ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ರೋಹಿತ್ ಅಮೋಘ ಆಟಕ್ಕೆ ಕಾರಣವಾಗಿದ್ದೇನು? ವಿವರಿಸಿದ ಸುನಿಲ್ ಗವಾಸ್ಕರ್

India vs Australia 2nd t20I: Sunil Gavaskar praises Rohit Sharma performence explains reason behind heroics batting

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡುವ ಮೂಲಕ ಪೂರ್ಣ ಪ್ರಮಾಣದ ಆಟ ನಡೆಯದಿದ್ದರೂ ನಾಗ್ಪುರ ಪಂದ್ಯದಲ್ಲಿ ಟೀಮ್ ಇಂಡಿಯಾ ಅಭಿಮಾನಿಗಳು ಭರಪೂರ ಮನರಂಜನೆ ಪಡೆದಿದ್ದಾರೆ. 20 ಓವರ್‌ಗಳಿಗೆ ಬದಲಾಗಿ ಕೇವಲ 8 ಓವರ್‌ಗಳಿಗೆ ಪಂದ್ಯವನ್ನು ಸೀಮಿತಗೊಳಿಸಲಾಯಿತಾದರೂ ಈ ಅವಧಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಿಂದ ಅದ್ಭುತ ಪ್ರದರ್ಶನ ಬಂದಿದ್ದು ಅಂತಿಮವಾಗಿ ಭಾರತ ತಂಡ ಈ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು.

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಟೀಮ್ ಇಂಡಿಯಾ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು. ಕೇವಲ 20 ಎಸೆತ ಎದುರಿಸಿದ ರೋಹಿತ್ ಶರ್ಮಾ 46 ರನ್‌ಗಳಿಸುವ ಮೂಲಕ 91 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ತಲುಪಲು ಕಾರಣವಾದರು. ರೋಹಿತ್ ಶರ್ಮಾ ಅವರ ಈ ಪ್ರದರ್ಶನಕ್ಕೆ ಸಾಕಷಟು ಮೆಚ್ಚುಗೆಗಳು ಹರಿದುಬಂದಿದ್ದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಕೊಂಡಾಡಿದ್ದಾರೆ. ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ಅವರ ಈ ಅಮೋಘ ಪ್ರದರ್ಶನಕ್ಕೆ ಕಾರಣವಾದ ಅಂಶವನ್ನು ಉಲ್ಲೇಖಿಸಿದ್ದಾರೆ.

ಅಂತಿಮ ಪಂದ್ಯದ ಬಳಿಕ ಕಣ್ಣೀರಿಟ್ಟ ಟೆನಿಸ್ ಲೆಜೆಂಡ್ ರೋಜರ್ ಫೆಡರರ್: ಗೆಳೆಯನನ್ನು ಬೀಳ್ಕೊಟ್ಟ ರಾಫಾಅಂತಿಮ ಪಂದ್ಯದ ಬಳಿಕ ಕಣ್ಣೀರಿಟ್ಟ ಟೆನಿಸ್ ಲೆಜೆಂಡ್ ರೋಜರ್ ಫೆಡರರ್: ಗೆಳೆಯನನ್ನು ಬೀಳ್ಕೊಟ್ಟ ರಾಫಾ

ಲೆಕ್ಕಾಚಾರದಿಂದ ಆಡಿದರು ರೋಹಿತ್ ಎಂದ ಗವಾಸ್ಕರ್

ಲೆಕ್ಕಾಚಾರದಿಂದ ಆಡಿದರು ರೋಹಿತ್ ಎಂದ ಗವಾಸ್ಕರ್

ಆಸ್ಟ್ರೇಲಿಯಾ ವಿರುದ್ಧದ ಗೆಲ್ಲೇ ಬೇಕಾಗಿದ್ದ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ನಿಡಿದ ಅಮೋಘ ಪ್ರದರ್ಶನದ ಬಗ್ಗೆ ಸುನಿಲ್ ಗವಾಸ್ಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಬಹಳ ಲೆಕ್ಕಾಚಾರದಿಂದ ಆಟವನ್ನಾಡಿದ್ದು ಇದು ತಮಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು ಎಂದಿದ್ದಾರೆ.

ಹೊಡೆತಗಳ ಆಯ್ಕೆ ಉತ್ತಮವಾಗಿತ್ತು

ಹೊಡೆತಗಳ ಆಯ್ಕೆ ಉತ್ತಮವಾಗಿತ್ತು

"ರೋಹಿತ್ ಶರ್ಮಾ ಅವರ ಇಂದಿನ ಆಟವನ್ನು ನೋಡಿದರೆ ಬಹಳಷ್ಟು ಲೆಕ್ಕಾಚಾರದಿಂದ ಕೂಡಿತ್ತು. ಅವರು ಎಲಲ್ಊ ರಕ್ಷಣಾತ್ಮಕವಾಗಿ ಕಾಣಿಸಲಿಲ್ಲ. ಆದರೆ ಅವರ ಹೊಡೆತಗಳ ಆಯ್ಕೆ ಬಹಳ ಉತ್ತಮವಾಗಿತ್ತು. ಅದರಲ್ಲೂ ಅವರ ಫ್ಲಿಕ್ ಹಾಗೂ ಫುಲ್ ಶಾಟ್‌ಗಳು ಅತ್ಯುತ್ತಮವಾಗಿತ್ತು. ಆತ ಆಫ್‌ಸೈಡ್‌ನಲ್ಲಿ ಆಡುವಾಗ ಹೆಚ್ಚು ಅಪಾಯಕ್ಕೆ ಸಿಲುಕುತ್ತಾರೆ. ಬಾರಿಸುವ ಸಂದರ್ಭದಲ್ಲಿ ಚೆಂಡು ಸ್ಟಾಂಟ್‌ಗೆ ಬಡಿಯುವ ಬದಲು ಗಾಳಿಯಲ್ಲಿ ಹಾರುತ್ತದೆ. ಈ ವಿಚಾರವಾಗಿ ಮಾತ್ರವೇ ರೋಹಿತ್ ಹೆಚ್ಚಿನ ಗಮನಹರಿಸಬೇಕಿದೆ" ಎಂದಿದ್ದಾರೆ ಸುನಿಲ್ ಗವಾಸ್ಕರ್.

ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಭರ್ಜರಿ ಗೆಲುವು

ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಭರ್ಜರಿ ಗೆಲುವು

ನಾಗ್ಪುರದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯ ಈ ಸರಣಿಯಲ್ಲಿ ಭಾರತದ ಪಾಲಿಗೆ ಅತ್ಯಂತ ಮಹತ್ವದ ಪಂದ್ಯವಾಗಿತ್ತು. ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಕಾರಣ ಈ ಪಂದ್ಯವನ್ನು ಗೆದ್ದರಷ್ಟೇ ಸರಣಿಯಲ್ಲಿ ಜೀವಂತವಾಗುಳಿಯಲು ಸಾಧ್ಯವಿತ್ತು. ಇಂಥಾ ನಿರ್ಣಾಯಕ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ತಮ್ಮ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಕೇವಲ 20 ಎಸೆತಗಳನ್ನು ಎದುರಿಸಿ ಭರ್ಜರಿ 46 ರನ್‌ಗಳನ್ನು ಗಳಿಸಿದರು. ಇದರಲ್ಲಿ ನಾಲ್ಕು ಭರ್ಜರಿ ಸಿಕ್ಸರ್ ಹಾಗೂ ನಾಲ್ಕು ಬೌಂಡರಿ ಒಳಗೊಂಡಿತ್ತು. ಇನ್ನು ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಅಂತಿಮ ಓವರ್‌ನಲ್ಲಿ ಒಂದು ಬೌಂಡರಿ ಹಾಗೂ ಒಂದು ಸಿಕ್ಸರ್ ಸಿಡಿಸುವ ಮೂಲಕ ಗೆಲುವಿನ ರನ್ ಬಾರಿಸಿ ಮಿಂಚಿದರು. ಈ ಮೂಲಕ ಭಾರತ ಈ ಸರಣಿಯನ್ನು ಸಮಬಲಗೊಳಿಸಲು ಸಾಧ್ಯವಾಯಿತು.

ಎರಡು ತಂಡಗಳ ಸಂಪೂರ್ಣ ಸ್ಕ್ವಾಡ್

ಎರಡು ತಂಡಗಳ ಸಂಪೂರ್ಣ ಸ್ಕ್ವಾಡ್

ಟೀಮ್ ಇಂಡಿಯಾ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ರವಿಚಂದ್ರನ್ ಅಶ್ವಿನ್, ದೀಪಕ್ ಹೂಡಾ , ದೀಪಕ್ ಚಹಾರ್

ಆಸ್ಟ್ರೆಲಿಯಾ: ಆರೋನ್ ಫಿಂಚ್ (ನಾಯಕ), ಕ್ಯಾಮೆರಾನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇನಿಯಲ್ ಸ್ಯಾಮ್ಸ್, ಶಾನ್ ಅಬಾಟ್, ಪ್ಯಾಟ್ ಕಮ್ಮಿನ್ಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ನಾಥನ್ ಎಲ್ಲಿಸ್, ಕೇನ್ ರಿಚರ್ಡ್ಸನ್, ಆಷ್ಟನ್ ಅಗರ್

Story first published: Saturday, September 24, 2022, 17:40 [IST]
Other articles published on Sep 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X