ಭಾರತ vs ಆಸ್ಟ್ರೇಲಿಯಾ: ಕೊರೊನಾ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಪಾಸ್

ಸಿಡ್ನಿ: ಬಹು ನಿರೀಕ್ಷಿತ ಭಾರತ-ಆಸ್ಟ್ರೇಲಿಯಾ ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ತಲುಪಿರುವ ಟೀಮ್ ಇಂಡಿಯಾ ಕೋವಿಡ್-19 ಪರೀಕ್ಷೆಯಲ್ಲಿ ಪಾಸ್ ಆಗಿದೆ. ತಂಡ ಆಟಗಾರರ, ಸಿಬ್ಬಂದಿಯ ಕೊರೊನಾ ಪರೀಕ್ಷೆಯ ಫಲಿತಾಂಶ ನೆಗೆಟಿವ್ ಬಂದಿದೆ. ಕೊಹ್ಲಿ ಪಡೆಯೀಗ ದೈಹಿಕ ಅಭ್ಯಾಸ ಆರಂಭಿಸಿದೆ.
ಆಸ್ಟ್ರೇಲಿಯಾಕ್ಕೆ ಬಂದಿಳಿದಿರುವ ಭಾರತೀಯ ತಂಡದಲ್ಲಿ ಹೆಚ್ಚಿನವರು ಇತ್ತೀಚೆಗಷ್ಟೇ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಪಾಲ್ಗೊಂಡಿದ್ದವರು. ಅಲ್ಲಿ ಬಯೋ ಬಬಲ್‌ನಲ್ಲಿ ಇದ್ದಿದ್ದರಿಂದ ಆಟಗಾರರಿಗೆ ಕೊರೊನಾ ಭೀತಿ ಇರಲಿಲ್ಲ.
ಕೊರೊನಾ ಕ್ಲೀಯರ್ ಮಾಡಿರುವ ಭಾರತ ತಂಡ ಸಿಡ್ನಿಯ ಒಲಿಂಪಿಕ್ ಪಾರ್ಕ್‌ನಲ್ಲಿರುವ ಬ್ಲ್ಯಾಕ್‌ಟೌನ್ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಅಭ್ಯಾಸ ನಡೆಸಿದೆ. ತಂಡದಲ್ಲಿ ಹಾರ್ದಿಕ್ ಪಾಂಡ್ಯ, ಪೃಥ್ವಿ ಶಾ, ಮೊಹಮ್ಮದ್ ಸಿರಾಜ್ ಮೊದಲಾದ ಆಟಗಾರರಿದ್ದರು.
ಭಾರತೀಯ ಆಟಗಾರರು ಅಭ್ಯಾಸ ನಡೆಸುತ್ತಿರುವ ಚಿತ್ರವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದೆ. ಭಾರತ vs ಆಸ್ಟ್ರೇಲಿಯಾ ಪಂದ್ಯಗಳು ನವೆಂಬರ್ 27ರಿಂದ ಆರಂಭಗೊಳ್ಳಲಿದೆ. ಪ್ರವಾಸವು ಮೂರು ಏಕದಿನ ಪಂದ್ಯಗಳು, ಮೂರು ಟಿ20ಐ ಪಂದ್ಯಗಳು ಮತ್ತು ನಾಲ್ಕು ಟೆಸ್ಟ್ ಪಂದ್ಯಗಳನ್ನು ಒಳಗೊಂಡಿರಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications