ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ODI ಹಾಗೂ T20 ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ

India vs Australia 2020-21: Australia Squad for ODI and T20 Series Against India

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಸರಣಿ ಸಾಕಷ್ಟು ನಿರೀಕ್ಷೆಯನ್ನು ಹುಟ್ಟು ಹಾಕಿದೆ. ನವೆಂಬರ್ 27 ರಿಂದ ಆರಂಭವಾಗಲಿರುವ ಈ ಸರಣಿಯಲ್ಲಿ ಮೊದಲಿಗೆ ಸೀಮಿತ ಓವರ್‌ಗಳ ಸರಣಿ ನಡೆಯಲಿದೆ. ಮೊದಲಿಗೆ ಏಕದಿನ ಹಾಗೂ ಟೀ20 ಟ್ರೋಫಿಗಾಗಿ ಆಸಿಸ್ ಹಾಗೂ ಭಾರತ ತಂಡಗಳು ಕಾದಾಡಲಿದೆ.

ಈ ಸೀಮಿತ ಓವರ್‌ಗಳ ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಇಂದು ಪ್ರಕಟಿಸಲಾಗಿದೆ. ಹದಿನೆಂಟು ಆಟಗಾರರ ತಂಡವನ್ನು ಪ್ರಕಟಿಸಲಾಗಿದ್ದು ಈ ತಂಡ ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ ಭಾರತ ತಂಡವನ್ನು ಎದುರಿಸಲಿದೆ.

ಭಾರತ vs ಆಸ್ಟ್ರೇಲಿಯಾ: ಟೆಸ್ಟ್, ಟಿ20, ಏಕದಿನ ಪಂದ್ಯಗಳ ಸಮಯ ಪ್ರಕಟಭಾರತ vs ಆಸ್ಟ್ರೇಲಿಯಾ: ಟೆಸ್ಟ್, ಟಿ20, ಏಕದಿನ ಪಂದ್ಯಗಳ ಸಮಯ ಪ್ರಕಟ

ಆರೋನ್ ಫಿಂಚ್ ನೇತೃತ್ವದ ಈ ತಂಡದಲ್ಲಿ ಎರಡು ಪ್ರಮುಖ ಬದಲಾವಣೆಗಳು ಆಗಿದೆ. ನ್ಯೂಸೌತ್ ವೇಲ್ಸ್ ತಂಡದ ಆಲ್‌ರೌಂಡರ್, ಬಿಗ್‌ಬ್ಯಾಶ್‌ನಲ್ಲಿ ಸಿಡ್ನಿ ಸಿಕ್ಸರ್ಸ್ ತಂಡವನ್ನು ಮುನ್ನಡೆಸುವ ಮೌಸಿಸ್ ಹೆನ್ರಿಕ್ಸ್ ತಂಡಕ್ಕೆ ಪುನರಾಗಮನ ಮಾಡಿದ್ದಾರೆ, ಇವರ ಜೊತೆಗೆ 21ರ ಹರೆಯದ ಯುವ ಆಟಗಾರ ಕ್ಯಾಮೆರೊನ್ ಗ್ರೀನ್ ಆಸಿಸ್ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ.

ಆಸ್ಟ್ರೇಲಿಯಾ ತಂಡ ಹೀಗೆದೆ: ಆರೋನ್ ಫಿಂಚ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮ್ಮಿನ್ಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಮೊಯ್ಸಿಸ್ ಹೆನ್ರಿಕ್ಸ್, ಮಾರ್ನಸ್ ಲ್ಯಾಬುಶೈನ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇನಿಯಲ್ ಸ್ಯಾಮ್ಸ್, ಕೇನ್ ರಿಚರ್ಡ್‌ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋಯ್ನಿಸ್, ಮ್ಯಾಥ್ಯೂ ವೇಡ್ , ಡೇವಿಡ್ ವಾರ್ನರ್, ಆಡಮ್ ಜಂಪಾ

Story first published: Thursday, October 29, 2020, 10:42 [IST]
Other articles published on Oct 29, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X