India vs Australia 2nd Test: ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಟೆಸ್ಟ್ ದಾಖಲೆ, ಅಂಕಿ ಅಂಶ ಹೇಗಿದೆ?

ಬಾರ್ಡರ್ ಗವಾಸ್ಕರ್ ಟ್ರೋಫಿಯ ಆರಂಭಿಕ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 132 ರನ್‌ಗಳ ಅಂತರದಿಂದ ಮಣಿಸಿದ ಭಾರತ ತಂಡ ಮತ್ತೊಂದು ಪಂದ್ಯಕ್ಕೆ ಆತ್ಮವಿಶ್ವಾಸದಿಂದ ಸಜ್ಜಾಗಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಮತ್ತೊಮ್ಮೆ ಮೇಲುಗೈ ಸಾಧಿಸುವ ವಿಶ್ವಾಸದಲ್ಲಿದ್ದು ಪ್ರವಾಸಿ ಆಸ್ಟ್ರೇಲಿಯಾ ಭಾರತಕ್ಕೆ ತಿರುಗೇಟು ನೀಡಲು ಎದುರುನೋಡುತ್ತಿದೆ.
ಹೆಡ್ ಟು ಹೆಡ್: ಭಾರತ ಆಸ್ಟ್ರೇಲಿಯಾ ತಂಡಗಳ ನಡುವಿನ ಹೆಡ್‌ಟು ಹೆಡ್ ಅಂಕಿಅಂಶ ಸಾಕಷ್ಟು ಕುತೂಹಲಕಾರಿಯಾಗಿದೆ. ಈ ಎರಡು ತಂಡಗಳು ಕ್ರಿಕೆಟ್‌ನ ಅತ್ಯಂತ ಹಳೇಯ ಹಾಗೂ ಸುದೀರ್ಘ ಮಾದರಿಯಾಗಿರುವ ಟೆಸ್ಟ್ ಕ್ರಿಕೆಟ್‌ನಲ್ಲಿ 103 ಬಾರಿ ಪರಸ್ಪರ ಮುಖಾಮುಖಿಯಾಗಿದೆ. ಇದರಲ್ಲಿ ಏಷ್ಯಾದ ದೈತ್ಯ ತಂಡ ಎನಿಸಿರುವ ಭಾರತ 31 ಬಾರಿ ಗೆದ್ದಿದ್ದರೆ ಆಸ್ಟ್ರೇಲಿಯಾ 43 ಪಂದ್ಯಗಲಲ್ಲಿ ಗೆದ್ದಿದೆ. ಒಂದು ಪಂದ್ಯ ಟೈ ಮತ್ತು 28 ಪಂದ್ಯಗಳು ಡ್ರಾದಲ್ಲಿ ಅಂತ್ಯಕಂಡಿದೆ. ಇನ್ನು ಭಾರತದಲ್ಲಿ ಈ ಎರಡು ತಂಡಗಳು 51 ಬಾರಿ ಮುಖಾಮುಖಿಯಾಗಿದ್ದರೆ 22 ಬಾರಿ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ 13 ಬಾರಿ ಗೆದ್ದಿದೆ. ಒಂದು ಪಂದ್ಯ ಟೈ ಫಲಿತಾಂಶ ಕಂಡಿದ್ದರೆ 15 ಪಂದ್ಯಗಳು ಡ್ರಾ ಫಲಿತಾಂಶ ಕಂಡಿದೆ.
ಅರುಣ್ ಜೇಟ್ಲಿ ಕ್ರೀಡಾಂಗಣದ ದಾಖಲೆ ಹಾಗೂ ಅಂಕಿಅಂಶಗಳು: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಪಿಚ್ ಸ್ಪಿನ್ನರ್‌ಗಳಿಗೆ ಅನುಕೂಲವಾಗುವ ನಿರೀಕ್ಷೆಯಿದೆ. ಈ ಕ್ರೀಡಾಂಗಣದಲ್ಲಿ ಆಡಿರುವ ಕೊನೆಯ ಮೂರು ಟೆಸ್ಟ್ ಪಂದ್ಯಗಳಲ್ಲಿ 96 ವಿಕೆಟ್‌ಗಳ ಪೈಕಿ 66 ವಿಕೆಟ್‌ಗಳನ್ನು ಸ್ಪಿನ್ನರ್‌ಗಳೇ ಪಡೆದುಕೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ. ಟೀಮ್ ಇಂಡಿಯಾ ದೆಹಲಿಯಲ್ಲಿ ಇಲ್ಲಿಯವರೆಗೆ 34 ಟೆಸ್ಟ್ ಪಂದ್ಯಗಳನ್ನು ಆಡಿದ್ದು 13 ಪಂದ್ಯಗಳನ್ನು ಗೆದ್ದಿದ್ದು 6 ಪಂದ್ಯಗಳಲ್ಲಿ ಸೋತಿದೆ. 15 ಪಂದ್ಯಗಳು ಡ್ರಾದಲ್ಲಿ ಅಂತ್ಯಕಂಡಿದೆ. ಇನ್ನು ಆಸ್ಟ್ರೇಲಿಯಾ ವಿರುದ್ಧದ ಏಳು ಪಂದ್ಯಗಳನ್ನು ಇಲ್ಲಿ ಆಡಿದ್ದು ಇದರಲ್ಲಿ ಭಾರತ ಮೂರರಲ್ಲಿ ಗೆದ್ದಿದ್ದು ಒಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದಿದೆ. ಮೂರು ಪಂದ್ಯಗಳು ಡ್ರಾಗೊಂಡಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶ್ರೀಕರ್ ಭರತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶುಬ್ಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕುಲದೀಪ್ ಯಾದವ್, ಉಮೇಶ್ ಯಾದವ್
ಆಸ್ಟ್ರೇಲಿಯಾ ತಂಡ: ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವ್ ಸ್ಮಿತ್, ಮ್ಯಾಟ್ ರೆನ್ಶಾ, ಪೀಟರ್ ಹ್ಯಾಂಡ್ಸ್ಕಾಂಬ್, ಟಾಡ್ ಮರ್ಫಿ, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಮಿಚೆಲ್ ಸ್ಟಾರ್ಕ್, ಆಷ್ಟನ್ ಅಗರ್, ಮ್ಯಾಥ್ಯೂ ಕುಹ್ನೆಮನ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications