Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸ್ಟ್ರೇಲಿಯಾ 2ನೇ ಟಿ20: ಟಾಸ್ ಗೆದ್ದ ಭಾರತ, 8 ಓವರ್‌ಗಳಿಗೆ ಪಂದ್ಯ ಸೀಮಿತ: Live ಸ್ಕೋರ್‌

India vs Australia, 2nd T20I, Toss report and playing XI, Nagpur

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯಕ್ಕೆ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೊಸಿಯೇಶನ್‌ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮಳೆಯಿಂದಾಗಿ ಮೈದಾನ ಒದ್ದೆಯಾಗಿದ್ದ ಕಾರಣ ಪಂದ್ಯ ತಡವಾಗಿ ಆರಂಭವಾಗಿದ್ದು ತಲಾ 8 ಓವರ್‌ಗಳ ಪಂದ್ಯ ಇದಾಗಿರಲಿದೆ

ಈ ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆದಿದ್ದು ಈ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿದೆ. ಭರ್ಜರಿ ಬ್ಯಾಟಿಂಗ್ ನಡೆಸಿದ ಹೊರತಾಗಿಯೂ ಭಾರತ ತಂಡ ಬೌಲಿಂಗ್‌ನಲ್ಲಿ ಎಡವಿದ ಕಾರಣದಿಂದಾಗಿ ಭಾರತ ಸೋಲು ಅನುಭವಿಸಬೇಕಾಯಿತು. ಹೀಗಾಗಿ ನಾಗ್ಪುರದಲ್ಲಿ ನಡೆಯುವ ಪಂದ್ಯ ಭಾರತದ ಪಾಲಿಗೆ ಮಹತ್ವದ್ದಾಗಿದ್ದು ಸರಣಿಯಲ್ಲಿ ಜೀವಂತವಾಗುಳಿಯಬೇಕಾದರೆ ಈ ಪಂದ್ಯವನ್ನು ಗೆಲ್ಲಲೇಬೇಕಿದೆ.

Live ಸ್ಕೋರ್‌ಕಾರ್ಡ್ ಹೀಗಿದೆ

1
54736

8 ಓವರ್‌ಗಳ ಪಂದ್ಯ: ಭಾರತದ ಪಾಲಿಗೆ ಮಾಡು ಇಲ್ಲವೇ ಮಡಿಯಂತಾಗಿರುವ ಈ ಪಂದ್ಯ ಮಳೆಯ ಕಾರಣದಿಂದಾಗಿ 8 ಓವರ್‌ಗಳಿಗೆ ಸೀಮಿತವಾಗಿದೆ. ಹೀಗಾಗಿ ಈ ಪಂದ್ಯ ಮತ್ತಷ್ಟು ರೋಚಕವಾಗಿರುವುದರಲ್ಲಿ ಅನುಮಾನವಿಲ್ಲ. ಪಂದ್ಯ ಸುಮಾರು ಒಂದು ಗಂಟೆಗಳ ಕಾಲ ವಿಳಂಭವಾಗಿರುವ ಕಾರಣ 12 ಓವರ್‌ಗಳನ್ನು ಕಡಿತಗೊಳಿಸಿ ಪಂದ್ಯ ಆರಂಭಿಸಲಾಗಿದೆ.

ಟೀಮ್ ಇಂಡಿಯಾ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್
ಬೆಂಚ್: ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ರವಿಚಂದ್ರನ್ ಅಶ್ವಿನ್, ದೀಪಕ್ ಹೂಡಾ, ದೀಪಕ್ ಚಹಾರ್

ಆರನ್ ಫಿಂಚ್ (ನಾಯಕ), ಕ್ಯಾಮೆರಾನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇನಿಯಲ್ ಸ್ಯಾಮ್ಸ್, ಸೀನ್ ಅಬಾಟ್, ಪ್ಯಾಟ್ ಕಮಿನ್ಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಜೋಶ್ ಇಂಗ್ಲಿಸ್, ನಾಥನ್ ಎಲ್ಲಿಸ್, ಕೇನ್ ರಿಚರ್ಡ್ಸನ್, ಆಷ್ಟನ್ ಅಗರ್

Story first published: Friday, September 23, 2022, 21:34 [IST]
Other articles published on Sep 23, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+