ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ-ಆಸ್ಟ್ರೇಲಿಯಾ ಟೆಸ್ಟ್: ಚತುರ ಆಟ ಪ್ರದರ್ಶಿಸಿದ ಆಸೀಸ್ ಆಟಗಾರರು

India vs Australia, 2nd Test, Day 1 Live Score

ಪರ್ತ್, ಡಿಸೆಂಬರ್ 14: ಅಡಿಲೇಡ್ ಟೆಸ್ಟ್‌ನಲ್ಲಿ ಆತಿಥೇಯ ಆಸ್ಟ್ರೇಲಿಯಾ ಸೋಲಿಸಿ ಇತಿಹಾಸ ನಿರ್ಮಿಸಿರುವ ವಿರಾಟ್ ಕೊಹ್ಲಿ ಬಳಗ ಮತ್ತೊಂದು ಮೈಲಿಗಲ್ಲು ದಾಟುವ ಯೋಜನೆಯಲ್ಲಿದೆ. ಪರ್ತ್ ಸ್ಟೇಡಿಯಂನಲ್ಲಿ ಶುಕ್ರವಾರ (ಡಿಸೆಂಬರ್ 14) ದ್ವಿತೀಯ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ಗೆ ಇಳಿದಿರುವ ಆಸ್ಟ್ರೇಲಿಯಾ ದಿನದಾಟದ ಕೊನೆಗೆ 90 ಓವರ್ ಮುಕ್ತಾಯಕ್ಕೆ 6 ವಿಕೆಟ್ ಕಳೆದು 277 ರನ್ ಪೇರಿಸಿದೆ.

ಸ್ಕೋರ್‌ಕಾರ್ಡ್‌ಗೆ ಕೆಳಗಿನ ಲಿಂಗ್ ಕ್ಲಿಕ್ ಮಾಡಿ

1
43624

ಟಾಸ್ ಗೆದ್ದು ಬ್ಯಾಟಿಂಗ್‌ಗೆ ಇಳಿದ ಆಸೀಸ್‌ಗೆ ಆರಂಭಿಕ ಆಟಗಾರರಾದ ಮಾರ್ಕಸ್ ಹ್ಯಾರಿಸ್ 70, ಆ್ಯರನ್ ಫಿಂಚ್ 50 ರನ್ ಸೇರಿಸಿ ತಂಡಕ್ಕೆ ಬಲ ತುಂಬಿದರು. ಶಾನ್ ಮಾರ್ಷ್ 45, ಟ್ರಾವಿಸ್ ಹೆಡ್ 58 ರನ್ ಕಲೆ ಹಾಕಿದ್ದು ತಂಡದ ಮೊತ್ತ ಹೆಚ್ಚುವಲ್ಲಿ ನೆರವಾಯಿತು.

ಉಸ್ಮಾನ್ ಖವಾಜಾ 5, ಪೀಟರ್ ಹ್ಯಾಂಡ್ಸ್‌ಕಾಂಬ್ 7 ರನ್ ಗಳಿಸಿ ವಿಕೆಟ್ ಒಪ್ಪಿಸಿದರಾದರೂ ಆಸೀಸ್ ಉತ್ತಮ ಸ್ಥಿತಿಯಲ್ಲೇ ಇದೆ. ಟಿಮ್ ಪೇನ್ ಮತ್ತು ಪ್ಯಾಟ್‌ ಕಮಿನ್ಸ್‌ ಕ್ರೀಸ್‌ನಲ್ಲಿದ್ದಾರೆ. ಇಶಾಂತ್ ಶರ್ಮಾ 2, ಆಲ್‌ ರೌಂಡರ್ ಹನುಮ ವಿಹಾರಿ 2 ವಿಕೆಟ್ ಉರುಳಿಸಿ ಭಾರತ ಪರ ಮಿಂಚಿದರು.

ಮೊದಲ ಪಂದ್ಯದಲ್ಲಿ 31 ರನ್ ಜಯ ಸಾಧಿಸಿದ್ದ ಭಾರತ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0ಯ ಮುನ್ನಡೆಯಲ್ಲಿದೆ. ದ್ವಿತೀಯ ಟೆಸ್ಟ್ ನಿಂದ ಭಾರತದ ಪ್ರಮುಖ ಆಟಗಾರರಾದ ಆರ್‌ ಅಶ್ವಿನ್ ಮತ್ತು ರೋಹಿತ್ ಶರ್ಮಾ ಗಾಯದ ಕಾರಣ ಹೊರಗಿದ್ದಾರೆ. ಆದರೂ ಪಂದ್ಯದಲ್ಲಿ ಭಾರತ ಮುನ್ನಡೆಯ ನಿರೀಕ್ಷೆಯಲ್ಲಿದೆ.

ಭಾರತ ತಂಡ : ಲೋಕೇಶ್ ರಾಹುಲ್, ಮುರಳಿ ವಿಜಯ್, ವಿರಾಟ್ ಕೊಹ್ಲಿ (ಸಿ), ಚೇತೇಶ್ವರ ಪೂಜಾರಾ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಬ್ ಪಂತ್ (ವಿಕೆ), ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬೂಮ್ರಾ.

ಆಸೀಸ್ ತಂಡ : ಆ್ಯನ್ ಫಿಂಚ್, ಮಾರ್ಕಸ್ ಹ್ಯಾರಿಸ್, ಉಸ್ಮಾನ್ ಖವಾಜಾ, ಶಾನ್ ಮಾರ್ಷ್, ಪೀಟರ್ ಹ್ಯಾಂಡ್ಸ್ಕಾಂಬ್, ಟ್ರಾವಿಸ್ ಹೆಡ್, ಟಿಮ್ ಪೈನೆ (ಸಿ & ವಿ.ಕೆ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝೆಲ್ವುಡ್.

Story first published: Tuesday, December 18, 2018, 11:52 [IST]
Other articles published on Dec 18, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X