆರ್ ಅಶ್ವಿನ್ ಕೂಡ ಸಾಥ್ ನೀಡಿದ್ದಾರೆ.
ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಶುಬ್ಮನ್ ಗಿಲ್, ಇಶಾನ್ ಕಿಶನ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಉಮೇಶ್ ಯಾದವ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಮ್ಯಾಟ್ ರೆನ್ಶಾ, ಪೀಟರ್ ಹ್ಯಾಂಡ್ಸ್ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
ಬೆಂಚ್: ಟ್ರಾವಿಸ್ ಹೆಡ್, ಮಿಚೆಲ್ ಸ್ವೆಪ್ಸನ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕ್ಯಾಮರೂನ್ ಗ್ರೀನ್, ಲ್ಯಾನ್ಸ್ ಮೋರಿಸ್