For Quick Alerts
ALLOW NOTIFICATIONS  
For Daily Alerts
 

India vs Australia: ನಾಗ್ಪುರ ಟೆಸ್ಟ್‌ನಲ್ಲಿ 'RRR' ಆಟ ಬೆಂಕಿ ಎಂದ ಸಚಿನ್ ತೆಂಡೂಲ್ಕರ್!

India vs Australia 1st Test: Sachin Tendulkar interesting tweet to praise Indian trio

ನಾಗ್ಪುರ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದ್ದು ಅದ್ಭುತವಾಗಿ ಪ್ರದರ್ಶನ ನೀಡುತ್ತಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ನಲ್ಲಿ ಮೇಲುಗೈ ಸಾಧಿಸಿದ ಬಳಿಕ ಬ್ಯಾಟಿಂಗ್‌ನಲ್ಲಿಯೂ ನಾಯಕ ರೋಹಿತ್ ಶರ್ಮಾ ಶತಕದ ನೆರವಿನಿಂದಾಗಿ ಟೀಮ್ ಇಂಡಿಯಾ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಸಂಪೂರ್ಣ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರ ಪ್ರದರ್ಶನದ ಬಗ್ಗೆ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ವಿಶಿಷ್ಠವಾಗಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನಾಗ್ಪುರ ಟೆಸ್ಟ್ ಪಂದ್ಯದ ಮೊದಲ ಎರಡು ದಿನಗಳಲ್ಲಿ ಮಿಂಚಿರುವ ಆಟಗಾರರಾದ ರೋಹಿತ್ ಶರ್ಮಾ, ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಬಗ್ಗೆ ಸಚಿನ್ ತೆಂಡೂಲ್ಕರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಮಿಂಚಿರುವ ಈ ಮೂವರು ಆಟಗಾರರನ್ನು 'RRR' ಎಂದು ಬಣ್ಣಿಸಿರುವ ಸಚಿನ್ ತೆಂಡೂಲ್ಕರ್ ಹೊಗಳಿ ಟ್ವೀಟ್ ಮಾಡಿದ್ದಾರೆ.

" RRR.. ರೋಹಿತ್, ರವೀಂದ್ರ ಹಾಗೂ ರವಿಂಚಂದ್ರನ್ ಈ ತ್ರಿವಳಿಗಳು ಮೊದಲ ಟೆಸ್ಟ್‌ನಲ್ಲಿ ಮೇಲುಗೈ ಸಾಧಿಸಲು ಸಹಾಯ ಮಾಡಿದ್ದಾರೆ. ರೋಹಿತ್ ಶರ್ಮಾ ಶತಕ ಸಿಡಿಸಿ ನಾಯಕ ನಾಯಕ ಮುಂದೆ ನಿಂತು ತಂಡವನ್ನು ಮುನ್ನಡೆಸಿದರೆ ಅಶ್ವಿನ್ ಹಾಗೂ ಜಡೇಜಾ ನಮಗೆ ಪ್ರಮುಖ ಮೇಲುಗೈ ತಂದುಕೊಟ್ಟಿದ್ದಾರೆ" ಎಂದು ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬೌಲಿಂಗ್ ನಡೆಸಿದ ಟೀಮ್ ಇಂಡಿಯಾ ಪರವಾಗಿ ರವೀಂದ್ರ ಜಡೇಜಾ ಐದು ವಿಕೆಟ್‌ಗಳ ಗೊಂಚಲು ಪಡೆದು ಭಾರತ ತಂಡದ ಮೇಲುಗೈಗೆ ಕಾರಣವಾದರು. ಆರ್ ಅಶ್ವಿನ್ ಕೂಡ ಮೂರು ವಿಕೆಟ್ ಪಡದುಕೊಂಡಿದ್ದಾರೆ. ಇದರ ಪರಿಣಾಮವಾಗಿ ಆಸ್ಟ್ರೇಲಿಯಾ 177 ರನ್‌ಗಳಿಗೆ ಆಲೌಟ್ ಆಯಿತು. ಬಳಿಕ ಬ್ಯಾಟಿಂಗ್‌ನಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದು ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಮೇಲುಗೈ ಸಾಧಿಸಲು ಕಾರಣವಾಗಿದ್ದಾರೆ.

ಬ್ಯಾಟಿಂಗ್‌ನಲ್ಲಿಯೂ ಮಿಂಚಿದ ಜಡ್ಡು ಅಶ್ವಿನ್: ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಬೌಲಿಂಗ್‌ನ ಜೊತೆಗೆ ಬ್ಯಾಟಿಂಗ್‌ನಲ್ಲಿಯೂ ಮಿಂಚಿದ್ದಾರೆ. ಮೂರನೆ ಕ್ರಮಾಂಕದಲ್ಲಿ ಕಣಕ್ಕಿಳಿದ ಆರ್ ಅಶ್ವಿನ್ ರೋಹಿತ್ ಶರ್ಮಾ ಜೊತೆಗೆ ಉತ್ತಮ ಜೊತೆಯಾಟದಲ್ಲಿ ಭಾಗಿಯಾದರು. ಅಶ್ವಿನ್ ಬ್ಯಾಟ್‌ನಿಂದ 23 ರನ್‌ಗಳು ಬಂದಿದೆ. ಇನ್ನು ರವೀಂದ್ರ ಜಡೇಜಾ ಕೆಳ ಕ್ರಮಾಂಕದಲ್ಲಿ ಭಾರತ ತಂಡಕ್ಕೆ ಭರ್ಜರಿಯಾಗಿ ಪ್ರದರ್ಶನ ನೀಡಿ ನೆರವಾಗಿದ್ದಾರೆ.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ಶುಬ್ಮನ್ ಗಿಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಉಮೇಶ್ ಯಾದವ್

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಪೀಟರ್ ಹ್ಯಾಂಡ್ಸ್ಕಾಂಬ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
ಬೆಂಚ್: ಟ್ರಾವಿಸ್ ಹೆಡ್, ಮಿಚೆಲ್ ಸ್ವೆಪ್ಸನ್, ಆಷ್ಟನ್ ಅಗರ್, ಕ್ಯಾಮರೂನ್ ಗ್ರೀನ್, ಮಿಚೆಲ್ ಸ್ಟಾರ್ಕ್, ಲ್ಯಾನ್ಸ್ ಮೋರಿ

Story first published: Friday, February 10, 2023, 15:34 [IST]
Other articles published on Feb 10, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+