For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ಮೊದಲ ಟೆಸ್ಟ್ ಗೆದ್ದುಕೊಳ್ಳುವತ್ತ ಭಾರತದ ಚಿತ್ತ

India vs Australia: 1st Test match, Preview, Match timing

ಅಡಿಲೇಡ್: ಅಡಿಲೇಡ್ ಓವಲ್‌ನಲ್ಲಿ ಪ್ರವಾಸಿ ಭಾರತ ಮತ್ತು ಆತಿಥೇಯ ಆಸ್ಟ್ರೇಲಿಯಾ ತಂಡಗಳು ಮೊದಲ ಟೆಸ್ಟ್ ಪಂದ್ಯವನ್ನಾಡಲಿವೆ. ಡಿಸೆಂಬರ್ 17ರಂದು ಭಾರತೀಯ ಕಾಲಮಾನ 9:30 AMಗೆ ಪಂದ್ಯ ಆರಂಭವಾಗಲಿದೆ. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯಲ್ಲಿ ಆರಂಭಿಕ ಪಂದ್ಯದಲ್ಲಿ ಗೆದ್ದು ಸರಣಿ ಮುನ್ನಡೆಯತ್ತ ವಿರಾಟ್ ಕೊಹ್ಲಿ ಪಡೆ ಕಣ್ಣಿಟ್ಟಿದೆ.

ಕಳೆದ ವರ್ಷ ಇದೇ ಟೆಸ್ಟ್ ಸರಣಿಯನ್ನು ವಿರಾಟ್ ಕೊಹ್ಲಿ ಬಳಗ ಗೆದ್ದು ದಾಖಲೆ ನಿರ್ಮಿಸಿತ್ತು. ಈ ಬಾರಿ ಸರಣಿ ಗೆಲುವು ಸುಲಭವಾಗಿಲ್ಲ. ಎರಡೂ ತಂಡಗಳಲ್ಲೂ ಪ್ರಮುಖ ಆಟಗಾರರು (ಭಾರತದಲ್ಲಿ ರೋಹಿತ್ ಶರ್ಮಾ, ಆಸ್ಟ್ರೇಲಿಯಾದಲ್ಲಿ ಡೇವಿಡ್ ವಾರ್ನರ್) ಹೊರಗಿದ್ದಾರೆ. ಮೊದಲ ಟೆಸ್ಟ್ ಪಂದ್ಯ ಪಿಂಕ್‌ ಬಾಲ್ ಟೆಸ್ಟ್ ಆಗಿದ್ದು, ಮೊದಲ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಪಿತೃತ್ವ ರಜೆ ಪಡೆದುಕೊಳ್ಳಲಿದ್ದಾರೆ.

1
48440

ಭಾರತ ಪ್ಲೇಯಿಂಗ್ XI: ಪೃಥ್ವಿ ಶಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ಹನುಮಾ ವಿಹಾರಿ, ವೃದ್ಧಿಮಾನ್ ಸಹಾ (ವಿಕೆ), ಆರ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ

ಆಸ್ಟ್ರೇಲಿಯಾ ಸಂಭಾವ್ಯ ಪ್ಲೇಯಿಂಗ್ XI: ಜೋ ಬರ್ನ್ಸ್, ಮ್ಯಾಥ್ಯೂ ವೇಡ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ಸಿ & ಡಬ್ಲ್ಯೂಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್ವುಡ್.

Story first published: Thursday, December 17, 2020, 10:06 [IST]
Other articles published on Dec 17, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+