David Warner: ಫಾರ್ಮ್ ಕಂಡುಕೊಳ್ಳಲಿದ್ದಾರೆ ಡೇವಿಡ್ ವಾರ್ನರ್: ಅನುಭವಿ ಆಟಗಾರನ ಬೆಂಬಲಕ್ಕೆ ನಿಂತ ನಾಯಕ

ಆಸ್ಟ್ರೇಲಿಯಾದ ಸ್ಟಾರ್ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿ ಟೀಕೆಗೆ ಗುರಿಯಾಗಿದ್ದರು. ವಾರ್ನರ್ ಅವರನ್ನು ಆಡುವ ಬಳಗದಿಮದ ಹೊರಗಿಡಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗತೊಡಗಿದ್ದವು. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ವಾರ್ನರ್ ಬೆಂಬಲಕ್ಕೆ ನಿಂತಿದ್ದು ಅನುಭವಿ ಆಟಗಾರ ಫಾರ್ಮ್ ಕಂಡುಕೊಳ್ಳಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಅಂದಹಾಗೆ ಡೇವಿಡ್ ವಾರ್ನರ್ 2022ನೇ ಕ್ಯಾಲೆಂಡರ್ ವರ್ಷದುದ್ದಕ್ಕೂ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ವಾರ್ನರ್ ಅಮೋಗ ದ್ವಿಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿಯೂ ವಾರ್ನರ್ ಮೇಲೆ ಸಾಕಷ್ಟು ನಿರೀಕ್ಷೆಗಳು ಮೂಡಿತ್ತು. ಆದರೆ ಮೊದಲ ಪಂದ್ಯದಲ್ಲಿಯೇ ವಾರ್ನರ್ ಅತ್ಯಂತ ಕಳಪೆ ಪ್ರದರ್ಶನ ನೀಡುವ ಮೂಲಕ ನಿರಾಸೆ ಅನುಭವಿಸಿದ್ದಾರೆ. ಹೀಗಾಗಿ ವಾರ್ನರ್ ಎರಡನೇ ಟೆಸ್ಟ್‌ನಿಂದ ಹೊರಗುಳಿಯಬೇಕು ಎಂಬ ಅಭಿಪ್ರಾಯಗಳು ಕೇಳಲು ಆರಂಭಿಸಿದ್ದವು.
ಎರಡನೇ ಟೆಸ್ಟ್‌ಗೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ವಾರ್ನರ್ ಫಾರ್ಮ್ ಕಂಡುಕೊಳ್ಳುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ದೆಹಲಿ ಟೆಸ್ಟ್‌ನಲ್ಲಿ ವಾರ್ನರ್ ಆಡಲಿದ್ದಾರೆ ಎಂಬುದನ್ನು ಕೂಡ ಕಮ್ಮಿನ್ಸ್ ಖಚಿತಪಡಿಸಿದ್ದಾರೆ.
"ಖಮಡಿತವಾಗಿಯೂ ವಾರ್ನರ್ ಆಡಲಿದ್ದಾರೆ. ಕಳೆದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಅವರ ಆಟವನ್ನು ನೀವು ನೋಡಿದ್ದೀರಿ. ಎದುರಾಳಿ ವಿರುದ್ಧ ಆತ ಸಂಪೂರ್ಣವಾಗಿ ಒತ್ತಡವನ್ನು ಹೇರಬಲ್ಲರು. ಆತನಿಗೆ ಬೌಲಿಂಗ್ ನಡೆಸುವುದು ಕಠಿಣ. ಇಲ್ಲಿ ಅವರು ನಿಜಕ್ಕೂ ಉತ್ತಮವಾಗಿ ಬ್ಯಾಟಿಂಗ್ ನಡೆಸಿದ್ದಾರೆ. ನಾಯಕನಾಗಿಯು ನನ್ನ ಪಾಲಿಗೆ ಆತ ಅತ್ಯುತ್ತಮ ಆಟಗಾರ" ಎಂದಿದ್ದಾರೆ ಪ್ಯಾಟ್ ಕಮ್ಮಿನ್ಸ್.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶ್ರೀಕರ್ ಭರತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶುಬ್ಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕುಲದೀಪ್ ಯಾದವ್, ಉಮೇಶ್ ಯಾದವ್
ಆಸ್ಟ್ರೇಲಿಯಾ ತಂಡ: ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವ್ ಸ್ಮಿತ್, ಮ್ಯಾಟ್ ರೆನ್ಶಾ, ಪೀಟರ್ ಹ್ಯಾಂಡ್ಸ್ಕಾಂಬ್, ಟಾಡ್ ಮರ್ಫಿ, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಮಿಚೆಲ್ ಸ್ಟಾರ್ಕ್, ಆಷ್ಟನ್ ಅಗರ್, ಮ್ಯಾಥ್ಯೂ ಕುಹ್ನೆಮನ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications