Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸ್ಟ್ರೇಲಿಯಾ ಎರಡನೇ ಟಿ20 ಪಂದ್ಯ, Live ಸ್ಕೋರ್

India vs Australia 2nd t20, SCG, live score card

ಆಸ್ಟ್ರೇಲಿಯಾ ಹಾಗೂ ಭಾರತದ ನಡುವಿನ ಎರಡನೇ ಟಿ20 ಪಂದ್ಯ ಸಿಡ್ನಿಯಲ್ಲಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಆರಂಭವಾಗಿದೆ. ಮೊದಲ ಟಿ20 ಪಂದ್ಯವನ್ನು ಗೆದ್ದಿರುವ ಭಾರತ ಈ ಪಂದ್ಯವನ್ನೂ ಗೆಲ್ಲುವ ಉತ್ಸಾಹದಲ್ಲಿದೆ. ಟೀಮ್ ಇಂಡಿಯಾ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಳ್ಳಲಾಗಿದೆ.

ಮೊದಲ ಪಂದ್ಯದಲ್ಲಿ ಆರಂಭಿಕ ಕುಸಿತದ ನಂತದ ಅಂತಿಮ ಹಂತದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನಿಡಿದ ಭಾರತ ಬಳಿಕ ಬೌಲಿಂಗ್ ವಿಭಾಗದಲ್ಲೂ ಮಿಂಚಿತ್ತು. ಈ ಮೂಲಕ ಅದ್ಭುತ ಜಯವನ್ನು ತನ್ನದಾಗಿಸಿತ್ತು. ಇದೇ ಪ್ರದರ್ಶನವನ್ನು ಎರಡನೇ ಪಂದ್ಯದಲ್ಲೂ ನೀಡುವ ನಿರೀಕ್ಷೆಯಲ್ಲಿ ಟೀಮ್ ಇಂಡಿಯಾ ಅಭಿಮಾನಿಗಳು ಇದ್ದಾರೆ.

ಮೂರನೇ ಪಂದ್ಯದಲ್ಲಿ ಎರಡು ತಂಡಗಳಲ್ಲಿ ಪ್ರಮುಖ ಬದಲಾವಣೆಗಳು ಆಗಿದೆ.ಭಾರತ ತಂಡದಲ್ಲಿ ಮೂರು ಬದಲಾವಣೆಗಳಾಗಿದ್ದು ಗಾಯಗೊಂಡಿರುವ ರವೀಂದ್ರ ಜಡೇಜಾ ಬದಲಿಗೆ ಚಾಹಲ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮೊಹಮ್ಮದ್ ಶಮಿ ಬದಲಿಗೆ ಠಾಕೂರ್ ಹಾಗೂ ಮನೀಸ್ ಪಾಂಡೆ ಬದಲಿಗೆ ಶ್ರೇಯಸ್ ಐಯ್ಯರ್ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಆಸ್ಟ್ರೇಲಿಯಾ ತಂಡದಲ್ಲಿ ನಾಯಕ ಫಿಂಚ್ ಆಡುವ ಬಳಗದಿಂದ ಹೊರಗುಳಿದಿದ್ದು ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಫಿಂಚ್, ಹ್ಯಾಜಲ್‌ವುಡ್ ಹಾಗೂ ಸ್ಟಾರ್ಕ್ ಆಡುವ ಬಳಗದಲ್ಲಿ ಇಲ್ಲ. ಈ ಸ್ಥಾನಗಳಿಗೆ ಸ್ಯಾಮ್ಸ್, ಸ್ಟೋಯ್ನಿಸ್ ಹಾಗೂ ಆಂಡ್ರ್ಯೂ ಟೈ ಕಣಕ್ಕಿಳಿಯುತ್ತಿದ್ದಾರೆ.

Live ಸ್ಕೋರ್ ಕಾರ್ಡ್ ಹೀಗಿದೆ:

1
48438

ಟೀಮ್ ಇಂಡಿಯಾ ಆಡುವ ಬಳಗ : ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ದೀಪಕ್ ಚಹರ್, ಟಿ ನಟರಾಜನ್, ಯುಜ್ವೇಂದ್ರ ಚಹಲ್

ಡಿ ಆರ್ಸಿ ಶಾರ್ಟ್, ಮಾರ್ಕಸ್ ಸ್ಟೋಯಿನಿಸ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್ ವೆಲ್, ಮೊಯಿಸಸ್ ಹೆನ್ರಿಕ್ಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್ / ನಾಯಕ), ಡೇನಿಯಲ್ ಸ್ಯಾಮ್ಸ್, ಸೀನ್ ಅಬಾಟ್, ಮಿಚೆಲ್ ಸ್ವೆಪ್ಸನ್, ಆಡಮ್ ಜಂಪಾ, ಆಂಡ್ರ್ಯೂ ಟೈ

Story first published: Sunday, December 6, 2020, 14:48 [IST]
Other articles published on Dec 6, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+