For Quick Alerts
ALLOW NOTIFICATIONS  
For Daily Alerts
 

IND vs AUS 1st Test: ಆಸೀಸ್ ಆರಂಭಿಕರಿಗೆ ಪೆವಿಲಿಯನ್ ದಾರಿ ತೋರಿಸಿ ಆಘಾತ ನೀಡಿದ ಸಿರಾಜ್, ಶಮಿ!

 India vs Australia 1st Test: Mohammed Siraj And Mohammed Shami Took Australias 2 Wickets

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದು (ಗುರುವಾರ, ಫೆಬ್ರವರಿ 9) ನಾಗ್ಪುರದಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಭಾರತದ ವೇಗಿಗಳಾದ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಪ್ರವಾಸಿ ಆಸ್ಟ್ರೇಲಿಯಾ ತಂಡದ ಆರಂಭಿಕ ವಿಕೆಟ್‌ಗಳನ್ನು ಕಿತ್ತು ಆಘಾತ ನೀಡಿದ್ದಾರೆ. ಮೊಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಉಸ್ಮಾನ್ ಖವಾಜಾ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರೆ, ಮೊಹಮ್ಮದ್ ಶಮಿ ಬೌಲಿಂಗ್‌ನಲ್ಲಿ ಡೇವಿಡ್ ವಾರ್ನರ್ ಕ್ಲೀನ್ ಬೌಲ್ಡ್ ಆದರು.

ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದ ಮೊದಲ ಅವಧಿಯ ಅರಂಭದಲ್ಲಿಯೇ ಭಾರತ ತಂಡ ಎದುರಾಳಿ ಆಸ್ಟ್ರೇಲಿಯಾ ಮೇಲೆ ಬಿಗಿ ಹಿಡಿತ ಸಾಧಿಸಿತು. ಆಸ್ಟ್ರೇಲಿಯಾ ತಂಡದ ಮೊತ್ತ ಕೇವಲ 2 ರನ್‌ಗಳಾಗುವಷ್ಟರಲ್ಲಿ ಆರಂಭಿಕ ವಿಕೆಟ್‌ಗಳನ್ನು ಪಡೆದು ಭಾರತ ಸಂಭ್ರಮಿಸಿತು.

 India vs Australia 1st Test: Mohammed Siraj And Mohammed Shami Took Australias 2 Wickets

ಮೊಹಮ್ಮದ್ ಸಿರಾಜ್ ತಮ್ಮ ಮೊದಲ ಓವರ್‌ನ ಮೊದಲ ಎಸೆತದಲ್ಲಿಯೇ ಉಸ್ಮಾನ್ ಖವಾಜಾ ಅವರನ್ನು ಎಲ್‌ಬಿಡಬ್ಲ್ಯೂ ಔಟ್ ಮಾಡುವ ಮೂಲಕ ಆರಂಭಿಕ ಆಘಾತ ನೀಡಿದರು. ಇದು ಪ್ಯಾಟ್ ಕಮ್ಮಿನ್ಸ್ ಅವರ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ತಲೆಕೆಳಗೆ ಮಾಡಿತು.

ಇತ್ತೀಚೆಗಷ್ಟೇ ಏಕದಿನ ಬೌಲಿಂಗ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿರುವ ಮೊಹಮ್ಮದ್ ಸಿರಾಜ್, ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ನಿರೀಕ್ಷಿತವಾಗಿ ಸ್ಥಾನ ಪಡೆದರು. ಉಸ್ಮಾನ್ ಖವಾಜಾ ಅವರ ವಿಕೆಟ್ ಪಡೆದಿದ್ದಕ್ಕೆ, ಡಗೌಟ್‌ನಲ್ಲಿ ಕುಳಿತಿದ್ದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಂದ ಚಪ್ಪಾಳೆ ಗಿಟ್ಟಿಕೊಂಡರು.

ಉಸ್ಮಾನ್ ಖವಾಜಾ ಅವರ ವಿಕೆಟ್‌ನ ಆರಂಭಿಕ ಹೊಡೆತದಿಂದ ಚೇತರಿಸಿಕೊಳ್ಳುವ ಮೊದಲೇ, ಮೊಹಮ್ಮದ್ ಶಮಿ ತನ್ನ ಎರಡನೇ ಓವರ್‌ನ ಮೊದಲ ಎಸೆತದಲ್ಲಿ ಡೇವಿಡ್ ವಾರ್ನರ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಭಾರತಕ್ಕೆ ಎರಡನೇ ಯಶಸ್ಸು ದೊರಕಿಸಿಕೊಟ್ಟರು. ಆಗ ಆಸ್ಟ್ರೇಲಿಯಾ ತಂಡದ ಮೊತ್ತ 2 ವಿಕೆಟ್‌ಗೆ 2 ರನ್‌ ಗಳಿಸಿತ್ತು.

 India vs Australia 1st Test: Mohammed Siraj And Mohammed Shami Took Australias 2 Wickets

ನಂತರ, ಜೊತೆಗೂಡಿದ ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲ್ಯಾಬುಶ್ಚಾಗ್ನೆ ಆಸ್ಟ್ರೇಲಿಯಾ ತಂಡದ ಮೊತ್ತವನ್ನು ಹೆಚ್ಚಿಸಲು ಎದುರು ನೋಡುತ್ತಿದ್ದಾರೆ. ಸದ್ಯ ಆಸ್ಟ್ರೇಲಿಯಾ ತಂಡ ಊಟದ ವಿರಾಮ ನಂತರ ಬ್ಯಾಟಿಂಗ್ ಮುಂದುವರೆಸಿದ್ದು, 34 ಓವರ್‌ಗಳಲ್ಲಿ 2 ವಿಕೆಟ್‌ಗೆ 83 ರನ್ ಗಳಿಸಿದ್ದು, ಮಾರ್ನಸ್ ಲ್ಯಾಬುಶ್ಚಾಗ್ನೆ 49 ರನ್ ಗಳಿಸಿ ಅರ್ಧಶತಕದತ್ತ ಮುನ್ನುಗ್ಗುತ್ತಿದ್ದರೆ, ಸ್ಟೀವ್ ಸ್ಮಿತ್ 25 ರನ್ ಗಳಿಸಿ ಆಡುತ್ತಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಆಡುವ 11ರ ಬಳಗ
ಭಾರತ: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್ (ಉಪನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೀಕಾರ್ ಭರತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶ್ಚಾಗ್ನೆ, ಸ್ಟೀವನ್ ಸ್ಮಿತ್, ಮ್ಯಾಟ್ ರೆನ್ಶಾ, ಪೀಟರ್ ಹ್ಯಾಂಡ್ಸ್‌ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್

Story first published: Thursday, February 9, 2023, 11:56 [IST]
Other articles published on Feb 9, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+