For Quick Alerts
ALLOW NOTIFICATIONS  
For Daily Alerts
 

India vs Australia 2nd Test: ದೆಹಲಿ ಟೆಸ್ಟ್ ಪಂದ್ಯದ ಎಲ್ಲಾ ಟಿಕೆಟ್ ಸೋಲ್ಡ್ ಔಟ್!

India vs Australia 2nd Test: Delhi Arun Jaitley Stadium tickets for 2nd test Sold out

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ದೆಹಲಿಯಲ್ಲಿ ಮುಂದಿನ ಶುಕ್ರವಾರದಿಂದ ಆರಂಭವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಸಾಕ್ಷಿಯಾಗಲು ಪ್ರೇಕ್ಷಕರು ತುದಿಗಾಲಲ್ಲಿ ನಿಂತಿದ್ದಾರೆ. ಈ ಪಂದ್ಯಕ್ಕೆ ಸ್ಟೇಡಿಯಂ ಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆಯಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ 2017ರ ಬಳಿಕ ಮೊದಲ ಬಾರಿಗೆ ಟೆಸ್ಟ್ ಪಂದ್ಯಕ್ಕೆ ಆತಿಥ್ಯ ವಹಿಸಿಕೊಂಡಿದೆ. ಹೀಗಾಗಿ ದೆಹಲಿ ಹಾಗೂ ಸುತ್ತಮುತ್ತಲಿನ ಕ್ರಿಕೆಟ್ ಅಭಿಮಾನಿಗಳು ಈ ಪೈಪೋಟಿಯ ಪಂದ್ಯವನ್ನು ವೀಕ್ಷಿಸಲು ಮುಗಿಬಿದ್ದಿದ್ದಾರೆ. ದೆಹಲಿ ಕ್ರೀಡಾಂಗಣದ ಎಲ್ಲಾ ಟಿಕೆಟ್‌ಗಳು ಕೂಡ ಪ್ರಮಾಣದಲ್ಲಿ ಮಾರಾಟವಾಗಿರುವುದಾಗಿ ಡಿಡಿಸಿಎ ಯ ಜೊತೆಕಾರ್ಯದರ್ಶಿ ರಾಜನ್ ಮಾಂಚಂಡ ಮಾಹಿತಿ ನೀಡಿದ್ದಾರೆ.

"ಎಲ್ಲಾ ಟಿಕೆಟ್‌ಗಳು ಕೂಡ ಮಾರಾಟವಾಗಿದ್ದು ಕ್ರೀಡಾಂಗಣ ಭರ್ತಿಯಾಗುವ ನಿರೀಕ್ಷೆಯಿದೆ. ದೆಹಲಿಯಲ್ಲಿ ಸುದೀರ್ಘ ಕಾಲದ ಬಳಿಕ ಟೆಸ್ಟ್ ಪಂದ್ಯ ನಡೆಯುತ್ತಿರುವ ಕಾರಣ ಸಾಕಷ್ಟು ಕುತೂಹಲ ಮೂಡಿಸಿದೆ" ಎಂದು ಡಿಡಿಸಿಎ ಜೊತೆಕಾರ್ಯದರ್ಶಿ ರಾಜನ್ ಮಾಂಚಂಡ ಪಿಟಿಐಗೆ ಮಾಹಿತಿ ನೀಡಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಸುಮಾರು 40000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದೆ.

ಬಾರ್ಡರ್ ಗವಾಸ್ಕರ್ ಟ್ರೋಫಿಯ ಎರಡನೇ ಪಂದ್ಯಕ್ಕಾಗಿ 24000 ಟಿಕೆಟ್‌ಗಳನ್ನು ಮಾರಾಟಕ್ಕೆ ಇಡಲಾಗಿತ್ತು. ಉಳಿದಂತೆ ಸಮಾನ್ಯ ಪ್ರಕ್ರಿಯೆಯಂತೆ 8 ಸಾವಿರ ಟಿಕೆಟ್‌ಗಳನ್ನು ಡಿಡಿಸಿಎ ಸದಸ್ಯರಿಗೆ ಹಂಚಲಾಗಿದೆ. ಉಳೀದ ಸೀಟುಗಳನ್ನು ಪಂದ್ಯವನ್ನು ವೀಕ್ಷಿಸಲು ಆಗಮಿಸುವ ಗೌರವಾನ್ವಿತರಿಗಾಗಿ ಮೀಸಲಿರಿಸಲಾಗಿದೆ. ಒಂದು ಸ್ಟ್ಯಾಂಡನ್ನು ಪಂದ್ಯಕ್ಕೆ ಭದ್ರತೆ ಒದಗಿಸುವ ಸಿಬ್ಬಂದಿಗಳ ಕುಟುಂಬಗಳಿಗೆ ಮೀಸಲಿರಿಸಲಾಗಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ಆಯೋಜನೆಯಾಗಿತ್ತು. ಈ ಪಂದ್ಯವನ್ನು ಭಾರತ ಇನ್ನಿಂಗ್ಸ್ ಹಾಗೂ 132 ರನ್‌ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದೆ. ಈ ಪಂದ್ಯಕ್ಕೆ ಕೂಡ ಪ್ರೇಕ್ಷಕರಿಂದ ಅದ್ಭುತ ಸ್ಪಂದನೆ ದೊರೆತಿತ್ತು.

ನಾಗ್ಪುರ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ 177 ರನ್‌ಗಳನ್ನು ಮಾತ್ರವೇ ಗಳಿಸಲು ಯಶಸ್ವಿಯಾಗಿತ್ತು. ಅದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ಪರವಾಗಿ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದರೆ ಕೆಳ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಅರ್ಧ ಶತಕ ಸಿಡಿಸಿ ತಂಡಕ್ಕೆ ನೆರವಾದರು. ಹೀಗಾಗಿ ಈ ಪಂದ್ಯದಲ್ಲಿ 400 ರನ್‌ಗಳನ್ನು ಗಳಿಸಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಮತ್ತಷ್ಟು ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಆಸ್ಟ್ರೇಲಿಯಾ ತಂಡ ಒಂದೇ ಸೆಶನ್‌ನಲ್ಲಿ ಕೇವಲ 91 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಈ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ ಐದು ವಿಕೆಟ್ ಗೊಂಚಲು ಪಡೆದಿದ್ದರೆ ಎರಡನೇ ಇನ್ನಿಂಗ್ಸ್‌ನಲ್ಲಿ ರವಿಚಂದ್ರನ್ ಅಶ್ವಿನ್ ಐದು ವಿಕೆಟ್ ಕಬಳಿಸಿದ್ದರು.

Story first published: Tuesday, February 14, 2023, 17:41 [IST]
Other articles published on Feb 14, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+