Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS T20: ಸರಣಿಯಲ್ಲಿ ಮುನ್ನಡೆಗಾಗಿ ಹೋರಾಟ: ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್‌

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಎರಡನೇ ಟಿ20 ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯಲಿದೆ. ಐದು ಪಂದ್ಯಗಳ ಮೊದಲ ಟಿ20 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಹೀಗಾಗಿ ಎರಡನೇ ಟಿ20 ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸುವ ಕನಸು ಉಭಯ ತಂಡಗಳದ್ದಾಗಿದೆ. ಅಂಕಿ ಅಂಶಗಳ ಲೆಕ್ಕಾಚಾರದಲ್ಲೂ ಉಭಯ ತಂಡಗಳು ಉತ್ತಮವಾಗಿವೆ.

ಭಾರತ ತಂಡದಲ್ಲಿ ಸ್ಟಾರ್ ಆಟಗಾರರು ಇದ್ದಾರೆ. ಅಭಿಷೇಕ್‌ ಶರ್ಮಾ ಹಾಗೂ ಶುಭಮನ್‌ ಗಿಲ್‌ ಭರ್ಜರಿ ಆರಂಭವನ್ನು ನೀಡಬೇಕಿದೆ. ಅಭಿಷೇಕ್‌ ಶರ್ಮಾ ಮೊದಲ ಪಂದ್ಯದಲ್ಲಿ ಮಾಡಿದ ತಪ್ಪನ್ನು ಮೆಟ್ಟಿನಿಲ್ಲಬೇಕಿದೆ. ಇನ್ನು ಶುಭಮನ್‌ ಗಿಲ್‌ ಹಾಗೂ ಸೂರ್ಯಕುಮಾರ್ ಯಾದವ್ ಮೊದಲ ಪಂದ್ಯದಲ್ಲಿ ಆಡಿದ ರೀತಿಯಲ್ಲಿ ಬ್ಯಾಟ್ ಮಾಡಬೇಕಿದೆ. ಅಂದಾಗ ಮಾತ್ರ ದೊಡ್ಡ ಮೊತ್ತದ ಕನಸು ನನಸಾಗುತ್ತದೆ.

India vs Australia 2nd T20 in Melbourne Preview Squads Match Time amp amp Live Stream

ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ, ಸಂಜು ಸ್ಯಾಮ್ಸನ್‌ ಸ್ಥಿರ ಪ್ರದರ್ಶನವನ್ನು ನೀಡಬೇಕಿದೆ. ಇನ್ನು ಆಲ್‌ರೌಂಡರ್‌ ರೂಪದಲ್ಲಿ ಕಾಣಿಸಿಕೊಳ್ಳಲಿರುವ ಶಿವಂ ದುಬೆ, ಅಕ್ಷರ್‌ ಪಟೇಲ್‌, ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಬೇಕಿದೆ. ಅಂದಾಗ ಆಸೀಸ್‌ ತಂಡವನ್ನು ಮಣಿಸಬಹುದಾಗಿದೆ. ಸ್ಪಿನ್‌ ಜುಗಲ್‌ ಬಂಧಿ ರೂಪದಲ್ಲಿ ಕುಲ್‌ದೀಪ್‌ ಯಾದವ್‌, ವರುಣ್ ಚಕ್ರವರ್ತಿ ತಮ್ಮ ಸ್ಪಿನ್ ಜಾದುವಿನಿಂದ ಎದುರಾಳಿಗಳನ್ನು ಕಾಡಬೇಕಿದೆ. ಇನ್ನು ವೇಗದ ಬೌಲರ್‌ಗಳಾಗಿ ಕಾಣಿಸಿಕೊಳ್ಳಲಿರುವ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಿತ್ ರಾಣ ಪರ್ಫೆಕ್ಟ್‌ ಲೈನ್‌ ಮೂಲಕ ಎದುರಾಳಿಗಳನ್ನು ಕಾಡಬೇಕಿದೆ.

ಪಂದ್ಯವನ್ನು ಬದಲಿಸಬಲ್ಲ ಪ್ಲೇಯರ್ಸ್‌

ಆಸ್ಟ್ರೇಲಿಯಾ ತಂಡದಲ್ಲೂ ಬಿಗ್ ಪ್ಲೇಯರ್‌ಗಳ ದಂಡೇ ಇದೆ. ಈ ಪ್ಲೇಯರ್‌ಗಳು ಭಾರತೀಯ ಬೌಲರ್‌ಗಳನ್ನು ಕಾಡಬಲ್ಲರು. ಟಿ20 ಕ್ರಿಕೆಟ್‌ನ ಸ್ಟಾರ್‌ ಆಟಗಾರರಾದ ಟೀಮ್‌ ಡೇವಿಡ್‌, ಟ್ರಾವಿಸ್‌ ಹೆಡ್‌, ಮಾರ್ಕಸ್‌ ಸ್ಟೋಯ್ನಿಸ್‌ ಪಂದ್ಯದ ಗತಿಯನ್ನು ಬದಲಿಸಬಲ್ಲ ಆಟಗಾರರಾಗಿದ್ದಾರೆ. ಜೋಶ್‌ ಹ್ಯಾಜಲ್‌ವುಡ್‌ ಬ್ಯಾಟರ್‌ಗಳಿಗೆ ಸತತ ಪ್ರಶ್ನೆಗಳನ್ನು ಕೇಳಿ ಕಾಡಬಲ್ಲರು.

ಪಂದ್ಯ ಆರಂಭವಾಗುವುದು ಯಾವಾಗ?

ಪಂದ್ಯ 1.45ಕ್ಕೆ (ಭಾರತೀಯ ಕಾಲಮಾನ) ಆರಂಭವಾಗಲಿದ್ದು, ಟಾಸ್ ಅರ್ಧ ಗಂಟೆ ಮುಂಚೆ ನಡೆಯಲಿದೆ.

ಪಂದ್ಯವನ್ನು ವೀಕ್ಷಿಸುವುದು ಹೇಗೆ?

ಪಂದ್ಯವನ್ನು ಸ್ಟಾರ್‌ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್‌ಸ್ಟಾರ್ ಮೂಲಕ ನೋಡಬಹುದಾಗಿದೆ.

ಭಾರತದ ಸಂಭ್ಯಾವ ತಂಡ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ ಸಂಭ್ಯಾವ ತಂಡ: ಟ್ರೆವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಟಿಮ್ ಡೇವಿಡ್, ಮಿಚ್ ಓವನ್, ಮಾರ್ಕಸ್ ಸ್ಟೋನಿಸ್, ಜೋಶ್ ಫಿಲಿಪ್, ಕ್ಸೇವಿಯರ್ ಬಾರ್ಟ್ಲೆಟ್/ಸೀನ್ ಅಬಾಟ್, ನಾಥನ್ ಎಲ್ಲಿಸ್, ಮ್ಯಾಟ್ ಕುಹ್ನೆಮನ್, ಜೋಶ್ ಹ್ಯಾಜಲ್ವುಡ್.

Story first published: Friday, October 31, 2025, 8:14 [IST]
Other articles published on Oct 31, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+